ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಚಳ್ಳಕೆರೆ: 12ನೆಯ ಶತಮಾನದಲ್ಲಿ ಜೀವಿಸಿದ್ಧ ಶಿವಶರಣ ಹಾಗೂ ವಚನಕಾರರು. ಉಳಿದೆಲ್ಲ ವಚನಕಾರರಿಗಿಂತ ಭಿನ್ನ ಹಾಗೂ ವಿಶಿಷ್ಟ ವ್ಯಕ್ತಿತ್ವ ಅಂಬಿಗರ ಚೌಡಯ್ಯನವರು ಎಂದು ಶಾಸಕ ಟಿ. ರಘುಮೂರ್ತಿ ಬಣ್ಣಿಸಿದರು.
ತಾಲೂಕು ಕಚೇರಿ ಆವರಣದಲ್ಲಿ ಗುರುವಾರ ರಾಷ್ಟೀಯ ಹಬ್ಬಗಳ ಆಚರಣೆ ಸಮಿತಿ ಹಾಗೂ ತಾಲೂಕು ಆಡಳಿತ ವತಿಯಿಂದ ನಡೆದ ಅಂಬಿಗರ ಚೌಡಯ್ಯ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಅಂಬಿಗರ ಚೌಡಯ್ಯ ಇವರ ಭಾವ ಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಅವರು ಮಾತನಾಡಿದರು.ಬಸವಣ್ಣನವರ ಅನುಭವ ಮಂಟಪದಲ್ಲಿ ಸಮಾನ ಭೂಮಿಕೆಯ ಸಮ್ಮೇಳನದಲ್ಲಿ ಸೇರಿಕೊಂಡವರು ಇವರು. ತನ್ನ ಕಾಯಕ ಅಥವಾ ವ್ಯಕ್ತಿನಾಮವಾದ ಅಂಬಿಗರ ಚೌಡಯ್ಯ ಎಂಬುದೇ ಈತನ ವಚನಗಳ ಅಂಕಿತವಾಗಿದೆ. ತೀಕ್ಷ್ಣ ವಚನಗಳಿಂದ ಶರಣರ ವಚನಕ್ರಾಂತಿಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದವರು ಅಂಬಿಗರ ಚೌಡಯ್ಯ. ಬಸವ ಬಾನಂಗಳದಲ್ಲಿ ಶಿವಶರಣರೆಂಬ ಅಮೂಲ್ಯ ನಕ್ಷತ್ರಗಳು ಮಿನುಗಿದವು. ಈ ನಕ್ಷತ್ರಗಳಲ್ಲಿ ಧ್ರುವತಾರೆಯಂತೆ ಮಿನುಗಿದವರು ಚೌಡಯ್ಯ ಎಂದರು.
ವೃತ್ತಿಯಿಂದ ಅಂಬಿಗ, ಪ್ರವೃತ್ತಿಯಲ್ಲಿ ಅನುಭವಿ. ನೇರ ನಿರ್ಭೀತ ನುಡಿಗಳಿಂದ ವಚನಗಳನ್ನು ಬರೆದಿರುವುದು ಗೋಚರಿಸುತ್ತದೆ ಎಂದು ಅಕ್ಷರ ನಮನ ಸಲ್ಲಿಸಿದರು.
(ವರದಿ: ಸುರೇಶ್ ಬೆಳಗೆರೆ, ಚಳ್ಳಕೆರೆ)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post