ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ತಾಲೂಕಿಗೆ 400 ಕೋಟಿ ರೂ.ಗೂ ಅಧಿಕ ಅನುದಾನ ತಂದಿರುವ ಶಾಸಕ ಬಿ.ಕೆ. ಸಂಗಮೇಶ್ವರ್ ಅವರು ಇದರ ಭಾಗವಾಗಿ ಹಲವು ಧಾರ್ಮಿಕ ಕೇಂದ್ರಗಳ ಅಭಿವೃದ್ಧಿಗೆ ಚಾಲನೆ ನೀಡಿದ್ದಾರೆ.

ಶಂಕರಘಟ್ಟ ಈಶ್ವರ ದೇವಸ್ಥಾನದ 15 ಲಕ್ಷ ರೂ. ವೆಚ್ಚದ ಸಮುದಾಯ ಭವನದ ಮುಂದುವರೆದ ಕಾಮಗಾರಿಯ ಗುದ್ದಲಿ ಪೂಜೆಯನ್ನು ಶಾಸಕರು ನೆರವೇರಿಸಿದರು.

ಈ ಸಂದರ್ಭದಲ್ಲಿ ತಾಲೂಕು ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರೇಗೌಡ ಮತ್ತು ದೇವಾಲಯದ ಆಡಳಿತ ಮಂಡಳಿ ಹಾಗೂ ಗ್ರಾಮಸ್ಥರು ಇದ್ದರು.

ಇನ್ನು, ಗೋಣಿಬೀಡು ವೀರಭದ್ರೇಶ್ವರ ಸ್ವಾಮಿ ಸಮುದಾಯ ಭವನ ನೆಲ್ಲಿಸರ ಶ್ರೀಮಾರಿಯಮ್ಮ ದೇವಿ ಸಮುದಾಯ ಭವನ ಮಾಳೆನಹಳ್ಳಿ ಶ್ರೀಈಶ್ವರ ಸ್ವಾಮಿ ಸಮುದಾಯ ಭವನ ತಾವರಘಟ್ಟ ಶ್ರೀ ಗಣೇಶ ಸ್ವಾಮಿ ಸಮುದಾಯ ಭವನ ತಾವರಗಟ್ಟೆ ಶ್ರೀ ಬಸವೇಶ್ವರ ಸ್ವಾಮಿ ಸಮುದಾಯ ಭವನ ತಲಾ 15 ಲಕ್ಷ ರೂ. ವೆಚ್ಚದ ಕಾಮಗಾರಿಗಳಿಗೆ ಶಾಸಕರು ಭೂಮಿಪೂಜೆ ನೆರವೇರಿಸಿದರು.

ನೆಲ್ಲಿಸರ ಮಾರಿಯಮ್ಮ ದೇವಿ ದೇವಸ್ಥಾನದ 15 ಲಕ್ಷ ರೂ. ವೆಚ್ಚದ ಸಮುದಾಯ ಭವನದ ಗುದ್ದಲಿ ಪೂಜೆ ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರೇಗೌಡ ಮತ್ತು ದೇವಾಲಯದ ಆಡಳಿತ ಮಂಡಳಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















