ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ರಸ್ತೆ ದಾಟುತ್ತಿದ್ದ ವೇಳೆ ಕಾರೊಂದು ವೇಗವಾಗಿ ಡಿಕ್ಕಿ ಹೊಡೆದ ಪರಿಣಾಮ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಸಿವಿಲ್ ಹೆಡ್ ಕಾನ್ಸ್ಟೇಬಲ್ ಜುಲ್ಫೀಕರ್(40) ಅವರು ಸಾವನ್ನಪ್ಪಿರುವ ಘಟನೆ ಸಾಗರ ರಸ್ತೆಯಲ್ಲಿ ನಡೆದಿದೆ.
ಜಿಲ್ಲಾ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಸಾಗರ ರಸ್ತೆಯ ಖಾಸಗಿ ಹೊಟೇಲ್ ಬಳಿಯಲ್ಲಿ ಸಿಎಂ ಭದ್ರತೆಗಾಗಿ ಜುಲ್ಫೀಕರ್ ಅವರು ನಿಯೋಜನೆಗೊಂಡಿದ್ದರು.
ಭದ್ರತಾ ಕರ್ತವ್ಯ ಮುಗಿದ ನಂತರ ಸಾಗರ ರಸ್ತೆಯಲ್ಲಿ ನಡೆದುಕೊಂಡು ದಾಟುತ್ತಿದ್ದ ಇವರಿಗೆ ಎದುರಿನಿಂದ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದಿದೆ. ಪರಿಣಾಮವಾಗಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ತತಕ್ಷಣವೇ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಆ ವೇಳೆಗಾಗಲೇ ಅವರು ಕೊನೆಯುಸಿರೆಳೆದಿದ್ದರು.
ಸದ್ಯ ಮೃತರ ಪಾರ್ಥಿವ ಶರೀರ ಮೆಗ್ಗಾನ್ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















