ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ನವದೆಹಲಿ: ಕೊರೋನಾ ವೈರಸ್ ಈಗಾಗಲೇ ದೇಶ ವಾಸಿಗಳನ್ನು ಇನ್ನಿಲ್ಲದಂತೆ ಕಾಡುತ್ತಿರುವ ಬೆನ್ನಲ್ಲೇ ಕೊರೋನಾ ಮಾದರಿಯ ಮಾರಕ ಹೊಸ ಸೋಂಕು ಭಾರತಕ್ಕೂ ವಕ್ಕರಿಸಿದ್ದು, ದೇಶದಾದ್ಯಂತ ಆತಂಕಕ್ಕೆ ಕಾರಣವಾಗಿದೆ.

ಬ್ರಿಟನ್’ನಲ್ಲಿ ಭಾರೀ ಆತಂಕ ಸೃಷ್ಠಿಸಿರುವ ಈ ನೂತನ ಸೋಂಕು ಇಂಗ್ಲೆಂಡಿನಿಂದ ಚೆನ್ನೈಗೆ ಆಗಮಿಸಿರುವ ಪ್ರಯಾಣಿಕರೊಬ್ಬರಲ್ಲಿ ದೃಢಪಟ್ಟಿದೆ. ಸೋಂಕಿತ ಪ್ರಯಾಣಿಕರನ್ನು ಗಿಂಡಿಯ ಕಿಂಗ್ ಇನ್‌ಸ್ಟಿಟ್ಯೂಟ್‌ನಲ್ಲಿರುವ ವಿಶೇಷ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕುರಿತಂತೆ ಮಾತನಾಡಿರುವ ಆರೋಗ್ಯ ಕಾರ್ಯದರ್ಶಿ ಜೆ. ರಾಧಾಕೃಷ್ಣನ್, ಪ್ರಯಾಣಿಕರ ಮಾದರಿಗಳನ್ನು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿ, ಪುಣೆಗೆ ಕಳುಹಿಸಲಾಗಿದ್ದು, ವ್ಯಕ್ತಿಗೆ ಹೊಸ ಮಾದರಿಯ ಕೊರೋನಾ ಸೋಂಕು ತಗುಲಿರುವ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ. ಕಳೆದ 10 ದಿನಗಳಲ್ಲಿ ಬ್ರಿಟನ್’ನಿಂದ ರಾಜ್ಯಕ್ಕೆ ಆಗಮಿಸಿದ ಎಲ್ಲಾ ಪ್ರಯಾಣಿಕರನ್ನು ಪತ್ತೆ ಹಚ್ಚುವ ಕಾರ್ಯವನ್ನು ಈಗಾಗಲೇ ಆರೋಗ್ಯ ಇಲಾಖೆ ಆರಂಭಿಸಿದೆ ಎಂದಿದ್ದಾರೆ.
ಈ ಕೊರೋನಾ ರೂಪಾಂತರ ಸೋಂಕು ಲಕ್ಷಣರಹಿತವಾಗಿದ್ದು, ಜನರು ಆತಂಕಕ್ಕೆ ಒಳಗಾಗಬಾರದು. ಇದು ಹರಡದಂತೆ ಸರ್ಕಾರ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
















