ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕು ಗೊದ್ದನಕೊಪ್ಪ-ಸಾಮಾನ್ಯ ಅಭ್ಯರ್ಥಿ (ಗ್ರಾಮೀಣ) ಮತ್ತು ಹೊಸನಗರ ತಾಲೂಕು ನಗರ (ಮೂಡುಗೊಪ್ಪ)-ಸಾಮಾನ್ಯ ಅಭ್ಯರ್ಥಿ ಗ್ರಾಮ ಪಂಚಾಯತಿ ಗ್ರಂಥಾಲಯಗಳಿಗೆ ಮೇಲ್ವಿಚಾರಕರನ್ನು ಮಾಸಿಕ ರೂ. 7,000/- ಗಳ ಗೌರವ ಸಂಭಾವನೆ ಆಧಾರದ ಮೇಲೆ ನೇಮಕಾತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ.
ಆಸಕ್ತ ಅಭ್ಯರ್ಥಿಗಳು ಕನಿಷ್ಠ ಎಸ್’ಎಸ್’ಎಲ್’ಸಿ ಪಾಸಾಗಿದ್ದು, ಆಯಾ ಪಂಚಾಯತಿಗಳ ಸ್ಥಳೀಯ ನಿವಾಸಿಗಳಾಗಿದ್ದು, ಗ್ರಾಪಂಗಳು ನಿಗಧಿಪಡಿಸಿದ ಮೀಸಲಾತಿಗೆ ಸೇರಿದ ಅಭ್ಯರ್ಥಿಗಳು ನಿಗದಿತ ನಮೂನೆ ಅರ್ಜಿಯನ್ನು ಆಯಾ ಪಂಚಾಯತಿ ಕಚೇರಿಯಿಂದ ಪಡೆದು ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಡಿಸೆಂಬರ್ 14 ರೊಳಗಾಗಿ ಸಲ್ಲಿಸುವುದು.
ಮಾಹಿತಿಗಾಗಿ ಸಂಬಂಧಿಸಿದ ಗ್ರಾಪಂ ಕಾರ್ಯಾಲಯ ಅಥವಾ ಉಪನಿರ್ದೇಶಕರ ಕಚೇರಿ ದೂ.ಸಂ.: 08182-222905, ಜಿಲ್ಲಾ ಕೇಂದ್ರ ಗ್ರಂಥಾಲಯ, ಶಿವಮೊಗ್ಗ ಇವರನ್ನು ಸಂಪರ್ಕಿಸುವುದು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post