ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಸಾಗರ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ದೀನ್ ದಯಾಳ್ ಉಪಾಧ್ಯಾಯ ಗ್ರಾಮಜ್ಯೋತಿ ಯೋಜನೆಯಲ್ಲಿ ವ್ಯಾಪಕ ಅವ್ಯವಹಾರ ನಡೆದಿದೆ ಎಂದು ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಎಂಎಸ್’ಐಎಲ್ ಅಧ್ಯಕ್ಷ, ಶಾಸಕ ಹರತಾಳು ಹಾಲಪ್ಪ ಅಧಿಕಾರಿಗಳ ವಿರುದ್ಧ ಗರಂ ಆಗಿದ್ದಾರೆ.
ಮೆಸ್ಕಾಂ ಅಧಿಕಾರಿಗಳೊಂದಿಗೆ ಈ ಕುರಿತಂತೆ ಸಭೆ ನಡೆಸಿ ಮಾತನಾಡಿದ ಅವರು, ದೀನ್ ದಯಾಳ್ ಉಪಾಧ್ಯಾಯ ಗ್ರಾಮಜ್ಯೋತಿ ಯೋಜನೆಯಲ್ಲಿ ವ್ಯಾಪಕ ಅವ್ಯವಹಾರ ನಡೆದಿದೆ ಎಂದು ಆರೋಪ ಕೇಳಿಬಂದಿರುವ ಕುರಿತಾಗಿ ಇಲಾಖೆಯ ಅಧಿಕಾರಿಗಳ ವಿರುದ್ಧ ಹರಿಹಾಯ್ದರು.
ಹಗರಣದ ಬಗ್ಗೆ ಮಾಹಿತಿ ಪಡೆದು, ಮೆಸ್ಕಾಂ ಎಂಡಿಯವರಿಗೆ ಕರೆಮಾಡಿ, ಬಿಪಿಎಲ್ ಹಾಗೂ ಅದಕ್ಕಿಂತ ಬಡತನದಲ್ಲಿರುವ ಕುಟುಂಬಕ್ಕೆ ನೀಡುವ ಅಮೂಲ್ಯ ಯೋಜನೆ ಪರಿಣಾಮಕಾರಿಯಾಗಿ ಅನುಷ್ಠಾನವಾಗಿಲ್ಲ. ಗುತ್ತಿಗೆದಾರರು ಹಾಗೂ ಅಧಿಕಾರಿಗಳು ನೀಡಿರುವ ಪಟ್ಟಿ ತಾಳೆ ಆಗುತ್ತಿಲ್ಲ, ಫಲಾನುಭವಿಗಳಲ್ಲದ ನಕಲಿ ಹೆಸರುಗಳನ್ನು ಸೇರ್ಪಡೆ ಮಾಡಿ ಬಿಲ್ ಪಡೆಯಲು ಯತ್ನಿಸಿರುವ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದರು.
ಸ್ವಚ್ಛತಾ ಅರಿವು
ಸಾಗರ ನಗರಸಭೆ ವ್ಯಾಪ್ತಿಯ ವಿಜಯನಗರದಲ್ಲಿ ಸ್ವಚ್ಛತಾ ಆಂದೋಲನದ ಸಪ್ತಾಹ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಸ್ವಚ್ಛತಾ ಅರಿವು ಮೂಡಿಸುವ ಬಿತ್ತಿಪತ್ರಗಳನ್ನು ಶಾಸಕರು ವಿತರಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news










Discussion about this post