ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಚಿತ್ರದುರ್ಗ: ಮತದಾನದ ಬಳಿಕ ಮನೆಗೆ ತೆರಳುತ್ತಿದ್ದ ವೇಳೆ ವೃದ್ದೆಯೊಬ್ಬರು ಹೃದಯಾಘಾತದಿಂದ ಅಸುನೀಗಿರುವ ಘಟನೆ ಜಿಲ್ಲೆಯ ಹಿರಿಯೂರು ತಾಲೂಕಿನ ಬಿರೇನಹಳ್ಳಿಯಲ್ಲಿ ನಡೆದಿದೆ.
ಹೃದಯಾಘಾತದಿಂದ ಬಿರೇನಹಳ್ಳಿಯ ವೃದ್ಧೆ ಸರೋಜಮ್ಮ(92) ಸಾವನ್ನಪ್ಪಿದ್ದಾರೆ.

ನಿನ್ನೆ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಸರೋಜಮ್ಮ ತಮ್ಮ ಮತಚಲಾಯಿಸಿ ಮನೆಗೆ ತೆರಳುವ ವೇಳೆ ತೀವ್ರ ಹೃದಯಾಘಾತ ಸಂಭವಿಸಿದೆ. ಆಕೆ ತಮ್ಮ ಮೊಮ್ಮಗನ ಜೊತೆ ತೆರಳಿ ಮತ ಚಲಾವಣೆ ಮಾಡಿದ್ದರು ಎಂದು ತಿಳಿದುಬಂದಿದೆ.
(ವರದಿ: ಸುರೇಶ್ ಬೆಳಗೆರೆ, ಚಳ್ಳಕೆರೆ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















