ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಂಕರಘಟ್ಟ: ಕುವೆಂಪು ವಿಶ್ವವಿದ್ಯಾಲಯದ 40ಕ್ಕೂ ಅಧಿಕ ಸ್ನಾತಕೋತ್ತರ ಪದವಿ ಕೋರ್ಸ್‌ಗಳಿಗೆ ಡಿಸೆಂಬರ್ 18, 19 ಮತ್ತು 21ರಂದು ಪ್ರವೇಶಾತಿ ಕೌನ್ಸಿಲಿಂಗ್ ನಡೆಸಲಾಗುವುದು ಎಂದು ವಿವಿ ತಿಳಿಸಿದೆ.
ವಿಶ್ವವಿದ್ಯಾಲಯದ ಮುಖ್ಯ ಆವರಣ, ಕಡೂರು ಪಿಜಿ ಕೇಂದ್ರ ಮತ್ತು 20ಕ್ಕೂ ಹೆಚ್ಚು ಸ್ನಾತಕೋತ್ತರ ಕಾಲೇಜುಗಳ ಎಲ್ಲಾ 33 ವಿಭಾಗಗಳ 45 ಕೋರ್ಸ್‌ಗಳಿಗೆ ಡಿಸೆಂಬರ್ 18-19 ರಂದು ಹಾಗೂ 21ರಂದು ಪ್ರವೇಶಾತಿ ಕೌನ್ಸಿಲಿಂಗ್ ಹಮ್ಮಿಕೊಳ್ಳಲಾಗಿದೆ. ಸಂಪೂರ್ಣ ಪ್ರವೇಶಾತಿಯನ್ನು ಈ ಮೂರು ದಿನಗಳಲ್ಲಿಯೇ ಮಾಡಿ ಮುಗಿಸಲು ವಿವಿ ಯೋಜಿಸಿದೆ.
18 ಮತ್ತು 19ರಂದು ಮೆರಿಟ್ ಸೀಟುಗಳು ಮತ್ತು ವೆಯ್ಟಿಂಗ್ ಪಟ್ಟಿಯ ಅಭ್ಯರ್ಥಿಗಳಿಗೆ ಪ್ರವೇಶಾತಿ ಪ್ರಕ್ರಿಯೆ ನಡೆಯಲಿದ್ದು, ಸೋಮವಾರ 21 ರಂದು ಉಳಿಕೆ ಸೀಟುಗಳು, ಪೇಮೆಂಟ್ ಮತ್ತು ಇತರೆ ಕೋಟಾಗಳ ಸೀಟುಗಳಿಗೆ ಪ್ರವೇಶಾತಿ ನಡೆಯಲಿದೆ. ವಿವಿಧ ವಿಭಾಗಗಳಿಗೆ ಅರ್ಜಿ ಹಾಕಿರುವ ವಿದ್ಯಾರ್ಥಿಗಳು 18ರಂದು ಬೆಳಿಗ್ಗೆ 9.30ಕ್ಕೆ ಅಗತ್ಯ ದಾಖಲೆಗಳೊಂದಿಗೆ ವಿವಿಯ ಜ್ಞಾನ ಸಹ್ಯಾದ್ರಿ ಆವರಣಕ್ಕೆ ಆಗಮಿಸಬೇಕು ಎಂದು ವಿವಿ ಸೂಚಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post