ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಚಿತ್ರದುರ್ಗ: ದಾವಣಗೆರೆಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಓಮಿನ್ ವಾಹನ ಕ್ಯಾದಿಗೆರೆ ಬಳಿ ನಿಂತಿದ್ದ ಟ್ಯಾಂಕರ್’ಗೆ ಡಿಕ್ಕಿಯಾಗಿ ಮೂವರು ಮೃತಪಟ್ಟಿದ್ದು, ಮೂವರಿಗೆ ಗಂಭೀರ ಗಾಯವಾಗಿದ ಘಟನೆ ನಿನ್ನೆ ತಡರಾತ್ರಿ ಸಂಭವಿಸಿದೆ.

ಮೃತರನ್ನು ರೇಣುಕಮ್ಮ(68), ಶಂಕರ್(39) ಹಾಗೂ ಶಿವರಾಜ್(45) ಎಂದು ಗುರುತಿಸಲಾಗಿದೆ. ಜಯಶ್ರೀ ಹಾಗೂ ಆಕೆಯ ಮಕ್ಕಳಾದ ಮೋನಿಕಾ, ಶೋಬಿತಾ ಗಾಯಗೊಂಡಿದ್ದಾರೆ. ಇವರನ್ನು ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ವಾಹನದಲ್ಲಿ ಪ್ರಯಾಣಿಸುತ್ತದ್ದವರೆಲ್ಲರೂ ಮಂಡ್ಯ ಜಿಲ್ಲೆಯ ಹಲಗೂರಿನವರು. ಪ್ರಸ್ತುತ ಅವರು ಬೆಂಗಳೂರಿನ ಕೆಂಗೇರಿಯಲ್ಲಿ ವಾಸಿಸುತ್ತಿದ್ದರು ಎಂದು ಎಸ್‌ಪಿ ಜಿ. ರಾಧಿಕಾ ಮಾಹಿತಿ ನೀಡಿದ್ದಾರೆ
(ವರದಿ: ಸುರೇಶ್ ಬೆಳಗೆರೆ, ಚಿತ್ರದುರ್ಗ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















