ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜ.2 ಹಾಗೂ 3ರಂದು ನಗರದಲ್ಲಿ ನಡೆಯಲಿರುವ ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಯ ಸಿದ್ದತೆಗಳನ್ನು ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜ್ ಪರಿಶೀಲನೆ ನಡೆಸಿದರು.
ಎರಡು ದಿನ ನಗರದಲ್ಲಿ ಮಹತ್ವದ ರಾಜ್ಯ ಮಟ್ಟದ ಕೋರ್ ಕಮಿಟಿ ಸಭೆ ನಡೆಯಲಿದ್ದು, ರಾಷ್ಟ್ರ ಮಟ್ಟದಲ್ಲಿ ತೀವ್ರ ಕುತೂಹಲ ಕೆರಳಿಸಿದೆ. ಈ ಸಭೆಯ ಸಿದ್ದತೆಗಳು ಭರದಿಂದ ಸಾಗಿದ್ದು, ಸಚಿವ ಬಿ.ಎ. ಬಸವರಾಜ್, ಸಂಸದ ಬಿ.ವೈ. ರಾಘವೇಂದ್ರ, ಶಾಸಕ ರುದ್ರೇಗೌಡ, ಪ್ರಮುಖರಾದ ಎಸ್. ದತ್ತಾತ್ರಿ ಸೇರಿದಂತೆ ಹಲವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕೇಸರಿಮಯವಾದ ಶಿವಮೊಗ್ಗ
ಇನ್ನು, ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿರುವ ಹಿನ್ನೆಲೆಯಲ್ಲಿ ನಗರದಾದ್ಯಂತ ಬಿಜೆಪಿ ಬಾವುಟಗಳು ಹಾರಾಡುತ್ತಿವೆ.

ನಗರದ ಪ್ರಮುಖ ರಸ್ತೆಗಳು, ವೃತ್ತಗಳಲ್ಲಿ ಬಿಜೆಪಿ ಬಾವುಟಗಳನ್ನು ಹಾಕಲಾಗಿದ್ದು, ಸಂಫೂರ್ಣ ಕೇಸರಿಮಯವಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news









Discussion about this post