ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಇತ್ತೀಚೆಗೆ ಹರಿಪಾದ ಸೇರಿದ ನಾಡಿನ ಹಿರಿಯ ವಿದ್ವಾಂಸ, ಪದ್ಮಶ್ರೀ ಪುರಸ್ಕೃತ, ವಿದ್ಯಾವಾಚಸ್ಪತಿ ದಿ.ಡಾ. ಬನ್ನಂಜೆ ಗೋವಿಂದಚಾರ್ಯರಿಗೆ ಭಾವ ನಮನ ಕಾಯಕ್ರಮವನ್ನು ಜ.7ರಂದು ನಡೆಯಲಿದೆ.
ಅಂದು ಸಂಜೆ 6 ಗಂಟೆಯಿಂದ ರವೀಂದ್ರ ನಗರ ಗಣಪತಿ ದೇವಾಲಯದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಭಜನಾ ಪರಿಷತ್, ಅರ್ಚಕ ವೃಂದ, ಶ್ರೀಪ್ರಸನ್ನ ಗಣಪತಿ ದೇವಾಲಯ ಹಾಗೂ ಸಂಸ್ಕಾರ ಪ್ರತಿಷ್ಠಾನದ ಸಂಯುಕ್ತಾಶ್ರಯದಲ್ಲಿ ಆಯೋಜನೆಗೊಂಡಿದೆ.
ಬನ್ನಂಜೆ ಗೋವಿಂದಚಾರ್ಯರ ಶಿಷ್ಯರಾದ ಪ್ರಸಿದ್ಧ ಪ್ರವಚನಕಾರರು ವಿದ್ವಾನ್ ಕೃಷ್ಣರಾಜ ಕುತ್ಪಾಡಿ ಅವರು ಭಾವ ನಮನ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

ಸಂಜೆ 6 ಗಂಟೆಯಿಂದ ಸಾಮೂಹಿಕ ವಿಷ್ಣು ಸಹಸ್ರನಾಮ ಪಠಣ ನಡೆಯಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















