ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಧಾರವಾಡ: ಸಂಕ್ರಾಂತಿ ಮರುದಿನ ಧಾರವಾಡದ ಬಳಿ ಇಂದು ಸಂಭವಿಸಿದ ಭೀಕರ ಅಪಘಾತದಲ್ಲಿ 11 ಮಂದಿ ಸಾವನ್ನಪ್ಪಿದ್ದು, ಘಟನೆ ಕುರಿತಂತೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ಮೃತರೆಲ್ಲರೂ ದಾವಣಗೆರೆಯ ವೈದ್ಯಕೀಯ ವೃತ್ತಿಪರ ಕುಟುಂಬದ ಸದಸ್ಯರಾಗಿದ್ದು, ಅವರ ಕುಟುಂಬಗಳು ತೀವ್ರ ಆಘಾತಕ್ಕೆ ಒಳಗಾಗಿವೆ. ಇವರೆಲ್ಲರೂ ಶಾಲಾ ಸ್ನೇಹಿತರಾಗಿದ್ದು, ದಾವಣಗೆರೆಯಿಂದ ಗೋವಾಕ್ಕೆ ಪ್ರವಾಸ ಹೊರಟ್ಟಿದ್ದರು.ಇಂದು ಬೆಳಗ್ಗೆ ಟೆಂಪೋ ಟ್ರಾವೆಲರ್ ಹಾಗೂ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಟೆಂಪೋದಲ್ಲಿ 11 ಮಂದಿ ಮೃತಪಟ್ಟಿರುವ ಘಟನೆ ಧಾರವಾಡ ಹೊರವಲಯದ ಇಟ್ಟಿಗಟ್ಟಿ ಬಳಿ ನಡೆದಿದೆ.
ಮೃತ 10 ಮಹಿಳೆಯರ ಪೈಕಿ ನಾಲ್ವರು ವೈದ್ಯರಾಗಿದ್ದರೆ, ಇತರರು ವೈದ್ಯಕೀಯ ಕಾಲೇಜುಗಳು ಮತ್ತು ಆಸ್ಪತ್ರೆಗಳಲ್ಲಿ ಕೆಲಸ ಮಾಡುತ್ತಿದ್ದರು. ಮೃತರು ಶಾಲಾ ಸ್ನೇಹಿತರಾಗಿದ್ದು, ಗೋವಾಕ್ಕೆ ಒಂದು ದಿನದ ಟ್ರಿಪ್ ಹೊರಟ್ಟಿದ್ದರು.
ಟೆಂಪೋ ಟ್ರಾವೆಲರ್ ದಾವಣಗೆರೆಯಿಂದ ಪಣಜಿಗೆ ತೆರಳುತ್ತಿದ್ದು, ಲಾರಿ ಬೆಳಗಾವಿಯಿಂದ ಬರುತ್ತಿದ್ದ ವೇಳೆ ಮುಖಾಮುಖಿ ಡಿಕ್ಕಿಯಾಗಿದೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ವಿಷಯ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಎಸ್’ಪಿ ಕೃಷ್ಣಕಾಂತ ಭೇಟಿ ನೀಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಧಾರವಾಡ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಧಾನಿ ಮೋದಿ ಸಂತಾಪ
ಘಟನೆ ಕುರಿತಂತೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಕರ್ನಾಟಕದ ಧಾರವಾಡ ಜಿಲ್ಲೆಯಲ್ಲಿ ಇಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತರಾದವರ ಬಗ್ಗೆ ಸಂತಾಪ ಸೂಚಿಸುವೆ. ಈ ಸಂದರ್ಭದಲ್ಲಿ ದುಃಖತಪ್ತ ಕುಟುಂಬಗಳ ನೋವಿನಲ್ಲಿ ನಾನೂ ಭಾಗಿ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸುವೆ ಎಂದಿದ್ದಾರೆ.
ಕರ್ನಾಟಕದ ಧಾರವಾಡ ಜಿಲ್ಲೆಯಲ್ಲಿ ಇಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೃತರಾದವರ ಬಗ್ಗೆ ಸಂತಾಪ ಸೂಚಿಸುವೆ. ಈ ಸಂದರ್ಭದಲ್ಲಿ ದುಃಖತಪ್ತ ಕುಟುಂಬಗಳ ನೋವಿನಲ್ಲಿ ನಾನೂ ಭಾಗಿ. ಅಪಘಾತದಲ್ಲಿ ಗಾಯಗೊಂಡವರು ಶೀಘ್ರ ಗುಣಮುಖರಾಗಲೆಂದು ಪ್ರಾರ್ಥಿಸುವೆ: PM @narendramodi
— PMO India (@PMOIndia) January 15, 2021
ಇನ್ನು, ಘಟನೆ ಕುರಿತಂತೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಧಾರವಾಡ ತಾಲೂಕಿನ ಇಟ್ಟಿಗಟ್ಟಿಯ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿರುವ ಭೀಕರ ಅಪಘಾತದಲ್ಲಿ 11 ಮಂದಿ ಮೃತಪಟ್ಟಿರುವ ಬಗ್ಗೆ ಮುಖ್ಯಮಂತ್ರಿ ಅವರು ತೀವ್ರ ಆಘಾತ ವ್ಯಕ್ತಪಡಿಸಿದ್ದಾರೆ.
ಘಟನೆಯ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅಪಘಾತದಲ್ಲಿ ಗಾಯಗೊಂಡವರು ಶೀಘ್ರದಲ್ಲಿ ಗುಣಮುಖರಾಗಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ.
ಘಟನೆಯ ಬಗ್ಗೆ ತನಿಖೆ ನಡೆಸಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅಪಘಾತದಲ್ಲಿ ಗಾಯಗೊಂಡವರು ಶೀಘ್ರದಲ್ಲಿ ಗುಣಮುಖರಾಗಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದ್ದಾರೆ. (2/2)
— CM of Karnataka (@CMofKarnataka) January 15, 2021
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post