ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಕರ್ನಾಟಕ ಸಣ್ಣ ಕೈಗಾರಿಕೆ ಅಭಿವೃದ್ಧಿ ನಿಗಮದ ಕಾರ್ಯ ಚಟುವಟಿಕೆಗಳು ಹಾಗೂ ರಾಜ್ಯದಲ್ಲಿರುವ ಕೈಗಾರಿಕಾ ವಸಾಹತುಗಳ (ಇಂಡಸ್ಟ್ರಿಯಲ್ ಎಸ್ಟೇಟ್) ಸಮಸ್ಯೆಗಳ ಬಗ್ಗೆ ಚರ್ಚಿಸಿ ಪರಿಹಾರ ಕಂಡುಕೊಳ್ಳಬೇಕು ಎಂದು ಕೆಎಸ್’ಎಸ್’ಐಡಿಸಿ ಉಪಾಧ್ಯಕ್ಷ ಎಸ್. ದತ್ತಾತ್ರಿ ಅವರು ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರಿಗೆ ಮನವಿ ಮಾಡಿದ್ದಾರೆ.
ಕೆಎಸ್’ಎಸ್’ಐಡಿಸಿ ಕೇಂದ್ರ ಕಚೇರಿಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಕೆಎಸ್’ಎಸ್’ಐಡಿಸಿಯ ಅಧ್ಯಕ್ಷರು ಹಾಗೂ ರೋಣ ಕ್ಷೇತ್ರದ ಶಾಸಕರಾದ ಕಳಕಪ್ಪ ಬಂಡಿ ಹಾಗೂ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ರಾಜ್ಯದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















