ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಮಂಗಳೂರು ವಿದ್ಯುತ್ ಸರಬರಾಜು ಕಂಪನಿಯು ಶಿವಮೊಗ್ಗ ನಗರದ ವಿವಿಧೆಡೆ ಭೂಗತ ಕೇಬಲ್ ಅಳವಡಿಕಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನವೆಂಬರ್ 20 ಮತ್ತು 21 ರಂದು ಬೆಳಗ್ಗೆ 10.00 ರಿಂದ ಸಂಜೆ 5.00ರವರೆಗೆ ನಗರದ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ನವೆಂಬರ್ 20 ರಂದು ನವುಲೆ, ಜೆ.ಎನ್.ಎನ್.ಸಿ., ಅಶ್ವತ್‌ನಗರ, ಜಿ.ಎಸ್.ಟಿ.ಕಚೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮತ್ತು ನವೆಂಬರ್- 21 ರಂದು ಕೃಷಿನಗರ 1 ಮತ್ತು 2ನೇ ಮುಖ್ಯರಸ್ತೆ, ರಾಯಲ್ ಬಡಾವಣೆ, ಅನೂಪ್ ಪಾಟೀಲ್ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪಾನಿ ನಗರ ಉಪವಿಭಾಗ -1ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news








Discussion about this post