No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
  • Advertise With Us
  • Grievances
  • About Us
  • Contact Us
Sunday, August 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಜ.7ರಂದು ಕೃಷಿ ಸಂಜೀವಿನಿ ಲೋಕಾರ್ಪಣೆ

kalpa News by kalpa News
January 6, 2021
in ಬೆಂಗಳೂರು ನಗರ
0
ಗಂಗಾವತಿ ಟೌನ್, ಶ್ರೀರಾಮನಗರದಲ್ಲಿ 10 ದಿನ ಲಾಕ್ ಡೌನ್: ಕೊಪ್ಪಳ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ್

File Image

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಕಳೆದ ಬಜೆಟ್ ನಲ್ಲಿ ಘೋಷಿಸಿದಂತೆ ಕೃಷಿಯಲ್ಲಿ ಕಾಲಕಾಲಕ್ಕೆ ಮಣ್ಣು, ಕೀಟ ರೋಗ , ನೀರು ಪರೀಕ್ಷೆ ಮತ್ತು ಇತರೆ ತಾಂತ್ರಿಕ ನೆರವಿಗಾಗಿ ಸಂಚಾರಿ ಕೃಷಿ ಹೆಲ್ತ್ ಕ್ಲಿನಿಕ್ ಗಳನ್ನು ಕೃಷಿ ಇಲಾಖೆ ಲೋಕಾರ್ಪಣೆಗೊಳಿಸುತ್ತಿದೆ.

“ಕೃಷಿ ಸಂಜೀವಿನಿ” ಹೆಸರಿನ ಸಂಚಾರಿ ಕೃಷಿ ವಾಹನ ರೈತರ ಮನೆಬಾಗಿಲಿಗೆ ಬರಲು ಸಜ್ಜಾಗಿದೆ.

ಇದೇ ಜ.7 ರಂದು ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಪೂರ್ವದ್ವಾರದ ಮೆಟ್ಟಿಲುಗಳ ಮುಂಭಾಗ “ಕೃಷಿ ಸಂಜೀವಿನಿ” ವಾಹನಗಳನ್ನು ಕೃಷಿ ಸಚಿವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ರೈತರಿಗೆ ಸಮರ್ಪಿಸುತ್ತಿದ್ದಾರೆ. ಇದೇ ವೇಳೆ ಕೃಷಿ ಸಚಿವ ಬಿ.ಸಿ.ಪಾಟೀಲ್ ಪರೀಕ್ಷಾ ಉಪಕರಣಗಳಿಗೆ ಚಾಲನೆ ನೀಡಲಿದ್ದಾರೆ.

ಚಿಕ್ಕ ಜಿಲ್ಲೆಗಳಿಗೆ ಒಂದು ದೊಡ್ಡ ಜಿಲ್ಲೆಗಳಿಗೆ ಎರಡರಂತೆ ರಾಜ್ಯಾದ್ಯಂತ ಒಟ್ಟು 40 “ಕೃಷಿ ಸಂಜೀವಿನಿ” ವಾಹನಗಳು ರೈತರಿಗೆ ಲೋಕಾರ್ಪಣೆಗೊಳ್ಳುತ್ತಿವೆ.

ಏನಿದು ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ ( ಕೃಷಿ ಸಂಜೀವಿನಿ)?

ಇದು ಕೃಷಿ ಉತ್ಪಾದನೆ ಮತ್ತು ಉತ್ಪಾದಕತೆಯು ನೈಸರ್ಗಿಕ ವಿಕೋಪಗಳಾದ ಅನಾವೃಷ್ಟಿ , ಅತಿವೃಷ್ಟಿ , ಚಂಡಮಾರುತ , ಬೆಳೆಗಳಿಗೆ ಕಾಡುವ ಕೀಟ ಮತ್ತು ರೋಗ ಬಾಧೆ ಹಾಗೂ ಮಣ್ಣಿನ ಫಲವತ್ತತೆ ಮತ್ತು ಇತರ ಅಂಶಗಳ ಮೇಲೆ ಅವಲಂಬಿತವಾಗಿರುತ್ತದೆ . ಸುಧಾರಿತ ಕೃಷಿ ಉತ್ಪಾದನಾ ತಾಂತ್ರಿಕತೆ , ಗುಣಮಟ್ಟದ ಕೃಷಿ ಪರಿಕರಗಳ ಪೂರೈಕೆ ಮತ್ತು ಶಿಫಾರಸ್ಸು ಮಾಡಲಾದ ರಸಗೊಬ್ಬರಗಳ ಸಮರ್ಪಕ ಬಳಕೆ , ರೋಗ – ಕೀಟಗಳ ಹತೋಟಿ , ಮಣ್ಣಿನಲ್ಲಿ ಲಭ್ಯವಿರುವ ಪೋಷಕಾಂಶಗಳ ಬಗ್ಗೆ ರೈತರಿಗೆ ಮಾಹಿತಿ ಒದಗಿಸಿ , ಸೂಕ್ತ ಬೆಳೆ ಬೆಳೆಯಲು ಪ್ರೋತ್ಸಾಹಿಸುವುದು ಇಲಾಖೆಯ ಆದ್ಯ ಕರ್ತವ್ಯವಾಗಿರುತ್ತದೆ . ಕೀಟ , ರೋಗ ಮತ್ತು ಕಳೆಗಳ ಬಾಧೆ ಹಾಗೂ ಮಣ್ಣಿನ ಪೋಷಕಾಂಶ ಕೊರತೆ ಹಾಗು ಸಮರ್ಪಕ ನಿರ್ವಹಣೆ ಕುರಿತಂತ ರೈತರ ತಾಕುಗಳಲ್ಲಿಯೇ ಹತೋಟಿ ಕ್ರಮಗಳ ಕುರಿತು ಮಾರ್ಗೊಪಾಯಗಳನ್ನು ಒದಗಿಸಲು ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ ( ಕೃಷಿ ಸಂಜೀವಿನಿ ಯೋಜನೆಯನ್ನು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ.

2020-21ನೇ ಸಾಲಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ 40 ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯಗಳನ್ನು ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಸ್ಥಾಪಿಸಲು ಅನುದಾನವನ್ನು ಒದಗಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದೇ ರೀತಿ ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಆಯಾ ಜಿಲ್ಲೆಗಳಲ್ಲಿ ಜಿಲ್ಲಾ ಖನಿಜ ಪ್ರತಿಷ್ಠಾನದ ಕ್ರಿಯಾ ಯೋಜನೆಯಡಿ ಲಭ್ಯವಿರುವ ಅನುದಾನದಡಿ ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ ( ಕೃಷಿ ಸಂಜೀವಿನಿ ) ಲೋಕಾರ್ಪಣೆಗೊಳಿಸಲಾಗುತ್ತಿದೆ.

ಕೃಷಿ ಸಂಜೀವಿನಿಯ ಉದ್ದೇಶವೇನು?:

ಸಕಾಲದಲ್ಲಿ ಬೆಳೆಯ ಎಲ್ಲಾ ಹಂತಗಳಲ್ಲಿ ಸರ್ವೇಕ್ಷಣೆಯನ್ನು ಕೈಗೊಂಡು ಕಂಡುಬಂದಿರುವ / ಕಂಡುಬರಬಹುದಾದ ಕೀಟ / ರೋಗ / ಕಳೆಗಳ ನಿರ್ವಹಣಾ ಮಾರ್ಗೋಪಾಯಗಳನ್ನು ರೈತರಿಗೆ ತಿಳಿಸುವುದು , ಈಗಾಗಲೇ ರಾಜ್ಯ ಮಟ್ಟದಲ್ಲಿ ರಾಜ್ಯ ಪೀಡ ಸರ್ವೇಕ್ಷಣಾ ಮತ್ತು ಸಲಹಾ ಸಮಿತಿ ಹಾಗೂ ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಪೀಡೆ ಸರ್ವೇಕ್ಷಣಾ ಮತ್ತು ಸಲಹಾ ಸಮಿತಿ ಅಸ್ಥಿತ್ವದಲ್ಲಿದ್ದು, ಸದರಿ ಸಲಹಾ ಸಮಿತಿಗಳಲ್ಲಿ ಕೃಷಿ ವಿಶ್ವವಿದ್ಯಾಲಯಗಳ ವಿಜ್ಞಾನಿಗಳು , ಭಾರತೀಯ ಕೃಷಿ ಅನುಸಂಧಾನ ಸಂಸ್ಥೆಯ ವಿಜ್ಞಾನಿಗಳು, ಕೇಂದ್ರೀಯ ಸಮಗ್ರ ಪೀಡೆ ನಿರ್ವಹಣಾ ಕೇಂದ್ರದ ಅಧಿಕಾರಿಗಳು ಹಾಗೂ ಕೃಷಿ ಇಲಾಖೆಯ ತಾಂತ್ರಿಕ ಅಧಿಕಾರಿಗಳನ್ನು ಒಳಗೊಂಡಿರುತ್ತದೆ. ಕೃಷಿ ಸಂಜೀವಿನಿ ಸ್ಥಾಪನೆಯಿಂದ ಪೀಡ ಸರ್ವೇಕ್ಷಣಾ ಮತ್ತು ಸಲಹಾ ಘಟಕಗಳು ಇನ್ನೂ ಹೆಚ್ಚಿನ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಲು ಅನುಕೂಲಕರವಾಗಿದೆ. ಸಂಚಾರಿ ವಾಹನದ ಸೌಲಭ್ಯದಿಂದ ಹೆಚ್ಚಿನ ಸಂಖ್ಯೆಯ ರೈತರ ತಾಕುಗಳಿಗೆ ತಾಂತ್ರಿಕ ತಂಡವು ಭೇಟಿ ನೀಡಲು ಸಹಕಾರಿಯಾಗುತ್ತದೆ. ಬೆಳೆಗಳಲ್ಲಿ ಕೀಟ ಮತ್ತು ರೋಗಗಳ ಬಾಧೆಯನ್ನು ನಿಖರವಾಗಿ ಹಾಗೂ ಸಮಯೋಚಿತವಾಗಿ ಗುರುತಿಸುವ ಸಲುವಾಗಿ ರಾಜ್ಯ ಸರ್ಕಾರದ ಅನುದಾನ ಮೂಲಕ ರಾಯಚೂರು ಕೃಷಿ ವಿಶ್ವವಿದ್ಯಾಲಯ ಅಭಿವೃದ್ಧಿಪಡಿಸಿರುವ ಕೀಟ / ರೋಗಗಳ ಸಮರ್ಪಕ ನಿರ್ವಹಣೆ ಹಾಗೂ ರೈತರಿಗೆ ಸಲಹೆ ನೀಡಲು ಇ – ತಂತ್ರಾಂಶ ( ಇ – ಸ್ಯಾಪ್ ) ಬಳಕೆಯ ಮೂಲಕ ನಿಯಮಿತವಾಗಿ ರೈತರ ತಾಕುಗಳಿಗೆ ಭೇಟಿ ನೀಡುವುದು. ಸರ್ವೇಕ್ಷಣೆಯಲ್ಲಿ ಕೀಟ / ರೋಗ ಬಾಧೆ ಕಂಡುಬಂದಲ್ಲಿ ತಕ್ಷಣವೇ ರೈತರಿಗೆ ಕೈಗೊಳ್ಳಬೇಕಾದ ಸಂಭವನೀಯ ನಿರ್ವಹಣಾ ಕ್ರಮಗಳ ಮಾಹಿತಿಯನ್ನು ರೈತರ ಮೊಬೈಲ್ ಗಳಿಗೆ ಸಂದೇಶ ಅಥವಾ ಮುದ್ರಿತ ಚೀಟಿ ನೀಡುವ ಮೂಲಕ ಉತ್ಪಾದನಾ ವೆಚ್ಚ ಮತ್ತು ಬೆಳಹಾನಿಯನ್ನು ತಗ್ಗಿಸುವುದು ಯೋಜನೆಯ ಪ್ರಮುಖ ಉದ್ದೇಶವಾಗಿದೆ.

ರೈತರು ತಮ್ಮ ಮಟ್ಟದಲ್ಲಿ ರಸಗೊಬ್ಬರಗಳ ಕಲಬೆರಕೆಯನ್ನು ಕಡಿಮೆ ವೆಚ್ಚದಲ್ಲಿ ಕಂಡುಕೊಂಡು ಗುಣಮಟ್ಟದ ರಸಗೊಬ್ಬರಗಳನ್ನು ಖರೀದಿಸಬಹುದಾಗಿದೆ. ಈ ದಿಸೆಯಲ್ಲಿ ರೈತರು ಸುಲಭ ಪರೀಕ್ಷೆಗಳಿಂದ ರಸಗೊಬ್ಬರಗಳು ಕಲಬೆರಕೆಯಾಗಿದೆಯೇ ಅಥವಾ ನಕಲಿ ಗೊಬ್ಬರವೇ ಎಂದು ತಿಳಿಯಲು ಸುಲಭ ಪರೀಕ್ಷೆಯ ಪ್ರಾತ್ಯಕ್ಷಿಕೆಗಳನ್ನು ರೈತರಿಗೆ ನೀಡಲಾಗುವುದು, ತದನಂತರ ರೈತರು ತಮ್ಮ ಹಂತದಲ್ಲಿಯೇ ರಸಗೊಬ್ಬರಗಳ ಗುಣಮಟ್ಟವನ್ನು ಪ್ರಾರಂಭಿಕವಾಗಿ ತಿಳಿದು ಖರೀದಿಸಬಹುದಾಗಿದೆ.

ಹೇಗೆ ಕಾರ್ಯನಿರ್ವಹಿಸಲಿದೆ ಈ ಸಂಚಾರಿ ಕೃಷಿ ವಾಹನ?:1

55313 ಇದು ಕೃಷಿ ಸಂಜೀವಿನಿ ಸಹಾಯವಾಣಿ. ಇದು ಕೃಷಿ ಸಂಜೀವಿನಿ ಟೋಲ್ ಫ್ರೀ ಸಹಾಯವಾಣಿಯಾಗಿದ್ದು, ಈ ಸಂಖ್ಯೆಗೆ ಯಾವುದಾದರೂ ಜಿಲ್ಲೆಯಿಂದ ಕರೆ ಮಾಡಿದಲ್ಲಿ ಟೋಲ್ ಫ್ರೀ ಸಂಖ್ಯೆಯಿಂದ ಕರೆ ಮಾಡಿದ ರೈತರಿರುವ ಜಿ್ಲ್ಲೆಯ ಜಂಟಿ ಕೃಷಿ ನಿರ್ದೇಶಕರ ಕಚೇರಿಗೆ ಕರೆ ಹೋಗುತ್ತದೆ. ಆಗ ರೈತರು ತಮ್ಮ ಸಮಸ್ಯೆಯನ್ನು ತಿಳಿಸಿ ಪರಿಹಾರ ಪಡೆಯಬಹುದಾಗಿದ್ದು, 155313 ಆರೋಗ್ಯ ಇಲಾಖೆಯ ಆ್ಯಂಬುಲೆನ್ಸ್ ನಂತೆ ಸಹಾಯವಾಣಿಯಾಗಿ ಕೆಲಸ ಮಾಡುತ್ತದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: AgricultureB C PatilBENGALURUKannada News WebsiteKrishi SanjeeviniLatest News KannadaMinisterಕೃಷಿ ಸಂಜೀವಿನಿಬಿ.ಸಿ. ಪಾಟೀಲ್
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಘೋಷಿತ ಕೊಳಚೆ ಪ್ರದೇಶದ ನಿವಾಸಿಗಳು ಕಟ್ಟಬೇಕಾದ ನೋಂದಣಿ ಶುಲ್ಕವೆಷ್ಟು? ಇಲ್ಲಿದೆ ಮಾಹಿತಿ

Next Post

ಸರ್ಕಾರಿ ವ್ಯವಸ್ಥೆಯಡಿ ಲಸಿಕೆ ವಿತರಣೆಗೆ ಸಿದ್ಧತೆ: ಸಚಿವ ಸುಧಾಕರ್

kalpa News

kalpa News

Next Post
ಇಂದು ಉಡುಪಿಯಲ್ಲಿ 300ಕ್ಕೂ ಅಧಿಕ ಕೊರೋನಾ ಪಾಸಿಟಿವ್ ಸಾಧ್ಯತೆ: ಸಚಿವ ಸುಧಾಕರ್ ಸ್ಪೋಟಕ ಮಾಹಿತಿ

ಸರ್ಕಾರಿ ವ್ಯವಸ್ಥೆಯಡಿ ಲಸಿಕೆ ವಿತರಣೆಗೆ ಸಿದ್ಧತೆ: ಸಚಿವ ಸುಧಾಕರ್

Leave a Reply Cancel reply

Your email address will not be published. Required fields are marked *

No Result
View All Result
Indriya - Krithi Shetty - Brand Ambassador
English Articles

Indriya announces Krithi Shetty as Brand Ambassador for Southern Markets

by kalpa News
August 14, 2026
0

Kalpa Media House  |  Bengaluru  | Indriya, Aditya Birla Jewellery, announced actor Krithi Shetty as its Brand Ambassador, ahead of...

Read moreDetails
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL