No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Saturday, April 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ರೈಲು ಸಂಚಾರದ ಮೇಲೆ ಪರಿಣಾಮ ಬೀರದ “ರೈಲ್ ಬಂದ್” ಚಳುವಳಿ:  ಎಂದಿನಂತೆ ಸಂಚಾರ: ಬಿಗಿ ಭದ್ರತೆ 

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 15, 2016
in ಬೆಂಗಳೂರು ನಗರ
0
Share on FacebookShare on TwitterShare on WhatsApp
ಬೆಂಗಳೂರು, ಸೆ.15: ಕಾವೇರಿ ವಿವಾದದಲ್ಲಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪು ಖಂಡಿಸಿ ಕರೆ ನೀಡಲಾಗಿದ್ದ ರೈಲು ಬಂದ್ ಚಳುವಳಿ  ವಿಫಲಗೊಂಡಿದೆ. ಅಲ್ಲಲ್ಲಿ ರೈಲು ತಡೆದು ಪ್ರತಿಭಟನೆ ನಡೆಸಿದ್ದು ಬಿಟ್ಟರೆ, ರೈಲು ಸಂಚಾರದ ಮೇಲೆ ಯಾವುದೇ ಪರಿಣಾಮ ಬೀರಲಿಲ್ಲ.
ಎಂದಿನಂತೆ ರೈಲುಗಳು ಸಂಚಾರ ನಡೆದವು. ರೈಲ್ ಬಂದ್ ಚಳವಳಿ ಹಿನ್ನಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ರೈಲು ನಿಲ್ದಾಣಗಳಲ್ಲಿ ಭಾರೀ ಭದ್ರತೆ ನಿಯೋಜಿಸಲಾಗಿತ್ತು.
ಭದ್ರತೆ ನಡುವೆಯೂ ಕೆಲವೆಡೆ ರೈಲು ನಿಲ್ದಾಣಕ್ಕೆ ಮುತ್ತಿಗೆಗೆ ಯತ್ನಿಸಲಾಯಿತಾದರೂ, ಪೊಲೀಸರು ಪ್ರತಿಭಟನಾಕಾರರ ಪ್ರಯತ್ನವನ್ನು ವಿಫಲಗೊಳಿಸಿದರು. ಇನ್ನು ರೈಲು ಬಂದ್ ನಿಂದ ಪ್ರಯಾಣಿಕರ ಮೇಲೆ ಯಾವುದೇ ಪರಿಣಾಮ ಬೀರಿಲ್ಲ ಎಂದೇ ಹೇಳಬಹುದು.
ಈ ಮಧ್ಯೆ ಕನ್ನಡಪರ ಸಂಘಟನೆಗಳು ರಾಜ್ಯಾದ್ಯಂತ ನಡೆಸಿದ ರೈಲು ಬಂದ್ ಚಳವಳಿ ಸಂದರ್ಭದಲ್ಲಿ 210 ಕ್ಕೂ ಹೆಚ್ಚು ಕಾರ್ಯಕರ್ತರನ್ನು  ಬಂಧಿಸಲಾಗಿದ್ದು, ರಾಜಧಾನಿ ಒಂದರಲ್ಲೇ 54 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ.
ಕೆಲವೆಡೆ ಮಾತ್ರ ಕೆಲ ನಿಮಿಷಗಳ ಕಾಲ ರೈಲು ಸಂಚಾರದಲ್ಲಿ ವ್ಯತ್ಯಯವಾಯಿತು ಎಂಬುದು ಬಿಟ್ಟರೆ ಯಾವುದೇ ಘಟನೆ ನಡೆದಿಲ್ಲ. ಪ್ರತಿಭಟನಾಕಾರರು ರಾಜ್ಯದ ವಿವಿಧೆಡೆ ರೈಲು ತಡೆಯಲು ಯತ್ನಿಸಿದ ಸಂದರ್ಭದಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದ ಪ್ರಸಂಗವೂ ನಡೆಯಿತು.
ಸುಪ್ರೀಂಕೋರ್ಟ್ ತೀರ್ಪು ಖಂಡಿಸಿ ಬೆಂಗಳೂರಿನಲ್ಲಿ ನಡೆದ ಹಿಂಸಾಚಾರ ಘಟನೆಯಿಂದ ಎಚ್ಚೆತ್ತ ಪೊಲೀಸರು ರೈಲ್ ಬಂದ್ ಚಳವಳಿಗೆ ಭಾರೀ ಬಂದೋಬಸ್ತ್ ಕೈಗೊಂಡಿದ್ದರಿಂದ ಯಾವುದೇ ಅಹಿತಕರ ಘಟನೆಗಳು ನಡೆಯಲಿಲ್ಲ.
ಬೆಂಗಳೂರು, ಮೈಸೂರು, ಮಂಡ್ಯ, ಹುಬ್ಬಳ್ಳಿ, ಧಾರವಾಡ, ಕೋಲಾರ ಸೇರಿದಂತೆ ಬೆಳಗ್ಗೆ ಎಂದಿನಂತೆ ರೈಲು ಸಂಚಾರ ನಡೆಯಿತಾದರೂ ಮಧ್ಯಾಹ್ನ 11 ಗಂಟೆ ಸುಮಾರಿಗೆ ಪ್ರತಿಭಟನಾಕಾರರು ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣ, ಯಶವಂತಪುರ ರೈಲ್ವೆ ನಿಲ್ದಾಣ, ಕಂಟೋನ್ಮೆಂಟ್ ಮುಂತಾದೆಡೆ ರೈಲು ತಡೆ ಮಾಡಲು ಯತ್ನಿಸಿದ ಸಂದರ್ಭದಲ್ಲಿ  ಪೊಲೀಸರು ಬಲಪ್ರಯೋಗಿಸಿ ನೂರಾರು ಪ್ರತಿಭಟನಾಕಾರರನ್ನು ಬಂಧಿಸಿದರು.
ರೈಲ್ ಬಂದ್ ಗೆ ಕರೆ ನೀಡಿದ್ದ ಕನ್ನಡ ಒಕ್ಕೂಟದ ಅಧ್ಯಕ್ಷ, ಕನ್ನಡ ಚಳವಳಿ ವಾಟಾಳ್ ಪಕ್ಷದ ಮುಖಂಡ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು, ಕನ್ನಡ ಸೇನೆಯ ಕುಮಾರ್, ಕರವೇ ಶಿವರಾಮೇಗೌಡ, ಪ್ರವೀಣ್ಕುಮಾರ್ಶೆಟ್ಟಿ, ಸಾರ್ವಜನಿಕ ಜಾಗೃತಿ ವೇದಿಕೆಯ ಮಂಜುನಾಥ್ ದೇವು, ಗಿರಿಗೌಡ ಸೇರಿದಂತೆ ಹಲವು ಕನ್ನಡಪರ ಸಂಘಟನೆಗಳ ಅಪಾರ ಕಾರ್ಯಕರ್ತರು ಮೈಸೂರು ಬ್ಯಾಂಕ್ ವೃತ್ತದಿಂದ ಬೆಂಗಳೂರು ರೈಲ್ವೆ ನಿಲ್ದಾಣದವರೆಗೆ ನಡೆಸಲುದ್ದೇಶಿಸಿದ್ದ ರ್ಯಾಲಿಗೆ ನಿಷೇಧಾಜ್ಞೆ ಇರುವುದರಿಂದ ಪೊಲೀಸರು ಅವಕಾಶ ನೀಡಲಿಲ್ಲ. ಹಲವು ಮುಖಂಡರು ಬೇರೆ ವಾಹನಗಳಲ್ಲಿ ರೈಲ್ವೆ ನಿಲ್ದಾಣಕ್ಕೆ ಆಗಮಿಸಿ ನಿಲ್ದಾಣಕ್ಕೆ ನುಗ್ಗಲೆತ್ನಿಸಿದಾಗ ಪೊಲೀಸರು ಬಂಧಿಸಿದರು. ಈ ಸಂದರ್ಭದಲ್ಲಿ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು.
ಪೊಲೀಸರ ವರ್ತನೆ ಖಂಡಿಸಿದ ಕನ್ನಡ ಚಳವಳಿ ವಾಟಾಳ್ ನಾಗರಾಜ್, ಕಾವೇರಿ ವಿವಾದದಲ್ಲಿ ರಾಜ್ಯಕ್ಕೆ ತೀವ್ರ ಅನ್ಯಾಯವಾಗಿದೆ. ಸುಪ್ರೀಂಕೋರ್ಟ್ ನಿಂದ ನಮಗೆ ಈವರೆಗೆ ನ್ಯಾಯ ಸಿಕ್ಕಿಲ್ಲ. ಪ್ರಧಾನಿ ನರೇಂದ್ರ ಮೋದಿಯವರು ಮಧ್ಯಪ್ರವೇಶಿಸಿ ಸಮಸ್ಯೆ ಇತ್ಯರ್ಥಪಡಿಸಬೇಕು. ಸಮಸ್ಯೆ ಬಗೆಹರಿಯುವವರೆಗೂ ನಮ್ಮ ಹೋರಾಟ ನಿರಂತರವಾಗಿರುತ್ತದೆ. ಕೇಂದ್ರ ಸರ್ಕಾರಕ್ಕೆ ಸಂದೇಶ ರವಾನಿಸಲು ಶಾಂತಿಯುತವಾಗಿ ಮತ್ತು ಸಾಂಕೇತಿಕವಾಗಿ ಪ್ರತಿಭಟನೆ ನಡೆಸುತ್ತೇವೆ ಎಂದು ಹೇಳಿದರೂ ಪೊಲೀಸರು ಬಿಡಲಿಲ್ಲ. ಅವರ ಈ ಧೋರಣೆ ಖಂಡನೀಯ ಎಂದು ಕಿಡಿಕಾರಿದರು.
ಕನ್ನಡಪರ ಹೋರಾಟಗಾರರನ್ನು ಪೊಲೀಸರು ಬಂಧಿಸಿದ ರೀತಿ ಅಮಾನುಷವಾಗಿತ್ತು. ಮೊನ್ನೆ ನಡೆದ ಹಿಂಸಾಚಾರ ಸಂದರ್ಭದಲ್ಲಿ ಬಂಧಿತರಾದವರು ಮತ್ತು ಇಂದು ಬಂಧಿಸಿದವರನ್ನು ಸರ್ಕಾರ ಕೂಡಲೇ ಬಿಡುಗಡೆ ಮಾಡದಿದ್ದರೆ ಮತ್ತೆ ರಾಜ್ಯ ಬಂದ್ ಗೆ ಕರೆ ನೀಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಸಾ.ರಾ.ಗೋವಿಂದು ಮಾತನಾಡಿ, ಕಾವೇರಿ, ಮಹದಾಯಿ ವಿವಾದದಲ್ಲಿ ರಾಜ್ಯದ ಸಂಸದರು ರಾಜಕೀಯ ಕೆಸರೆರಚಾಟದಲ್ಲಿ ತೊಡಗಿದ್ದಾರೆ. ಅವರೆಲ್ಲರೂ ಒಟ್ಟಾಗಿ ರಾಜ್ಯದ ಹಿತ ಕಾಪಾಡಬೇಕು. ಇಲ್ಲದಿದ್ದರೆ ಜನ ತಕ್ಕ ಪಾಠ ಕಲಿಸುತ್ತಾರೆ ಎಂಬ ಎಚ್ಚರಿಕೆ ನೀಡಿದರು.
ತಮಿಳುನಾಡು ವಿಜಯೋತ್ಸವ ಆಚರಿಸುತ್ತಿದೆ. ನಮ್ಮನ್ನು ಪೊಲೀಸರು ಬಡಿದು ಜೈಲಿಗಟ್ಟುತ್ತಿದ್ದಾರೆ. ಇದು ನಮ್ಮ ದುರದೃಷ್ಟ ಎಂದು ವಿಷಾದಿಸಿದರು.
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ರೈಲು ಬಂದ್ ನೀರಸವಾಗಿದ್ದು, ರೈಲು ಬಂದ್ ಕರೆಕೊಟ್ಟ ಹಿನ್ನೆಲೆಯಲ್ಲಿ ಪ್ರಯಾಣಿಕರ ಸಂಖ್ಯೆ ವಿರಳವಾಗಿತ್ತು. ಬೆಳಗಿನಿಂದ ಎಂದಿನಂತೆ ರೈಲುಗಳ ಸಂಚಾರ ನಡೆಯುತ್ತಿತ್ತು. ಮಂಡ್ಯ ರೈಲು ನಿಲ್ದಾಣ ಪ್ರವೇಶಕ್ಕೆ ಮುನ್ನವೇ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದರು.
ರೈಲು ಬಂದ್ ಹಿನ್ನೆಲೆಯಲ್ಲಿ ತುಮಕೂರಿನಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯಲಿಲ್ಲ. ಮುನ್ನೆಚ್ಚರಿಕೆ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ತುಮಕೂರು ನಗರ ರೈಲ್ವೆ ನಿಲ್ದಾಣ, ಕ್ಯಾತಸಂದ್ರ,  ಮಲ್ಲಸಂದ್ರ, ಹೆಗ್ಗೆರೆ ಸೇರಿದಂತೆ ಇತರೆ ರೈಲ್ವೆ ನಿಲ್ದಾಣಗಳಲ್ಲಿ ನಿಷೇಧಾಜ್ಞೆ ಜಾರಿಮಾಡಲಾಗಿತ್ತು.
ಸಬ್ಇನ್ಸ್ಪೆಕ್ಟರ್ ಇ.ಪಿ.ರಾಜು, ಆರ್ ಪಿಎಫ್ ಪೊಲೀಸರು, ಕೆಎಸ್ಆರ್ ಪಿ, ಶ್ವಾನದಳ, ಬೆರಳಚ್ಚು ತಜ್ಞರು ಸ್ಥಳದಲ್ಲೇ ಬೀಡುಬಿಟ್ಟು ಯಾರಿಗೂ ತೊಂದರೆಯಾಗದಂತೆ ಎಚ್ಚರ ವಹಿಸಿದ್ದರು.
ಕೋಲಾರ ರೈಲ್ವೆ ನಿಲ್ದಾಣದಲ್ಲಿ ಕೋಲಾರ-ಬೆಂಗಳೂರು ಪ್ಯಾಸೆಂಜರ್ ರೈಲನ್ನು ಕನ್ನಡಪರ ಸಂಘಟನೆಗಳು ತಡೆದು ಪ್ರತಿಭಟನೆ ನಡೆಸಿ ಕೇಂದ್ರ, ರಾಜ್ಯ ಹಾಗೂ ತಮಿಳುನಾಡು ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು. ಜಯಕರ್ನಾಟಕ ಸಂಘದ ಕೆ.ಆರ್. ನಾಗರಾಜು, ಕನ್ನಡ ಸೇನೆಯ ಕಲಾವಿದ ವಿಷ್ಣು, ವೆಂಕಟಪ್ಪ, ಕೋನಾ ಪ್ರಭಾಕರ್, ಜಯದೇವ್ ಪ್ರಸನ್ನ ಮತ್ತಿತರರಿದ್ದರು.
ಕೋಲಾರ ಸಿಟಿ ರೈಲ್ವೆ ನಿಲ್ದಾಣದಲ್ಲಿ ಪ್ರತಿಭಟನಾಕಾರರು ಅರ್ಧಗಂಟೆಗೂ ಹೆಚ್ಚು ಕಾಲ ರೈಲು ತಡೆದ ಪರಿಣಾಮ ಪ್ರಯಾಣಿಕರಿಗೆ ತೊಂದರೆಯಾಯಿತು. ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿ ರೈಲು ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಮಂಡ್ಯ ಜಿಲ್ಲೆಯ ಎಲ್ಲ ರೈಲ್ವೆ ನಿಲ್ದಾಣಗಳಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಕನ್ನಡ ಪರ ಒಕ್ಕೂಟದ ಕಾರ್ಯಕರ್ತರು ಕಂಟೋನ್ಮೆಂಟ್ ರೈಲ್ವೆ ನಿಲ್ದಾಣಕ್ಕೆ ನುಗ್ಗಲೆತ್ನಿಸಿದಾಗ ಹಲವರನ್ನು ಪೊಲೀಸರು ವಶಕ್ಕೆ ಪಡೆದರು.
ಧಾರವಾಡದಲ್ಲಿ ವಿವಿಧ ಸಂಘಟನೆಗಳಿಂದ ಕಾವೇರಿ ನೀರಿಗಾಗಿ ಆಗ್ರಹಿಸಿ ರೈಲ್ವೆ ನಿಲ್ದಾಣದ ಮುಂಭಾಗ ಮನಸೂರಿನ ರೇವಣ ಸಿದ್ದೇಶ್ವರ ಮಠದ ಶ್ರೀ ಬಸವರಾಜ ದೇವರು ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಸಂದರ್ಭದಲ್ಲಿ ಹಲವರನ್ನು ಪೊಲೀಸರು ಬಂಧಿಸಿದ್ದಾರೆ.
ಕಾವೇರಿ ಮತ್ತು ಮಹದಾಯಿ ನೀರು ರಾಜ್ಯಕ್ಕೆ ಸಿಗಬೇಕೆಂದು ಆಗ್ರಹಿಸಿ ರೈಲ್ವೆ ನಿಲ್ದಾಣಕ್ಕೆ ನುಗ್ಗಲು ಯತ್ನಿಸಿದಾಗ ರಮಾ ಕುಲಕರ್ಣಿ, ಸುಷ್ಮಾ ಸೇರಿದಂತೆ ಹಲವು ಮಹಿಳೆಯರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ತಮಿಳುನಾಡಿಗೆ ನೀರು ಬಿಡುವುದನ್ನು ವಿರೋಧಿಸಿ ಬಳ್ಳಾರಿ ರೈಲ್ವೆ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಲಾಗಿದ್ದು, ಬಂದೋಬಸ್ತ್ ಗಾಗಿ ಎರಡು ತುಕಡಿ ಜಿಲ್ಲಾ ಸಶಸ್ತ್ರ ಮೀಸಲುಪಡೆ ಮತ್ತು ಕೆಎಸ್ಆರ್ ಪಿ ನಿಯೋಜನೆ ಮಾಡಲಾಗಿತ್ತು.
ಗದಗದಲ್ಲೂ ಕೂಡ ಹಲವು ಸಂಘಟನೆಗಳವರು ರೈಲುತಡೆ ನಡೆಸಲು ಪ್ರಯತ್ನಿಸಿದರಾದರೂ ರೈಲು ಸಂಚಾರಕ್ಕೆ ಯಾವುದೇ ಅಡಚಣೆಯಾಗಲಿಲ್ಲ.
ಒಟ್ಟಾರೆ ಇಂದು ರಾಜ್ಯಾದ್ಯಂತ ರೈಲು ಬಂದ್ ನಿಂದ ಪರಿಣಾಮ ಬೀರಲಿಲ್ಲ.
Share196Tweet123Send
Previous Post

ಮುಂದಿನ ವಿಧಾನಸಭೆಗೆ ಕಾಂಗ್ರೆಸ್ ಸಿದ್ಧತೆ: ಸೆ.27 ರಂದು ಕೆಪಿಸಿಸಿ ಕಾರ್ಯಕಾರಿಣಿ

Next Post

ಕಾವೇರಿ ವಿಚಾರ: ಪ್ರಧಾನಿ ಮಧ್ಯಪ್ರವೇಶಕ್ಕೆ ಅವಕಾಶವಿದೆ: ದಿನೇಶ್ ಗುಂಡೂರಾವ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕಾವೇರಿ ವಿಚಾರ: ಪ್ರಧಾನಿ ಮಧ್ಯಪ್ರವೇಶಕ್ಕೆ ಅವಕಾಶವಿದೆ: ದಿನೇಶ್ ಗುಂಡೂರಾವ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಒಳಮೀಸಲಾತಿ ಪ್ರಕಟಣೆ ಸರ್ಕಾರದಿಂದ ದಲಿತರಿಗೆ ಆಗುತ್ತಿರುವ ಮೋಸ: ಕೆ.ಎಸ್. ಈಶ್ವರಪ್ಪ ಗುಡುಗು

ಒಳಮೀಸಲಾತಿ ಪ್ರಕಟಣೆ ಸರ್ಕಾರದಿಂದ ದಲಿತರಿಗೆ ಆಗುತ್ತಿರುವ ಮೋಸ: ಕೆ.ಎಸ್. ಈಶ್ವರಪ್ಪ ಗುಡುಗು

April 25, 2026
ಪುಸ್ತಕಗಳ ಅಧ್ಯಯನದಿಂದ ವ್ಯಕ್ತಿತ್ವ ವಿಕಸನ ಸಾಧ್ಯ: ಸುರೇಶ್ ಋಗ್ವೇದಿ ಅಭಿಪ್ರಾಯ

ಪುಸ್ತಕಗಳ ಅಧ್ಯಯನದಿಂದ ವ್ಯಕ್ತಿತ್ವ ವಿಕಸನ ಸಾಧ್ಯ: ಸುರೇಶ್ ಋಗ್ವೇದಿ ಅಭಿಪ್ರಾಯ

April 25, 2026
ಸನಾತನ ಸಂಸ್ಕೃತಿ, ಪರಂಪರೆಗೆ ಕಲ್ಪ ಡಿಜಿಟಲ್ ನ್ಯೂಸ್ ಕೊಡುಗೆ ಅನನ್ಯ: ಪಂಡಿತ ಹೇಮಂತ ಆಚಾರ್ಯ ಗುಡಿ

ಸನಾತನ ಸಂಸ್ಕೃತಿ, ಪರಂಪರೆಗೆ ಕಲ್ಪ ಡಿಜಿಟಲ್ ನ್ಯೂಸ್ ಕೊಡುಗೆ ಅನನ್ಯ: ಪಂಡಿತ ಹೇಮಂತ ಆಚಾರ್ಯ ಗುಡಿ

April 25, 2026
ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

ಸಮವಸ್ತ್ರದೊಳಗಿನ ಅಪ್ಪಟ ಚಿನ್ನ | ಶ್ರೀ ಜಯಕರ ಐರೋಡಿ ಎಂಬ ಮಾನವೀಯತೆಯ ಮಹಾದನಿ

April 25, 2026
ಸಮಾಜದತ್ತ ನಮ್ಮ ಹೊಣೆಗಾರಿಕೆಯನ್ನು ಮರೆಯಬಾರದು | ಬ್ರಜೇಶ್ ಸಿಂಗ್

ಸಮಾಜದತ್ತ ನಮ್ಮ ಹೊಣೆಗಾರಿಕೆಯನ್ನು ಮರೆಯಬಾರದು | ಬ್ರಜೇಶ್ ಸಿಂಗ್

April 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL