ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಸಾಗರ: ರಾಜ್ಯದ ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸರ್ಕಾರ ತತಕ್ಷಣವೇ ಸ್ಪಂದಿಸಬೇಕು ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಎಬಿವಿಪಿ ವತಿಯಿಂದ ಇಂದು ಪ್ರತಿಭಟನೆ ನಡೆಸಲಾಯಿತು.
ಉಪವಿಭಾಗಾಧಿಕಾರಿ ಕಚೇರಿ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ನಗರ ಕಾರ್ಯದರ್ಶಿ ಅಭಿಷೇಕ್ ಎಂ ಶೆಟ್ಟಿ, ತಕ್ಷಣವೇ ಸರ್ಕಾರ ವಿದ್ಯಾರ್ಥಿಗಳ ಸಮಸ್ಯೆಗಳನ್ನು ಪರಿಹರಿಸಲು ಮುಂದಾಗಬೇಕು. ಉಪನ್ಯಾಸಕರನ್ನು ನೇಮಕಾತಿ ಮಾಡಬೇಕು ಎಂದು ಒತ್ತಾಯಿಸಿದರು.
ಇನ್ನು ಸಾಗರದ ಲಾಲ್ ಬಹಾದ್ದೂರ್ ಶಾಸ್ತ್ರಿ ಕಾಲೇಜಿನ ಬಳಿ ಬಸ್ ವ್ಯವಸ್ಥೆ ಸರಿ ಮಾಡಬೇಕು ಎಂದು ಆಗ್ರಹಿಸಿದ ಅವರು, ವಿದ್ಯಾರ್ಥಿ ವೇತನದ ಬಗ್ಗೆ ಹಾಗೂ ಹಾಸ್ಟೆಲ್’ನಲ್ಲಿ ಅಂತಿಮ ವರ್ಷಗಳ ವಿದ್ಯಾರ್ಥಿಗಳಲ್ಲದೇ ಎಲ್ಲಾ ವಿದ್ಯಾರ್ಥಿಗಳಿಗೂ ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿದರು.ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸಾಗರದ ಅಧ್ಯಕ್ಷರಾದ ಡಾ.ಶ್ರೀ ಪಾದ ಹೆಗಡೆ, ಸಹ ಕಾರ್ಯದರ್ಶಿ ಅಕ್ಷಯ್ ಕುಮಾರ್, ಶಿಲ್ಪ, ಪ್ರೀತಮ್ ಸೇರಿದಂತೆ ಹಲವರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post