ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ವಿಧಾನ ಪರಿಷತ್ ಉಪಸಭಾಪತಿ ಧರ್ಮೇಗೌಡ ಅವರ ಸಾವಿಗೆ ಸಂಸದ ಬಿ.ವೈ. ರಾಘವೇಂದ್ರ ಅವರು ಕಂಬನಿ ಮಿಡಿದಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಅವರು, ಅತ್ಯಂತ ಮೃದು ಸ್ವಭಾವದ ಧರ್ಮೇಗೌಡರನ್ನು ಕುವೆಂಪು ವಿವಿ ಕಾರ್ಯಕ್ರಮದಲ್ಲಿ ಭೇಟಿಯಾಗುವ ಅವಕಾಶ ದೊರೆತಿತ್ತು. ಏರು ಧ್ವನಿಯಲ್ಲೂ ಸಹ ಮಾತನಾಡದಂತ ಅತ್ಯಂತ ಸೂಕ್ಷ್ಮ ಸ್ವಭಾವದ ವ್ಯಕ್ತಿ ಅವರಾಗಿದ್ದರು. ಇಂತಹ ವ್ಯಕ್ತಿಯ ನಿಧನ ತೀವ್ರ ಆಘಾತವನ್ನು ಉಂಟು ಮಾಡಿದ್ದು, ರಾಜ್ಯ ಹಾಗೂ ರಾಷ್ಟ್ರಕ್ಕೆ ಉಂಟಾದ ದೊಡ್ಡ ನಷ್ಟ ಎಂದಿದ್ದಾರೆ.

ಧರ್ಮೇಗೌಡರ ಸಾವಿನ ದುಃಖವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ಕರುಣಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















