ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: 06228 ಸಂಖ್ಯೆ ತಾಳಗುಪ್ಪ-ಬೆಂಗಳೂರು-ಮೈಸೂರು ರಾತ್ರಿ ಎಕ್ಸ್’ಪ್ರೆಸ್ ರೈಲು ಸಂಚಾರದ ಸಮಯವನ್ನು ಪ್ರಯಾಣಿಕರ ಅನುಕೂಲಕ್ಕಾಗಿ ಕೊಂಚ ಬದಲಾವಣೆ ಮಾಡಲಾಗಿದೆ.
ಈ ಕುರಿತಂತೆ ರೈಲ್ವೆ ಇಲಾಖೆ ಆದೇಶ ಹೊರಡಿಸಿದ್ದು, ನೂತನ ಸಂಚಾರ ಸಮಯ ಜ.31ರಿಂದ ಜಾರಿಗೆ ಬರಲಿದೆ.
ನೂತನ ಸಮಯ?
ಸದ್ಯ ಇರುವ ಸಮಯದಂತೆ ರಾತ್ರಿ ತಾಳಗುಪ್ಪ-ಶಿವಮೊಗ್ಗದಿಂದ ಹೊರಡುವ ರೈಲು ನಸುಕಿನ 3.50ಕ್ಕೆ ಬೆಂಗಳೂರಿನ ಮೆಜೆಸ್ಟಿಕ್ ತಲುಪುತ್ತಿತ್ತು. ಆದರೆ, ಬೆಂಗಳೂರು ತಲುಪುವ ಸಮಯವನ್ನು ಬದಲಾವಣೆ ಮಾಡಲಾಗಿದೆ.
ಈ ರೈಲು ನಸುಕಿನ 3.50ಕ್ಕೆ ತಲುಪುತ್ತಿದ್ದರಿಂದ ಬೆಂಗಳೂರಿನಲ್ಲಿ ವಿವಿಧ ಕಡೆಗಳಿಗೆ ತೆರಳುವ ಪ್ರಯಾಣಿಕರಿಗೆ ತೊಂದರೆಯಾಗುತ್ತಿತ್ತು. ಹೀಗಾಗಿ, ಸಾರ್ವಜನಿಕ ವಲಯದಿಂದ ಮನವಿಗಳು ಬಂದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿದ ಸಂಸದ ಬಿ.ವೈ. ರಾಘವೇಂದ್ರ ಅವರು ಸಮಯವನ್ನು ಬದಲಾವಣೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news









Discussion about this post