ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಜ.16ರ ನಾಳೆಯಿಂದ ತಾಲೂಕಿನಲ್ಲಿ ಕೊರೋನಾ ಲಸಿಕೆ ವಿತರಣೆ ಮಾಡಲಾಗುತ್ತಿದ್ದು, ಮೊದಲ ದಿನ ತಾಲೂಕು ಸಾರ್ವಜನಿಕರ ಆಸ್ಪತ್ರೆಯಲ್ಲಿ ವಾಕ್ಸಿನ್ ಹಾಕಲಾಗುತ್ತದೆ.

ನಾಳೆ ಮುಂಜಾನೆ ಸರ್ಕಾರಿ ಆಸ್ಪತ್ರೆಯಲ್ಲಿ ವ್ಯಾಕ್ಸಿನೇಷನ್ ನಡೆಯಲಿದ್ದು, ಜ.18ರಿಂದ ಬೂತ್’ನಲ್ಲಿ ವಿತರಣೆ ಮಾಡಲಾಗುತ್ತದೆ ಎಂದು ತಿಳಿದುಬಂದಿದೆ.

ಮೊದಲ ಹಂತದಲ್ಲಿ ಸರ್ಕಾರಿ ವೈದ್ಯರಿಗೆ, ಸಿಬ್ಬಂದಿಗಳಿಗೆ, ಆನಂತರ ಖಾಸಗಿ ವೈದ್ಯರಿಗೆ ಹಾಗೂ ಸಿಬ್ಬಂದಿಗಳಿಗೆ ಲಸಿಕೆ ನೀಡಲಿದ್ದು, ನಂತರದ ಹಂತಗಳಲ್ಲಿ ಫ್ರಂಟ್ ಲೈನ್ ವಾರಿಯರ್ಸ್’ಗಳಿಗೆ ಲಸಿಕೆ ನೀಡಲಾಗುತ್ತದೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















