ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಸೊರಬ: ಪತ್ರಕರ್ತ(ಸಿನಿಲಹರಿ) ದೇಶಾದ್ರಿ ಹೊಸ್ಮನೆ ಅವರ ತಂದೆ ಕರಿಯಪ್ಪಹೊಸ್ಮನೆ(72) ಅವರು ಇಂದು ಮುಂಜಾನೆ ಸೊರಬದ ತತ್ತೂರು ವಡ್ಡಿಗೆರೆ ಗ್ರಾಮದಲ್ಲಿ ವಿಧಿವಶರಾಗಿದ್ದಾರೆ.
ಕರಿಯಪ್ಪ ಅವರು ಖ್ಯಾತ ಪತ್ರಕರ್ತ ದೇಶಾದ್ರಿ ಹೊಸ್ಮನೆ ಸೇರಿದಂತೆ ಇಬ್ಬರು ಗಂಡು, ಮೂವ್ವರು ಹೆಣ್ಣುಮಕ್ಕಳು, ಅಪಾರ ಬಂಧುಬಳಗವನ್ನು ಅಗಲಿದ್ದಾರೆ.
ಕರಿಯಪ್ಪ ಅವರ ನಿಧನಕ್ಕೆ ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ತೀವ್ರ ಸಂತಾಪ ಸೂಚಿಸಿದೆ.
ಮೃತರ ಆತ್ಮಕ್ಕೆ ಚಿರಶಾಂತಿ ಮತ್ತು ಅವರ ಕುಟುಂಬ ವರ್ಗಕ್ಕೆ ದುಃಖಭರಿಸುವ ಶಕ್ತಿಯನ್ನು ದೇವರು ದಯಪಾಲಿಸಲೆಂದು ಸಂಘದ ಅಧ್ಯಕ್ಷರಾದ ಕೆ.ವಿ. ಶಿವಕುಮಾರ್, ಪ್ರಧಾನ ಕಾರ್ಯದರ್ಶಿ ವೈದ್ಯ, ರಾಜ್ಯ ಸಮಿತಿ ನಿರ್ದೇಶಕ ಎನ್. ರವಿಕುಮಾರ್, ಕಲ್ಪ ಮೀಡಿಯಾ ಹೌಸ್ ಪ್ರಾರ್ಥಿಸುತ್ತದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post