ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ತೀರ್ಥಹಳ್ಳಿ: ಸ್ನಾನಕ್ಕೆಂದು ತುಂಗಾ ನದಿಗೆ ಇಳಿದಿದ್ದ ಇಬ್ಬರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ರಥಬೀದಿಯ ರಾಮಕೊಂಡದ ಎದುರು ನೀರಿಗೆ ಬಿದ್ದು ಇಬ್ಬರು ಐಟಿಐ ಕಾಲೇಜಿನ ವಿದ್ಯಾರ್ಥಿಗಳು ಮೃತಪಟ್ಟಿರುರುವ ಘಟನೆ ನಡೆದಿದೆ. ವಿದ್ಯಾರ್ಥಿಗಳಾದ ಶೃಂಗೇರಿಯ ಕಿರಣ್ ಹಾಗೂ ಮಾಸ್ತಿಕಟ್ಟೆಯ ನೀಲಕಂಠ ಎಂಬುವವರು ಮೃತ ವಿದ್ಯಾರ್ಥಿಗಳು.
ನಿನ್ನೆ ದಿನ ಹುಟ್ಟು ಹಬ್ಬದ ಪಾರ್ಟಿ ಮಾಡಿ, ಮೋಜು- ಮಸ್ತಿ ಮಾಡಿ ಹೊಳೆಯಲ್ಲಿ ಸ್ನಾನಕ್ಕೆ ತೆರಳಿದ್ದು ಮುಳುಗಿ ಸಾವನ್ನಪ್ಪಿದ್ದಾರೆ. ಇಬ್ಬರ ಶವಗಳನ್ನು ನೀರಿನಿಂದ ಹೊರಕ್ಕೆ ತೆರೆಯಲಾಗಿದೆ.
ತೀರ್ಥಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















