ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಚಳ್ಳಕೆರೆ: ಲಾರಿಯೊಂದು ಬೈಕ್’ಗೆ ಡಿಕ್ಕಿ ಹೊಡೆದ ಪರಿಣಾಮ ದಂಪತಿಗಳು ಸ್ಥಳದಲ್ಲೇ ಧಾರುಣವಾಗಿ ಸಾವನ್ನಪ್ಪಿರುವ ಘಟನೆ ತಳಕು ಗರಣಿ ಕ್ರಾಸ್ ಬಳಿಯಲ್ಲಿ ನಡೆದಿದೆ.
ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಮೃತರನ್ನು ನಗರಂಗೆರೆ ಗ್ರಾಮದ ದಂಪತಿ ಸುದೀಪ್ (22)ಪತ್ನಿ ಭವ್ಯ (19) ಎಂದು ಗುರುತಿಸಲಾಗಿದೆ.
ದಂಪತಿಗಳು ಚಳ್ಳಕೆರೆಯಿಂದ ಹಿರೇಹಳ್ಳಿ ಕಡೆ ಹೋಗುತ್ತಿದ್ದಾಗ ಅಪರಿಚಿತ ಲಾರಿಯೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ದಂಪತಿಗಳಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದಾರೆ. ದಂಪತಿಗಳು ಆರು ತಿಂಗಳ ಹಿಂದೆ ವಿವಾಹವಾಗಿದ್ದರು ಎಂದು ತಿಳಿದು ಬಂದಿದೆ.
ತಳಕು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
(ವರದಿ: ಸುರೇಶ್ ಬೆಳಗೆರೆ, ಚಳ್ಳಕೆರೆ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news








Discussion about this post