No Result
View All Result
ಸಾಂಕ್ರಾಮಿಕವಲ್ಲದ ಕಾಯಿಲೆಗಳ ಬಗ್ಗೆ ಎಚ್ಚರ ಅವಶ್ಯ : ಡಾ. ಸುಶ್ರುತ ಗೌಡ
English Articles

Post-COVID Surge: Lifestyle Diseases Now Striking People in Their 40s, Warns Neurologist  Dr. Sushrutha Gowda

by ಕಲ್ಪ ನ್ಯೂಸ್
March 9, 2026
0

Kalpa Media House  |  Mysuru | Non-communicable diseases that were earlier seen mostly after the age of 60 are now...

Read moreDetails
Yamaha Introduces XSR155 in ‘Metallic Black’ shade

Yamaha Introduces XSR155 in ‘Metallic Black’ shade

March 9, 2026
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

March 5, 2026

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
Hotel Management Students Participate in Tree Census

Hotel Management Students Participate in Tree Census

March 2, 2026
  • Advertise With Us
  • Grievances
  • About Us
  • Contact Us
Tuesday, March 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಪೂರ್ಣ ಪ್ರಮಾಣದ ತರಗತಿಗಳ ಆರಂಭದ ಬಗ್ಗೆ ಶಿಕ್ಷಣ ಸಚಿವರು ಶಿವಮೊಗ್ಗದಲ್ಲಿ ಏನೆಂದರು?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 20, 2021
in ಶಿವಮೊಗ್ಗ
0
ಪೂರ್ಣ ಪ್ರಮಾಣದ ತರಗತಿಗಳ ಆರಂಭದ ಬಗ್ಗೆ ಶಿಕ್ಷಣ ಸಚಿವರು ಶಿವಮೊಗ್ಗದಲ್ಲಿ ಏನೆಂದರು?
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಪ್ರಸಕ್ತ ಶೈಕ್ಷಣಿಕ ವರ್ಷದ ಎಲ್ಲಾ ತರಗತಿಗಳನ್ನು ಪೂರ್ಣ ಪ್ರಮಾಣದಲ್ಲಿ ಆರಂಭ ಮಾಡಲು ತಾಂತ್ರಿಕ ಸಲಹಾ ಸಮಿತಿಯ ಅಭಿಪ್ರಾಯ ಪಡೆದು, ನಿಯಮಾನುಸಾರ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಶಿಕ್ಷಣ ಸಚಿವ ಎಸ್. ಸುರೇಶ್‌ಕುಮಾರ್ ಅವರು ಹೇಳಿದರು.

ಅವರು ಇಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್‌ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರೊಂದಿಗೆ ನಗರದಲ್ಲಿ ಸ್ಮಾರ್ಟ್‌ಸಿಟಿ ಹಾಗೂ ಸರ್ಕಾರದ ವಿವಿಧ ಯೋಜನೆಗಳಡಿಯಲ್ಲಿ ಅಭಿವೃದ್ಧಿಪಡಿಸಲಾದ ಶಾಲೆಗಳಿಗೆ ಭೇಟಿ ನೀಡಿ ಪ್ರಗತಿ ಪರಿಶೀಲಿಸಿದ ನಂತರ ನಗರದ ಕುವೆಂಪು ರಂಗಮಂದಿರದಲ್ಲಿ ಜಿಲ್ಲೆಯ ಪ್ರೌಢಶಾಲಾ ಶಿಕ್ಷಕರು, ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರು ಹಾಗೂ ಶಾಲಾಭಿವೃದ್ಧಿ ಸಮಿತಿಗಳೊಂದಿಗೆ ಏರ್ಪಡಿಸಲಾಗಿದ್ದ ಶಿಕ್ಷಣ ಸಂವಾದ ಕಾರ್ಯಕ್ರಮದಲ್ಲಿ ಶಿಕ್ಷಕರ ಅಹವಾಲುಗಳನ್ನು ಆಲಿಸಿ ಮಾತನಾಡುತ್ತಿದ್ದರು.ಸ್ಥಳೀಯ ಸಚಿವರ ಆಸಕ್ತಿ ಹಾಗೂ ದಾನಿಗಳ ನೆರವಿನಿಂದಾಗಿ ನಗರದ ಶಾಲೆಗಳು ಖಾಸಗಿ ಶಾಲೆಗಳಿಗೆ ಕಡಿಮೆ ಇಲ್ಲದಂತೆ ರೂಪುಗೊಂಡಿರುವುದು, ಯೋಗ ಶಿಕ್ಷಣ ನೀಡುತ್ತಿರುವುದು ರಾಜ್ಯಕ್ಕೆ ಮಾದರಿ ಎನಿಸಿದೆ. ಈ ಬೆಳವಣಿಗೆ ರಾಜ್ಯದ ಇತರೆ ಜಿಲ್ಲೆಗಳಲ್ಲೂ ಕಾಣುವಂತಾಗಬೇಕು. ಆಗ ಸಹಜವಾಗಿ ಸರ್ಕಾರಿ ಶಾಲೆಗಳ ವಾತಾವರಣ ಬದಲಾಗಲಿದೆ. ಬಡವರಿಗಾಗಿರುವ ಸರ್ಕಾರಿ ಶಾಲೆಗಳು ಉಳಿಯಬೇಕು ಎಂದ ಅವರು, ಪೋಷಕರಲ್ಲಿ ಖಾಸಗಿ ಶಾಲೆಗಳ ವ್ಯಾಮೋಹ ಹೆಚ್ಚಾಗಿದೆ. ಪೋಷಕರಿಗೆ ಸರ್ಕಾರಿ ಶಾಲೆಗಳ ಬಗ್ಗೆ ವಿಶ್ವಾಸ ಬರಬೇಕು ಎಂದರು.

ಅಲ್ಪ ಪ್ರಮಾಣದಲ್ಲಿ ಆರಂಭವಾಗಿರುವ ತರಗತಿಗಳಿಗೂ ಪೂರ್ಣ ಪ್ರಮಾಣದಲ್ಲಿ ಮಕ್ಕಳ ಹಾಜರಾತಿ ಇಲ್ಲ. ಕೆಲವು ಮಕ್ಕಳು ಬಾಲಕಾರ್ಮಿಕರಾಗಿ ಕೆಲವು ಕಡೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಾಹಿತಿಗಳು ಲಭ್ಯವಾಗಿವೆ. ಮಕ್ಕಳು ಶಿಕ್ಷಣದ ಮುಖ್ಯವಾಹಿನಿಗೆ ಕರೆತರುವಲ್ಲಿ ಶಿಕ್ಷಕರು ಪ್ರಾಮಾಣಿಕವಾಗಿ ಪ್ರಯತ್ನಿಸುವಂತೆ ಸೂಚಿಸಿದ ಅವರು, ಇಂದಿನ ಸಂದಿಗ್ಧ ಸಂದರ್ಭದಲ್ಲಿ ಆನ್‌ಲೈನ್ ಶಿಕ್ಷಣ ನಿರಂತರ ಶಿಕ್ಷಣ ಚಟುವಟಿಕೆಗಳಿಗೆ ಪರ್ಯಾಯವಲ್ಲ ಎಂದ ಅವರು, ನಡೆಯುತ್ತಿರುವ ತರಗತಿಗಳಿಗೆ ಮಕ್ಕಳ ಹಾಜರಾತಿ ಸುಧಾರಿಸಿದೆ. ಜೊತೆಗೆ ನಿರೀಕ್ಷೆಯಂತೆ ವಿದ್ಯಾಗಮ ತರಗತಿಗಳೂ ನಡೆಯುತ್ತಿವೆ. ಈ ಅವಧಿಯಲ್ಲಿ ಶಿಕ್ಷಕರು ಮಕ್ಕಳಿಗೆ ದಿನಪತ್ರಿಕೆಗಳಲ್ಲಿ ಬರುವ ಪ್ರೇರಣಾತ್ಮಕ ವಿಷಯಗಳನ್ನು ತಿಳಿಸಬೇಕು. ಅಲ್ಲದೆ ಹೆಚ್ಚಿನ ಸಂಖ್ಯೆಯ ಮಕ್ಕಳಿರುವ ಶಾಲೆಗಳಿಗೆ ಅತಿಥಿ ಶಿಕ್ಷಕರ ನೇಮಕಾತಿಗೆ ಅನುಮತಿ ನೀಡಲು ಈಗಾಗಲೇ ನಿರ್ಣಯ ಕೈಗೊಳ್ಳಲಾಗಿದೆ ಎಂದರು.ಪರೀಕ್ಷೆ ಎನ್ನುವುದು ಮಕ್ಕಳಿಗೆ ಶಿಕ್ಷೆ ಆಗದಿರಲಿ. ವಿದ್ಯಾರ್ಥಿಗಳಿಗೆ ಈಗಿರುವ ಸಮಯದ ಮಿತಿಯನ್ನು ಗಮನದಲ್ಲಿಟ್ಟುಕೊಂಡು ಪಠ್ಯಕ್ರಮ ಅಳವಡಿಸಲಾಗಿದೆ. ಪ್ರಶ್ನೆ ಪತ್ರಿಕೆಗಳ ರಚನೆಗೆ ಸಂಬಂಧಿಸಿದಂತೆ ಇಲಾಖಾ ಆಯುಕ್ತರೊಂದಿಗೆ ಸಮಾಲೋಚನೆ ನಡೆಸಲಾಗುವುದು. ಕಳೆದ ಸಾಲಿನಲ್ಲಿ ಅನೇಕ ಸವಾಲುಗಳ ನಡುವೆ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಯಿತು. ರಾಜ್ಯದ ಸುಮಾರು 8.50ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯುವಲ್ಲಿ ಶಿಕ್ಷಕರು ಅನುಸರಿಸಿದ ಕ್ರಮವನ್ನು ಸಚಿವರು ಶ್ಲಾಘಿಸಿದರು.

ಪ್ರಸ್ತುತ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಮಕ್ಕಳ ಶೈಕ್ಷಣಿಕ ಚಟುವಟಿಕೆಯನ್ನು ಗಮನದಲ್ಲಿಟ್ಟುಕೊಂಡು ಹಾಗೂ ಸಿ.ಇ.ಟಿ., ಜೆ.ಇ.ಇ., ಎನ್.ಇ.ಇ.ಟಿ. ಪರೀಕ್ಷೆಗೆ ಅಡ್ಡಿಯಾಗದಂತೆ ದಿನಾಂಕ ನಿಗಧಿಪಡಿಸಲಾಗಿದೆ. ಒಂದರಿಂದ ಐದನೇ ತರಗತಿಯ ವಿದ್ಯಾರ್ಥಿಗಳಿಗಾಗಿ ನಲಿಯುತ್ತಾ ಕಲಿಯೋಣ ರೇಡಿಯೋ ಪಾಠ ಸರಣಿಯನ್ನು ಪ್ರಸಾರಗೊಳಿಸಲಾಗುತ್ತಿದ್ದು, ಜನಪ್ರಿಯತೆ ಪಡೆದಿದೆ ಎಂದರು.

ಅತ್ಯಂತ ಶ್ರೇಷ್ಟ ಉತ್ಪಾದನಾ ಘಟಕ ಶಿಕ್ಷಣ ಇಲಾಖೆ. ಇಲ್ಲಿ ಮಾನಸಿಕ, ಬೌದ್ಧಿಕ ಬೆಳವಣಿಗೆಗಳ ಹಾಗೂ ಮೌಲ್ಯಗಳ ಉತ್ಪಾದನಾ ಘಟಕ ಎಂದು ಬಣ್ಣಿಸಿದ ಅವರು, ಶಿಕ್ಷಕ ಸ್ನೇಹಿ ವರ್ಗಾವಣಾ ನೀತಿಯನ್ನು ಅನುಷ್ಠಾನಗೊಳಿಸಲಾಗಿದೆ. ಈ ಹಿಂದೆ ಕಡ್ಡಾಯ ವರ್ಗಾವಣೆಗೊಂಡವರಿಗೆ ವರ್ಗಾವಣೆಯಲ್ಲಿ ಆದ್ಯತೆ ನೀಡಲಾಗುವುದು. ಈಗಾಗಲೇ ಅರ್ಹರಾದ 1200ಉಪನ್ಯಾಸಕರಿಗೆ ನೇಮಕಾತಿ ಪತ್ರ ವಿತರಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಗ್ರಾಮೀಣಾಭಿವೃದ್ಧಿ, ಪಂಚಾಯತ್‌ರಾಜ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಮಾತನಾಡಿ, ಶಿಕ್ಷಕರು ಶೌಚಾಲಯ ರಹಿತ ಶಾಲೆಗಳ ಮಾಹಿತಿ ನೀಡಿದಲ್ಲಿ ಮುಂದಿನ ಮೂರು ತಿಂಗಳ ಅವಧಿಯಲ್ಲಿ ಶೌಚಾಲಯ ಕಟ್ಟಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದ ಅವರು, ಶಾಲೆಗಳು ಸರಿಯಾದ ರೂಪಕ್ಕೆ ಬರಲು ಶಿಕ್ಷಕರು ಸ್ಥಳೀಯ ಶಾಸಕರನ್ನು ಭೇಟಿ ಮಾಡಿ ಮನವಿ ಮಾಡುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ಮಹಾನಗರಪಾಲಿಕೆ ಆಯುಕ್ತ ಚಿದಾನಂದ ಎಸ್.ವಟಾರೆ, ಕರ್ನಾಟಕ ರಾಜ್ಯ ಆರ್ಯವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್.ಅರುಣ್, ಪಾಲಿಕೆಯ ಮಹಾಪೌರರಾದ ಸುವರ್ಣ ಶಂಕರ್, ಉಪಮೇಯರ್ ಸುರೇಖಾ ಮುರಳೀಧರ್, ಜಿ.ಪಂ.ಸದಸ್ಯೆ ರೇಣುಕಾ ಹನುಮಂತಪ್ಪ, ಅಪರ ಜಿಲ್ಲಾಧಿಕಾರಿ ಅನುರಾಧ ಜಿ., ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎನ್.ಎಂ.ರಮೇಶ್ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳು, ಶಿಕ್ಷಕರ ಸಂಘದ ಪದಾಧಿಕಾರಿಗಳು, ಶಾಲಾ ಮುಖ್ಯೋಪಾಧ್ಯಾಯರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Kannada News WebsiteLatest News KannadaLocal NewsMalnad NewsS Suresh kumarSchoolShimogaShivamoggaShivamogga Newsಎಸ್. ಸುರೇಶ್‌ಕುಮಾರ್ಮಲೆನಾಡು ಸುದ್ಧಿಶಿವಮೊಗ್ಗಶಿವಮೊಗ್ಗ ನ್ಯೂಸ್ಶೈಕ್ಷಣಿಕ ವರ್ಷ
Share196Tweet123Send
Previous Post

ಡಾ.ಜಯಪ್ರಕಾಶ್ ನಿಧನ ವೈದ್ಯಕೀಯ ಲೋಕಕ್ಕೆ ತುಂಬಲಾರದ ನಷ್ಟ: ಡಾ.ನಾಗೇಂದ್ರ ಕಂಬನಿ

Next Post

ಶಾಲಾ ಸಮಯವನ್ನು ಬೆಳಗ್ಗೆ 10ರಿಂದ 4.30ಕ್ಕೆ ನಿಗದಿಗೊಳಿಸಿ: ಸಚಿವರಿಗೆ ಶಿಕ್ಷಕರ ಸಂಘದಿಂದ ಮನವಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಾಲಾ ಸಮಯವನ್ನು ಬೆಳಗ್ಗೆ 10ರಿಂದ 4.30ಕ್ಕೆ ನಿಗದಿಗೊಳಿಸಿ: ಸಚಿವರಿಗೆ ಶಿಕ್ಷಕರ ಸಂಘದಿಂದ ಮನವಿ

ಶಾಲಾ ಸಮಯವನ್ನು ಬೆಳಗ್ಗೆ 10ರಿಂದ 4.30ಕ್ಕೆ ನಿಗದಿಗೊಳಿಸಿ: ಸಚಿವರಿಗೆ ಶಿಕ್ಷಕರ ಸಂಘದಿಂದ ಮನವಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಶಿವಮೊಗ್ಗ | ಗಾಜನೂರು ಫಾರೆಸ್ಟ್ ವಾಚರ್ಸ್’ಗೆ ಸಾಂತ್ವನ ಟ್ರಸ್ಟ್’ನಿಂದ ಜಾಕೆಟ್ ಕೊಡುಗೆ

ಶಿವಮೊಗ್ಗ | ಗಾಜನೂರು ಫಾರೆಸ್ಟ್ ವಾಚರ್ಸ್’ಗೆ ಸಾಂತ್ವನ ಟ್ರಸ್ಟ್’ನಿಂದ ಜಾಕೆಟ್ ಕೊಡುಗೆ

March 9, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಈ ದಿನಗಳು ಮೈಸೂರು – ಶಿವಮೊಗ್ಗ – ತಾಳಗುಪ್ಪ ರೈಲು ಸಂಚಾರ ರದ್ದು

March 9, 2026
ಒಮಿನಿ ಕಾರಿನಲ್ಲಿ ಅಕಸ್ಮಿಕ ಬೆಂಕಿ | ತಪ್ಪಿದ ಭಾರೀ ಅನಾಹುತ

ಒಮಿನಿ ಕಾರಿನಲ್ಲಿ ಅಕಸ್ಮಿಕ ಬೆಂಕಿ | ತಪ್ಪಿದ ಭಾರೀ ಅನಾಹುತ

March 9, 2026
ಅಪಘಾತಕ್ಕೊಳಗಾದ ಮಗನ ಬಹು ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ಪೋಷಕರು

ಅಪಘಾತಕ್ಕೊಳಗಾದ ಮಗನ ಬಹು ಅಂಗಾಂಗ ದಾನ ಮಾಡಿ ಮಾನವೀಯತೆ ಮೆರೆದ ಪೋಷಕರು

March 9, 2026
ಶ್ರೀಗಂಧ ಮರ ಕಡಿದು ಕಳ್ಳ ಸಾಗಾಣಿಕೆ | ಮೂವರ ಬಂಧನ

ಶ್ರೀಗಂಧ ಮರ ಕಡಿದು ಕಳ್ಳ ಸಾಗಾಣಿಕೆ | ಮೂವರ ಬಂಧನ

March 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL