ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಬೈಪಾಸ್ ರಸ್ತೆಯ ಸಿದ್ದಾಪುರದ ಬಳಿಯಲ್ಲಿ ಇಂದು ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಗೋವಾದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕಾರು ಸಿದ್ದಾಪುರದ ಬಳಿಯಲ್ಲಿ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ರಾಜೇಶ್ ಹಾಗೂ ತರುಣ್ ಎನ್ನುವವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಉಳಿದಂತೆ ಆರು ಮಂದಿಗೆ ತೀವ್ರವಾದ ಗಾಯಗಳಾಗಿದ್ದು, ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇವರೆಲ್ಲ ಬೆಂಗಳೂರಿನವರಾಗಿದ್ದು, ಗೋವಾ ಪ್ರವಾಸ ಮುಗಿಸಿ ಬೆಂಗಳೂರಿಗೆ ವಾಪಸಾಗುವ ವೇಳೆ ಈ ದುರ್ಘಟನೆ ನಡೆದಿದೆ.
ಸ್ಥಳಕ್ಕೆ ಭದ್ರಾವತಿ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















