ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಗ್ರಾಮ ಪಂಚಾಯ್ತಿ ಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಹಂಚಲು ತೋಟದ ಮನೆಯೊಂದರಲ್ಲಿ ಸಂಗ್ರಹಿಸಿದ್ದ ಸುಮಾರು 200 ಕುಕ್ಕರ್’ಗಳನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಬಿದಿರೆ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಕಣಕ್ಕಿಳಿದಿರುವ ಧರ್ಮೇಂದ್ರ ಅವರಿಗೆ ಸೇರಿದ ತೋಟದ ಮನೆಯ ಮೇಲೆ ಚುನಾವಣಾಧಿಕಾರಿಗಳು ದಾಳಿ ನಡೆಸಿದ್ದು, ಇಲ್ಲಿ ಸಂಗ್ರಹಿಸಲಾಗಿದ್ದ 200 ಕುಕ್ಕರ್’ಗಳನ್ನು ವಶಕ್ಕೆ ಪಡೆದಿದ್ದಾರೆ.
ಇಲ್ಲಿ ಸಂಗ್ರಹಿಸಿ ಇರಿಸಲಾಗಿರುವ ಕುಕ್ಕರ್ ಬಾಕ್ಸ್’ಗಳ ಮೇಲೆ ಧರ್ಮೇಂದ್ರ ಅವರ ಭಾವಚಿತ್ರವಿರುವ ಪೋಸ್ಟರ್’ಗಳನ್ನು ಅಂಟಿಸಲಾಗಿದೆ.

ಗ್ರಾಮಾಂತರ ಹಾಗೂ ಅಬಕಾರಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















