ಶಿವಮೊಗ್ಗ: ಪಲ್ಸ್ ಪೋಲಿಯೊ ಕಾರ್ಯಕ್ರಮ ಜನವರಿ 31ರಂದು ನಡೆಯಲಿದ್ದು, 5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಪೋಲಿಯೊ ಹನಿಯನ್ನು ಹಾಕಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜೇಶ್ ಸುರಗಿಹಳ್ಳಿ ಅವರು ಮನವಿ ಮಾಡಿದ್ದಾರೆ.ಹತ್ತಿರದ ಅಂಗನವಾಡಿ ಕೇಂದ್ರ, ಶಾಲೆ, ಆರೋಗ್ಯ ಉಪಕೇಂದ್ರ, ಪ್ರಾಥಮಿಕ ಮತ್ತು ಸಮುದಾಯ ಆರೋಗ್ಯ ಕೇಂದ್ರ, ಸಾರ್ವಜನಿಕ ಆಸ್ಪತ್ರೆ, ಬಸ್ ನಿಲ್ದಾ,ಣ, ರೈಲ್ವೇ ನಿಲ್ದಾಣಗಳಲ್ಲಿ ಬೆಳಿಗ್ಗೆ 7ರಿಂದ ಲಸಿಕಾ ಬೂತ್‌ಗಳು ತೆರೆದಿರುತ್ತವೆ. ಈ ಹಿಂದೆ ಎಷ್ಟೇ ಬಾರಿ ಲಸಿಕೆ ಹಾಕಿಸಿದ್ದರೂ, ಈ ಬಾರಿಯೂ ತಪ್ಪದೇ ಮಕ್ಕಳಿಗೆ ಲಸಿಕೆಯನ್ನು ಹಾಕಿಸಬೇಕು ಎಂದು ಅವರು ಹೇಳಿದ್ದಾರೆ.
Discussion about this post