ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ರಾಜ್ಯದಲ್ಲಿ ನಿನ್ನೆ ಜಾರಿಗೊಳಿಸಲಾಗಿದ್ದ ನೈಟ್ ಕರ್ಫ್ಯೂವನ್ನು ರಾಜ್ಯ ಸರ್ಕಾರ ಇಂದು ಹಿಂಪಡೆದುಕೊಂಡಿದೆ.
ಈ ಕುರಿತಂತೆ ರಾಜ್ಯ ಸರ್ಕಾರ ಏಕಾಏಕಿ ನಿರ್ಧಾರ ಕೈಗೊಂಡು, ನಿನ್ನೆ ಜಾರಿಗೊಳಿಸಲಾಗಿದ್ದ ರಾತ್ರಿ ಕರ್ಫ್ಯೂವನ್ನು ಇಂದಿನಿಂದಲೇ ಜಾರಿಗೆ ಬರುವಂತೆ ರದ್ದು ಮಾಡಿದೆ.

ಕೋವಿಡ್ ಹಿನ್ನೆಲೆಯಲ್ಲಿ 10 ದಿನಗಳ ಅವಧಿಗೆ ನೈಟ್ ಕಫ್ಯೂವನ್ನು ಜಾರಿಗೊಳಿಸಲಾಗಿತ್ತು. ಆದರೆ, ಸಾರ್ವಜನಿಕ ವಲಯದಿಂದ ಭಾರೀ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಇಂದು ತನ್ನ ನಿರ್ಧಾರವನ್ನು ಸರ್ಕಾರ ಬದಲಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















