ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಹುತ್ತಾಕಾಲೋನಿ ವಾಸಿ ಪ್ರಸ್ತುತ ಬೆಂಗಳೂರಿನ ಕರ್ನಾಟಕ ರಾಜ್ಯ ಸಮಗ್ರ ಶಿಕ್ಷಣ ಇಲಾಖೆಯ ಸಹಾಯಕ ನಿರ್ದೇಶಕಿ ಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಎಸ್. ಗುಣವತಿ ಅವರಿಗೆ ಹಂಪಿ ಕನ್ನಡ ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.
ಗುಣವತಿ ಅವರು, ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಹಾಗೂ ನಾಗೇಶ್ ಹೆಗಡೆ ರವರ ಸಾಹಿತ್ಯದಲ್ಲಿ ಪರಿಸರ ಪ್ರಜ್ಞೆಯ ಸ್ವರೂಪ ಕುರಿತು ಮಂಡಿಸಿದ ಮಹಾ ಪ್ರಬಂಧಕ್ಕೆ ಪಿಎಚ್’ಡಿ ದೊರೆತಿದೆ. ಬಹುಮುಖಿ ನೆಲೆಯಲ್ಲಿ, ತುಲನಾತ್ಮಕ ಅಧ್ಯಯನ ಸ್ವರೂಪದಲ್ಲಿ ವಿಶ್ಲೇಷಿಸುವ ಪ್ರಯತ್ನ ಮಾಡಿದ್ದಾರೆ.
ಗುಣವತಿ ಅವರು ವಿಐಎಸ್’ಎಲ್ ಕಾರ್ಖಾನೆಯ ನಿವೃತ್ತ ಉದ್ಯೋಗಿ, ಕನ್ನಡ ಪರ ಹೋರಾಟಗಾರರು ಹಾಗೂ ಡಾ. ರಾಜಕುಮಾರ್ ಅಭಿಮಾನಿಗಳ ಸಂಘದ ಗೌರವಾಧ್ಯಕ್ಷ ಶಿವಮಾಧು ಅವರ ಪುತ್ರಿಯಾಗಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post