Kalpa News Digital Media
ಶಿವಮೊಗ್ಗ: ಜಿಲ್ಲೆಯ ಹುಣಸವಾಡಿ ಎಂಬಲ್ಲಿ ರೈಲ್ವೆ ಕ್ರಷನ್’ನಲ್ಲಿ ಸಂಭವಿಸಿದ ಭಾರೀ ಸ್ಪೋಟದ ಪರಿಣಾಮ ಜಿಲ್ಲೆಯಲ್ಲಿ ಭಾರೀ ಶಬ್ದ ಹಾಗೂ ಕಂಪನ ಸಂಭವಿಸಿದೆ ಎಂದು ವರದಿಯಾಗಿದೆ.
ಈ ಕುರಿತಂತೆ ಕಲ್ಪ ನ್ಯೂಸ್’ಗೆ ಮಾಹಿತಿ ತಿಳಿದು ಬಂದಿದ್ದು, ಶಿವಮೊಗ್ಗ ತಾಲೂಕಿನ ಅಬ್ಬಲಗೆರೆಯಲ್ಲಿ ರೈಲ್ವೆ ಕ್ವಾರಿಯಲ್ಲಿ ಸಂಭವಿಸಿದ ಭಾರೀ ಸ್ಪೋಟದ ಪರಿಣಾಮ ಕಂಪನ ಸಂಭವಿಸಿದೆ. 50 ಡೈನಾಮೆಟ್ ಏಕಕಾಲದಲ್ಲಿ ಸ್ಫೋಟಗೊಂಡ ಪರಿಣಾಮ ಘಟನೆ ಸಂಭವಿಸಿದೆ.
ಘಟನೆಯಲ್ಲಿ ಬಿಹಾರ ಮೂಲದ 10 ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದ್ದು, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ರಕ್ಷಣಾಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದಾರೆ.
ಆದರೆ, ಲಾರಿ ಸ್ಫೋಟಗೊಂಡ ಸನಿಹದ ಗ್ರಾಮಸ್ಥರು ಹೇಳುವಂತೆ ಸ್ಪೋಟ ಸಂಭವಿಸುವ ಮುನ್ನವೇ ಭೂಮಿ ಕಂಪಿಸಿದ ಅನುಭವ ನಮಗೆ ಆಗಿತ್ತು. ಕಂಪನದ ಅನುಭವ ಆದ ಕೆಲವೇ ಸೆಕೆಂಡುಗಳಲ್ಲಿ ಡೈನಾಮೆಟ್ ಸ್ಪೋಟಗೊಂಡಿದೆ ಎಂದು ಹೇಳುತ್ತಾರೆ.
ಭೂಮಿ ಕಂಪಿಸಿದ ನಂತರ ಜಿಲೆಟಿನ್ ಕಡ್ಡಿಗಳು ಹಾಗೂ ಡೈನಾಮೆಟ್ ಸ್ಫೋಟಗೊಂಡಿದೆ ಎಂದು ಹೇಳಲಾಗುತ್ತಿದ್ದರೂ, ನಿಖರ ಮಾಹಿತಿ ತಿಳಿದುಬಂದಿಲ್ಲ.
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: 9481252093 – info@kalpa.news







Discussion about this post