ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಕಾರ್ತಿಕ ಹುಣ್ಣಿಮೆ ಅಂಗವಾಗಿ ಸೋಮವಾರ ಹಳೇನಗರದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯದಲ್ಲಿ ದೀಪೋತ್ಸವ ನಡೆಯಿತು.
ನಿನ್ನೆ ಮುಂಜಾನೆಯಿಂದಲೇ ಮೂಲ ದೇವರಿಗೆ ವಿಶೇಷ ಅಭಿಷೇಕ, ಪೂಜೆ, ಧಾರ್ಮಿಕ ವಿಧಿವಿಧಾನಗಳು ನೆರವೇರಿಸಲಾಯಿತು.

ಸಂಜೆ ದೇವಾಲಯದ ಆವರಣದಲ್ಲಿ ಪಲ್ಲಕ್ಕಿ ಉತ್ಸವ, ಕಾರ್ತಿಕ ದೀಪೋತ್ಸವ ನಡೆಸಲಾಯಿತು. ಕಾರ್ತಿಕ ಹುಣ್ಣಿಮೆ ಅಂಗವಾಗಿ ಚೊಕ್ಕ ಸುಡಲಾಯಿತು.
ಅರ್ಚಕರಾದ ಶ್ರೀನಿವಾಸ್ ಅವರ ನೇತೃತ್ವದಲ್ಲಿ ಪೂಜಾ ವಿಧಿವಿಧಾನಗಳು ನಡೆದವು.
ಪ್ರಮುಖರಾದ ನರಸಿಂಹಾಚಾರ್, ರಮಾಕಾಂತ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















