ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಜನರು ಸರಿಯಾಗಿಯೇ ಪಾಠ ಕಲಿಸಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅಭಿವೃದ್ಧಿ ಕಾರ್ಯಗಳನ್ನು ಪರಿಗಣಿಸಿದ ಮತದಾರರು ಬಿಜೆಪಿಗೆ ಆರ್ಶೀವಾದ ಮಾಡಿದ್ದಾರೆ. ಇದೇ ವೇಳೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಪಕ್ಕಕ್ಕೆ ಸರಿಸಿದ್ದಾರೆ ಎಂದರು.
ಇನ್ನು, ಜ.2-3ರಂದು ನಡೆಯಲಿರುವ ರಾಜ್ಯ ಕೋರ್ ಕಮಿಟಿ ಸಭೆಗೆ ಎಲ್ಲ ಸಿದ್ದತೆಗಳು ಅಂತಿಮ ಹಂತದಲ್ಲಿದ್ದು, ಎಲ್ಲ ರೀತಿಯ ತಯಾರಿ ನಡೆದಿದೆ. ಇಡಿಯ ಜಿಲ್ಲೆಯಲ್ಲಿ ಕಾರ್ಯಕಾರಿಣಿ ಕುರಿತು ಸಂಭ್ರಮ ಮೂಡಿರುವುದು ನಮಗೆ ಸಂತಸ ಮೂಡಿಸಿದೆ. ಗ್ರಾಮ ಪಂಚಾಯ್ತಿ ಚುನಾವಣೆಯ ಯಶಸ್ಸಿನ ಬೆನ್ನಲ್ಲೇ ಈ ಸಭೆ ನಡೆಯುತ್ತಿರುವುದು ಪಕ್ಷದ ಮುಖಂಡರಿಗೆ ಹಾಗೂ ಕಾರ್ಯಕರ್ತರಿಗೆ ಹೆಚ್ಚಿನ ಸಂತಸವನ್ನು ಮೂಡಿಸಿದೆ ಎಂದರು.
ಪ್ರಮುಖವಾಗಿ ನಾಳೆಯಿಂದ ನಡೆಯಲಿರುವ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಅತ್ಯಂತ ಪ್ರಮುಖ ವಿಚಾರವೊಂದು ಚರ್ಚೆಗೆ ಬರಲಿದೆ. ಯಾವ ವಿಚಾರವೆನ್ನುವುದನ್ನು ಕಾದು ನೋಡಿ ಎಂದರು. ಸಚಿವರ ಈ ಮಾತು ಭಾರೀ ಕುತೂಹಲಕ್ಕೆ ಕಾರಣವಾಗಿದೆ.
ಪತ್ರಿಕಾಗೋಷ್ಠಿಯಲ್ಲಿ ಸಂಸದ ಬಿ.ವೈ. ರಾಘವೇಂದ್ರ, ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್, ರಾಜ್ಯ ಬಿಜೆಪಿ ಪ್ರದಾನ ಕಾರ್ಯದರ್ಶಿ ಮಹೇಶ್ ತೆಂಗಿನಕಾಯಿ, ರಾಜ್ಯ ಪ್ರಕೋಷ್ಟಗಳ ಸಂಚಾಲಕರಾದ ಎಂ.ಬಿ. ಭಾನುಪ್ರಕಾಶ್, ವಿಧಾನ ಪರಿಷತ್ ಸದಸ್ಯರಾದ ಆಯನೂರ್ ಮಂಜುನಾಥ್, ರಾಜ್ಯ ಕಾರ್ಯದರ್ಶಿ ತುಳಸಿ ಮುನಿರಾಜ್, ವಿಭಾಗ ಪ್ರಭಾರಿಗಳಾದ ಗಿರೀಶ್ ಪಟೇಲ್ ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post