ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ವಿಶ್ವಕರ್ಮ ವಿವಿದೋದ್ದೇಶ ಸಹಕಾರಿ ನಿಯಮಿತದ ನೂತನ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತ, ಶಿವಮೊಗ್ಗ ಟೈಮ್ಸ್ ಪತ್ರಿಕೆಯ ಸಂಪಾದಕ ಚಂದ್ರಕಾಂತ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಆಯ್ಕೆ ಸಂಬಂಧ ಚುನಾವಣೆ ಪ್ರಕ್ರಿಯೆಗಳು ನಡೆದಿದ್ದು, ಚಂದ್ರಕಾಂತ್ ಅವರು ಒಮ್ಮತದಿಂದ, ಅವರೋಧವಾಗಿ ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ಸಿ.ಪಿ. ಶಿವಕುಮಾರಾಚಾರಿ ಆಯ್ಕೆಯಾಗಿದ್ದಾರೆ.
ಚುನಾವಣಾಧಿಕಾರಿಯಾಗಿ ಟಿ.ವಿ. ಪ್ರಕಾಶ್ ಅವರು ಕರ್ತವ್ಯ ನಿರ್ವಹಿಸಿದರು. ಈ ಸಂದರ್ಭದಲ್ಲಿ ಸೊಸೈಟಿಯ ನಿರ್ದೇಶಕರು ಹಾಗೂ ಸಿಬ್ಬಂದಿ ವರ್ಗ ನೂತನ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಿಗೆ ಶುಭ ಹಾರೈಸಿತು.










Discussion about this post