ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಜಿಲ್ಲೆಯಲ್ಲಿ ಡಿ.22 ಮತ್ತು 27ರಂದು ನಡೆದಿದ್ದ ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆಯು ಡಿಸೆಂಬರ್ 30ರಂದು ಬೆಳಿಗ್ಗೆ 8 ಗಂಟೆಯಿಂದ ಆಯಾ ತಾಲೂಕುಗಳ ಕೇಂದ್ರ ಸ್ಥಳದಲ್ಲಿ ನಡೆಯಲಿದ್ದು, ಜಿಲ್ಲಾಡಳಿತ ಸಕಲ ಸಿದ್ಧತೆ ಕೈಗೊಂಡಿದೆ.
ಶಿವಮೊಗ್ಗದ ತಾಲೂಕಿನ ಗ್ರಾಮ ಪಂಚಾಯಿತಿಗಳ ಮತಎಣಿಕೆಯು ನಗರದ ಎಚ್.ಎಸ್. ರುದ್ರಪ್ಪ ರಾಷ್ಟ್ರೀಯ ಪದವಿಪೂರ್ವ ಕಾಲೇಜಿನಲ್ಲಿ, ಭದ್ರಾವತಿ ತಾಲೂಕಿನ ಗ್ರಾಮ ಪಂಚಾಯಿತಿಗಳ ಸಂಚಿ ಹೊನ್ನಮ್ಮ ಬಾಲಕಿಯರ ಪದವಿಪೂರ್ವ ಕಾಲೇಜಿನಲ್ಲಿ, ತೀರ್ಥಹಳ್ಳಿ ತಾಲೂಕಿನ ಗ್ರಾಮ ಪಂಚಾಯಿತಿಗಳ ಮತಎಣಿಕೆಯು ಡಾ. ಯು.ಆರ್. ಅನಂತಮೂರ್ತಿ ಸರ್ಕಾರಿ ಪ್ರೌಢಶಾಲೆಯಲ್ಲಿ, ಸೊರಬ ತಾಲೂಕಿನ ಗ್ರಾಮ ಪಂಚಾಯಿತಿಗಳ ಮತಎಣಿಕೆಯು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ, ಹೊಸನಗರ ತಾಲೂಕಿನ ಗ್ರಾಮ ಪಂಚಾಯಿತಿಗಳ ಮತಎಣಿಕೆಯು ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ, ಶಿಕಾರಿಪುರ ತಾಲೂಕಿನ ಗ್ರಾಮ ಪಂಚಾಯಿತಿಗಳ ಮತಎಣಿಕೆಯು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಾಗೂ ಸಾಗರ ತಾಲೂಕಿನ ಗ್ರಾಮ ಪಂಚಾಯಿತಿಗಳ ಮತಎಣಿಕೆಯು ಬಿ.ಎಚ್. ರಸ್ತೆಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ನಡೆಯಲಿದೆ.
ಶಿವಮೊಗ್ಗ ತಾಲೂಕಿನ 40 ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ 70 ಎಣಿಕೆ ಮೇಲ್ವಿಚಾರಕರು ಹಾಗೂ 140 ಎಣಿಕೆ ಸಹಾಯಕರನ್ನು ನಿಯೋಜಿಸಲಾಗಿದೆ. ಒಟ್ಟು 172 ಚುನಾವಣಾ ಕ್ಷೇತ್ರಗಳ ಮತಎಣಿಕೆಗೆ 70 ಟೇಬಲ್‌ಗಳ ವ್ಯವಸ್ಥೆ ಮಾಡಲಾಗಿದೆ. ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರನ್ನು ನೋಡಲ್ ಅಧಿಕಾರಿಯನ್ನಾಗಿ ನಿಯೋಜಿಸಲಾಗಿದೆ.
ತೀರ್ಥಹಳ್ಳಿ ತಾಲೂಕಿನ 38 ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ 57 ಎಣಿಕೆ ಮೇಲ್ವಿಚಾರಕರು ಹಾಗೂ 114 ಎಣಿಕೆ ಸಹಾಯಕರನ್ನು ನಿಯೋಜಿಸಲಾಗಿದೆ. ಒಟ್ಟು 169 ಚುನಾವಣಾ ಕ್ಷೇತ್ರಗಳ ಮತಎಣಿಕೆಗೆ 57 ಟೇಬಲ್‌ಗಳ ವ್ಯವಸ್ಥೆ ಮಾಡಲಾಗಿದೆ. ಶಿವಮೊಗ್ಗದ ಅರಣ್ಯ ವ್ಯವಸ್ಥಾಪನಾಧಿಕಾರಿ ನಫೀಸಾ ಬೇಗಂ ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನಿಯೋಜಿಸಲಾಗಿದೆ.
ಸಾಗರ ತಾಲೂಕಿನ 35 ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ 66 ಎಣಿಕೆ ಮೇಲ್ವಿಚಾರಕರು ಹಾಗೂ 132 ಎಣಿಕೆ ಸಹಾಯಕರನ್ನು ನಿಯೋಜಿಸಲಾಗಿದೆ. ಒಟ್ಟು 244 ಚುನಾವಣಾ ಕ್ಷೇತ್ರಗಳ ಮತಎಣಿಕೆಗೆ 66 ಟೇಬಲ್‌ಗಳ ವ್ಯವಸ್ಥೆ ಮಾಡಲಾಗಿದೆ. ಸಾಗರದ ಉಪವಿಭಾಗಾಧಿಕಾರಿ ಪ್ರಸನ್ನ ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನಿಯೋಜಿಸಲಾಗಿದೆ.

ಸೊರಬ ತಾಲೂಕಿನ 27 ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ 45 ಎಣಿಕೆ ಮೇಲ್ವಿಚಾರಕರು ಹಾಗೂ 90 ಎಣಿಕೆ ಸಹಾಯಕರನ್ನು ನಿಯೋಜಿಸಲಾಗಿದೆ. ಒಟ್ಟು 137 ಚುನಾವಣಾ ಕ್ಷೇತ್ರಗಳ ಮತಎಣಿಕೆಗೆ 45 ಟೇಬಲ್‌ಗಳ ವ್ಯವಸ್ಥೆ ಮಾಡಲಾಗಿದೆ. ಶಿವಮೊಗ್ಗ ವೈದ್ಯಕೀಯ ಮಹಾವಿದ್ಯಾಲಯದ ಮುಖ್ಯ ಆಡಳಿತಾಧಿಕಾರಿ ಶಿವಕುಮಾರ್ ಎಚ್.ಕೆ. ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನಿಯೋಜಿಸಲಾಗಿದೆ.
ಹೊಸನಗರ ತಾಲೂಕಿನ 30 ಗ್ರಾಮ ಪಂಚಾಯಿತಿಗಳ ಸಾರ್ವತ್ರಿಕ ಚುನಾವಣೆಯ ಮತ ಎಣಿಕೆ ಕಾರ್ಯಕ್ಕೆ 60 ಎಣಿಕೆ ಮೇಲ್ವಿಚಾರಕರು ಹಾಗೂ 120 ಎಣಿಕೆ ಸಹಾಯಕರನ್ನು ನಿಯೋಜಿಸಲಾಗಿದೆ. ಒಟ್ಟು 151 ಚುನಾವಣಾ ಕ್ಷೇತ್ರಗಳ ಮತಎಣಿಕೆಗೆ 60 ಟೇಬಲ್‌ಗಳ ವ್ಯವಸ್ಥೆ ಮಾಡಲಾಗಿದೆ. ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಶ್ರೀಧರ್ ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನಿಯೋಜಿಸಲಾಗಿದೆ.
ಒಟ್ಟು ಜಿಲ್ಲೆಯ 244 ಗ್ರಾಮ ಪಂಚಾಯಿತಿಗಳ 1192 ಚುನಾವಣಾ ಕ್ಷೇತ್ರಗಳಿಗೆ 433 ಟೇಬಲ್‌ಗಳನ್ನು ಸಜ್ಜುಗೊಳಿಸಲಾಗಿದೆ. 433 ಜನ ಎಣಿಕೆ ಮೇಲ್ವಿಚಾರಕರನ್ನು ಹಾಗೂ 866 ಎಣಿಕೆ ಸಹಾಯಕರನ್ನು ನಿಯೋಜಿಸಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news









Discussion about this post