ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ತಮ್ಮ ಕರ್ತವ್ಯ ನಿರ್ವಹಣೆಗಾಗಿ ಮುಖ್ಯಮಂತ್ರಿಗಳ ಚಿನ್ನದ ಪದಕಕ್ಕೆ ಪಾತ್ರರಾಗಿರುವ ನಾಲ್ವರು ಅಧಿಕಾರಿಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ಎಂ. ಶಾಂತರಾಜು ಅವರು ಅಭಿನಂದಿಸಿದ್ದಾರೆ.


ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, 2017 ಮತ್ತು 2018 ನೇ ಸಾಲಿನಲ್ಲಿ ಮಾನ್ಯ ಮುಖ್ಯಮಂತ್ರಿಗಳ ಚಿನ್ನದ ಪದಕ ವಿಜೇತರಾದ ಶಿವಮೊಗ್ಗ ಜಿಲ್ಲಾ ಪೊಲೀಸ್’ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ ಹಾಗೂ ಸಿಬ್ಬಂದಿಗಳವರಿಗೆ ಶುಭ ಹಾರೈಕೆಗಳು. ವೃತ್ತಿ ನೈಪುಣ್ಯತೆಯಲ್ಲಿ ಹಿರಿಮೆ ಸಾಧಿಸಿದ ಎಲ್ಲಾ ಪದಕ ವಿಜೇತರಿಗೆ ಅಭಿನಂದನೆಗಳು ಎಂದಿದ್ದಾರೆ.

ಇನ್ನು, ಚಿನ್ನದ ಪದಕಕ್ಕೆ ಪಾತ್ರರಾಗಿದ್ದ ಜಿಲ್ಲೆಯ ಹಲವು ಪೊಲೀಸ್ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಇಂದು ಬೆಂಗಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪದಕ ಸ್ವೀಕರಿಸಿದ್ದಾರೆ.

ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ, ಜಿಲ್ಲಾ ಹೆಚ್ಚುವರಿ ಅಧೀಕ್ಷಕರಾದ ಡಾ. ಎಚ್.ಟಿ. ಶೇಖರ್, ಸಿಇಎನ್ ಪೊಲೀಸ್ ನಿರೀಕ್ಷಕ ಕೆ.ಟಿ. ಗುರುರಾಜ್, ದೊಡ್ಡಪೇಟೆ ಪೊಲೀಸ್ ಠಾಣೆಯ ಎಎಸ್‌ಐ ಅಂಥೋನಿ, ಪೊಲೀಸ್ ಕಾನ್ಸಟೇಬಲ್ ಇಂದ್ರೇಶ್, ಗುಪ್ತವಾರ್ತೆ ಇಲಾಖೆಯ ಶಿವಸ್ವಾಮಿ, ಹಾಗೂ ಕಾಮತ್ ಇವರುಗಳು ಮುಖ್ಯಮಂತ್ರಿಗಳ ಚಿನ್ನದ ಪದಕ ಸ್ವೀಕರಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
















