ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಪೊಲೀಸ್ ಇಲಾಖೆಗೆ ಸೇರಿದ ಕಾರೊಂದು ಟಿವಿಎಸ್’ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಗೋಪಾಳ ಕಡೆಯಿಂದ ಬಂದ ಟಿವಿಎಸ್’ಗೆ ಬೆಂಗಳೂರಿನ ಸಿಐಡಿ ಅಧಿಕಾರಿ ಭೀಮಾ ಶಂಕರ್ ಗುಳೇದ್ ಅವರ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ದ್ವಿಚಕ್ರ ವಾಹನದಲ್ಲಿದ್ದ ಇಬ್ಬರಿಗೆ ಗಾಯಗಳಾಗಿದ್ದು ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಡಿಕ್ಕಿಯಾದ ತತಕ್ಷಣವೇ ಸ್ಪಂದಿಸಿದ ಗುಳೇದ್ ಅವರು, ಗಾಯಾಳುಗಳನ್ನು ಸಾರ್ವಜನಿಕರ ಸಹಕಾರದೊಂದಿಗೆ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post