ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಅಹಿತಕರ ಘಟನೆ ಹಿನ್ನೆಲೆಯಲ್ಲಿ ನಗರದಲ್ಲಿ ಜಾರಿಗೊಳಿಸಲಾಗಿರುವ 144ನೆಯ ಸೆಕ್ಷನ್ ನಿಷೇಧಾಜ್ಞೆಯನ್ನು ಡಿ.9ರವರೆಗೂ ವಿಸ್ತರಣೆ ಮಾಡಲಾಗಿದೆ.
ಈ ಕುರಿತಂತೆ ಆದೇಶ ಹೊರಡಿಸಿರುವ ತಾಲೂಕು ದಂಡಾಧಿಕಾರಿಗಳೂ ಆಗಿರುವ ತಹಶೀಲ್ದಾರ್ ನಾಗರಾಜ್ ಅವರು, ಶಿವಮೊಗ್ಗ ನಗರದಾದ್ಯಂತ ಡಿ.9ರ ಮುಂಜಾನೆ 10 ಗಂಟೆಯವರೆಗೂ ನಿಷೇಧಾಜ್ಞೆಯನ್ನು ಮುಂದುವರೆಸಲಾಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಈ ಕ್ರಮ ಕೈಗೊಂಡಿರುವುದಾಗಿ ಹೇಳಿದ್ದಾರೆ.
ಬಜರಂಗದಳದ ಕಾರ್ಯಕರ್ತನ ಮೇಲೆ ಹಲ್ಲೆ ನಡೆದ ಹಿನ್ನೆಲೆಯಲ್ಲಿ ಶಿವಮೊಗ್ಗದಲ್ಲಿ ಗಲಾಟೆ ಆರಂಭಗೊಂಡಿತ್ತು. ಸಂಭವನೀಯ ಅಹಿತಕರ ಘಟನೆಯನ್ನು ತಡೆಯುವ ಉದ್ದೇಶದಿಂದ ಡಿ.3ರಿಂದ ಸೆಕ್ಷನ್ ಜಾರಿಗೊಳಿಸಲಾಗಿದೆ.
ಪೊಲೀಸ್ ಇಲಾಖೆ ಕೈಗೊಂಡಿರುವ ಬಿಗಿ ಕ್ರಮದಿಂದಾಗಿ ನಗರದಲ್ಲಿ ಯಾವುದೇ ರೀತಿಯ ದೊಡ್ಡಮಟ್ಟದ ಅಹಿತಕರ ಘಟನೆಗಳು ನಡೆದಿಲ್ಲ. ಸೆಕ್ಷನ್ ಜಾರಿಯಿಂದಾಗಿ ಜನರಿಗೆ ಒಂದಷ್ಟು ತೊಂದರೆಯಾಗಿದ್ದರೂ ಸಹ ಕಾನೂನು ಸುವ್ಯವಸ್ಥೆ ಕಾಪಾಡಿ, ಶಾಂತಿ ಕಾಪಾಡುವ ದೃಷ್ಠಿಯಿಂದ ಜಿಲ್ಲಾಡಳಿತ, ತಾಲೂಕು ಆಡಳಿತ ಹಾಗೂ ಪೊಲೀಸ್ ಇಲಾಖೆ ಕೈಗೊಂಡ ಕ್ರಮ ಅನಿವಾರ್ಯವಾದುದು.









Discussion about this post