ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ತರೀಕೆರೆ: ತರೀಕೆರೆ ಹಾಗೂ ಲಕ್ಕವಳ್ಳಿ ನಡುವಿನ ರಂಗೇನಹಳ್ಳಿ ಬಳಿಯಲ್ಲಿ ಎರಡು ಕಾರುಗಳ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ರಂಗೇನಹಳ್ಳಿ ಬಳಿಯ ಕೆರೆ ಬಳಿಯ ರಸ್ತೆಯಲ್ಲಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಎರಡೂ ಕಾರುಗಳು ನಜ್ಜುಗುಜ್ಜಾಗಿವೆ. ಇದರಲ್ಲಿ ಒಂದು ಕಾರು ರಸ್ತೆ ಪಕ್ಕದ ತಡೆಗೋಡೆಯ ಮೇಲ್ಬಾಗಕ್ಕೆ ಹತ್ತಿ ಸಿಲುಕಿರುವುದು ಅಪಘಾತದ ರಭಸಕ್ಕೆ ಸಾಕ್ಷಿಯಾಗಿದೆ.
ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದ್ದು, ಪೊಲೀಸ್ ಮೂಲಗಳು ಇದನ್ನು ದೃಢಪಡಿಸಿಲ್ಲ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















