No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Friday, September 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ವಿಷ್ಣುಗುಪ್ತ ವಿಶ್ವ ವಿದ್ಯಾಪೀಠದಿಂದ ಹಾಲಕ್ಕಿ, ಮುಕ್ರಿ ಸಮಾಜಕ್ಕೆ ಎರಡು ವಿಶೇಷ ಗುರುಕುಲ

kalpa News by kalpa News
February 9, 2021
in Small Bytes, ಉತ್ತರ ಕನ್ನಡ
0
ವಿಷ್ಣುಗುಪ್ತ ವಿಶ್ವವಿದ್ಯಾಪೀಠ: ಅಧ್ಯಯನಕ್ಕೆ ಅರ್ಜಿ ಆಹ್ವಾನ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಗೋಕರ್ಣ: ಧರ್ಮಜಾಗೃತಿ ಹಾಗೂ ಭಾರತೀಯ ಸಂಸ್ಕೃತಿಯ ಪುನರುತ್ಥಾನದ ಉದ್ದೇಶದಿಂದ ಶ್ರೀರಾಮಚಂದ್ರಾಪುರ ಮಠ ಆರಂಭಿಸಿರುವ ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಈ ವರ್ಷ ಹಾಲಕ್ಕಿ ಗುರುಕುಲ ಮತ್ತು ಚಂದ್ರಗುಪ್ತ ಗುರುಕುಲ ಎರಡು ವಿಶಿಷ್ಟ ಗುರುಕುಲಗಳನ್ನು ಸಮಾಜಕ್ಕೆ ಸಮರ್ಪಿಸುತ್ತಿದೆ.

ವಿವಿವಿ ಈಗಾಗಲೇ ಆರಂಭಿಸಿರುವ ಗುರುಕುಲಗಳಿಗೆ ಸಮಾಜದಿಂದ ಅದ್ಭುತ ಸ್ಪಂದನೆ ವ್ಯಕ್ತವಾಗಿದ್ದು, ಬೆಳೆಯುವ ಕುಡಿಗಳ ಉತ್ಸಾಹದಿಂದ ಸ್ಫೂರ್ತಿ ಪಡೆದು ಹಾಲಕ್ಕಿ ಸಂಸ್ಕೃತಿಯ ಸಂರಕ್ಷಣೆ ಮತ್ತು ಸಂವರ್ಧನೆ ಉದ್ದೇಶದಿಂದ ಹಾಲಕ್ಕಿ ಗುರುಕುಲ ಹಾಗೂ ಪರಿಶಿಷ್ಟ ವರ್ಗಕ್ಕೆ ಸೇರಿದ ಮುಕ್ರಿ ಸಮಾಜದ ಸರ್ವಾಂಗೀಣ ಅಭಿವೃದ್ಧಿ ಉದ್ದೇಶದ ಚಂದ್ರಗುಪ್ತ ಗುರುಕುಲಗಳನ್ನು ಮುಂದಿನ ಶೈಕ್ಷಣಿಕ ವರ್ಷದಿಂದ ಗೋಕರ್ಣದಲ್ಲಿ ಆರಂಭಿಸಲಾಗುತ್ತಿದೆ.

ಚಂದ್ರಗುಪ್ತ ಚಕ್ರವರ್ತಿ ನೈಜವಾಗಿ ನಿಮ್ನವರ್ಗಕ್ಕೆ ಸೇರಿದವ. ಆದರೆ ಸಂಸ್ಕಾರ- ಶಿಕ್ಷಣ ನೀಡಿ ಚಾಣಕ್ಯ ಆತನನ್ನು ಚಕ್ರವರ್ತಿಯಾಗಿ ಬೆಳೆಸಿದ್ದರಿಂದ ಸ್ಫೂರ್ತಿ ಪಡೆದು ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಸಮಾಜದ ಒಂದು ನಿರ್ಲಕ್ಷಿತ ವರ್ಗವಾದ ಮುಕ್ರಿ ಜನಾಂಗದ ಮಕ್ಕಳನ್ನು ಸವ್ಯಸಾಚಿ ಮುಖಂಡರನ್ನಾಗಿ ಬೆಳೆಸುವ ಪಣತೊಟ್ಟಿದೆ.
ಈ ಎರಡು ವಿಶೇಷ ಗುರುಕುಲಗಳಿಗಾಗಿಯೇ ಸುಮಾರು 10 ಕೋಟಿ ರೂಪಾಯಿ ಅಂದಾಜು ವೆಚ್ಚದಲ್ಲಿ ಈ ಎರಡೂ ಸಮುದಾಯಗಳ ವೈಶಿಷ್ಟ್ಯಗಳ ಮೇಲೆ ಬೆಳಕು ಚೆಲ್ಲುವ ಪರಿಸರವನ್ನು ನಿರ್ಮಿಸಿ ಗುರುಕುಲ ಸ್ಥಾಪಿಸಲಾಗುತ್ತಿದೆ.

ಎರಡೂ ಗುರುಕುಲಗಳಲ್ಲಿ 2021-22ನೇ ಶೈಕ್ಷಣಿಕ ವರ್ಷ ಆರನೇ ತರಗತಿ ಆರಂಭಿಸಲಾಗುತ್ತದೆ. ಭಾರತೀಯ ಪಾರಂಪರಿಕ ಶಿಕ್ಷಣದ ಜತೆಗೆ ಎನ್‌ಐಓಎಸ್ ಪಠ್ಯಕ್ರಮದ ಆಧುನಿಕ ಶಿಕ್ಷಣವನ್ನು ನೀಡಲು ಉದ್ದೇಶಿಸಲಾಗಿದೆ. ಇಲ್ಲಿ ಸನಿವಾಸ ಶಿಕ್ಷಣದ ಜತೆಗೆ ಪ್ರತಿ ದಿನ ತಮ್ಮ ಮನೆಗಳಿಂದಲೇ ಬಂದು ಅಧ್ಯಯನ ಮಾಡಲೂ ಅವಕಾಶ ಕಲ್ಪಿಸಲಾಗುತ್ತಿದೆ.

ಎರಡೂ ಗುರುಕುಲಗಳಲ್ಲಿ ಆಯಾ ಸಮಾಜದ ವಿಶಿಷ್ಟ ಕಲೆ, ಸಂಸ್ಕೃತಿ, ಆಚಾರ- ವಿಚಾರ, ಆಹಾರ- ವಿಹಾರ, ಸಂಪ್ರದಾಯ, ನಂಬಿಕೆಗಳ ಆಮೂಲಾಗ್ರ ಪರಿಚಯ ಮಾಡಿಕೊಡುವ ಜತೆಗೆ ಹಿಂದೂ ಸಂಸ್ಕೃತಿಯ ಉಚ್ಛ ಸಂಸ್ಕಾರ, ಉತ್ಕೃಷ್ಟ ಸಮಕಾಲೀನ ಶಿಕ್ಷಣ ನೀಡುವ ಮೂಲಕ ಅವರನ್ನು ಸಮಾಜದ ಆಸ್ತಿಯಾಗಿ ಬೆಳೆಸುವುದು ಉದ್ದೇಶ. ಭಾರತದ ಪ್ರತಿಯೊಂದು ಪಾರಂಪರಿಕ ವಿದ್ಯೆಯೂ ಪಾಶ್ಚಿಮಾತ್ಯ ದಾಳಿಯ ಪ್ರಭಾವಕ್ಕೆ ಸಿಲುಕಿ ರೂಪು ಗೆಟ್ಟಿದೆ ಅಥವಾ ಅರ್ಥ ಕಳೆದುಕೊಂಡಿದೆ. ಉಳಿದವು ಅಳಿವಿನ ಅಂಚಿನಲ್ಲಿವೆ. ಅಳಿದುಳಿದ ವಿದ್ಯೆಗಳ ಪುನರುಜ್ಜೀವನ ತಳಮಟ್ಟದಿಂದಲೇ ಆರಂಭಿಸಬೇಕೆಂಬ ಪರಿಕಲ್ಪನೆಯೊಂದಿಗೆ ಗುರುಕುಲಗಳು ಕಾರ್ಯಾರಂಭ ಮಾಡಿವೆ.


ಕೊರೋನಾ ಮಹಾಮಾರಿಯ ನಡುವೆಯೂ ಮೊದಲ ವರ್ಷವೇ ವಿವಿವಿ ಗುರುಕುಲಗಳಿಗೆ ಅದ್ಭುತ ಸ್ಪಂದನೆ ವ್ಯಕ್ತವಾಗಿದ್ದು, ಹಂತ ಹಂತವಾಗಿ ಉನ್ನತ ಶಿಕ್ಷಣಕ್ಕೆ ವಿವಿವಿ ತೆರೆದುಕೊಳ್ಳಲಿದೆ. ಈ ನಿಟ್ಟಿನಲ್ಲಿ ವಿವಿವಿ ವಿದ್ಯಾ ಪರಿಷತ್ ಹಾಗೂ ವ್ಯವಸ್ಥಾ ಪರಿಷತ್ ಕಾರ್ಯ ಯೋಜನೆ ಹಾಕಿಕೊಂಡಿದ್ದು, ಪೂರ್ಣ ಪ್ರಮಾಣದಲ್ಲಿ ಕಾರ್ಯಾರಂಭವಾದಾಗ ವಿವಿವಿ ತಕ್ಷಶಿಲೆಯ ಪುನರವತರಣ ಎನಿಸಿಕೊಳ್ಳಲಿದೆ.

ಹಾಲಕ್ಕಿ ಗುರುಕುಲ
ಭಾರತೀಯ ಸಂಸ್ಕೃತಿ ನೂರಾರು- ಸಾವಿರಾರು ಜನಾಂಗ, ಬುಡಕಟ್ಟುಗಳ ಸಂಸ್ಕೃತಿಯ ವಿಶ್ವರೂಪ. ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲ, ಕುಮಟಾ, ಹೊನ್ನಾವರ ತಾಲೂಕುಗಳಲ್ಲಿ ಅಧಿಕ ಸಂಖ್ಯೆಯಲ್ಲಿ ಕಂಡುಬರುವ ಹಾಲಕ್ಕಿ ಸಮಾಜದ ವಿಶಿಷ್ಟ ಪರಂಪರೆ, ಸಂಸ್ಕೃತಿ, ಆಚಾರ- ವಿಚಾರ, ಜಾನಪದ ಸಂಸ್ಕೃತಿ, ಕಲೆ, ಹಬ್ಬ ಹರಿದಿನಗಳ ಆಚರಣೆ, ಮಾತು, ವೇಷಭೂಷಣ, ಉಡುಗೆ ತೊಡುಗೆ, ಆಹಾರ- ವಿಹಾರಗಳ ಸಂರಕ್ಷಣೆ- ಸಂವರ್ಧನೆಯ ಮೂಲ ಉದ್ದೇಶದೊಂದಿಗೆ ಹಾಲಕ್ಕಿ ಗುರುಕುಲ ಸ್ಥಾಪನೆಯಾಗುತ್ತಿದೆ.

ಹಾಲಕ್ಕಿ ಜನಾಂಗ ಹುಟ್ಟಿ ಬೆಳೆದ ಪರಿಸರವನ್ನೇ ನಿರ್ಮಿಸಿ ಅವರ ಸಂಸ್ಕೃತಿಯ ಶ್ರೇಷ್ಠತೆಯನ್ನು ಬಾಲ್ಯದಲ್ಲೇ ಮಕ್ಕಳಿಗೆ ಪರಿಚಯಿಸಿ ಅಭಿಮಾನ ಬೆಳೆಸಿ ಅವುಗಳ ಸಂರಕ್ಷಣೆಗೆ ಸಮಾಜಯೋಧರನ್ನು ಸೃಷ್ಟಿಸುವುದು ಗುರುಕುಲದ ಆಶಯ. ಹಂತಹಂತವಾಗಿ ಹಾಲಕ್ಕಿ ಸಮಾಜದ ಬಗೆಗಿನ ಸಮಗ್ರ ಅಧ್ಯಯನಕ್ಕೆ ಶಾಶ್ವತ ಕೇಂದ್ರವಾಗಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ.

ಚಂದ್ರಗುಪ್ತ ಗುರುಕುಲ
ಸಮಗ್ರ ವಿಕಾಸಕ್ಕೆ ಸಮಗ್ರ ಶಿಕ್ಷಣವೊಂದೇ ಸಾಧನ; ಸಮಾಜದ ಯಾವ ವರ್ಗವೂ ಜ್ಞಾನ ಪರಂಪರೆಯಿಂದ ವಂಚಿತವಾಗಬಾರದು ಎಂಬ ಆಶಯದೊಂದಿಗೆ ಪರಿಶಿಷ್ಟರಿಗಾಗಿ ಅದರಲ್ಲೂ ವಿಶೇಷವಾಗಿ ಈ ಭಾಗದ ಮುಕ್ರಿ ಸಮಾಜದ ಸರ್ವಾಂಗೀಣ ಅಭಿವೃದ್ಧಿ ಉದ್ದೇಶದಿಂದ ಚಂದ್ರಗುಪ್ತನ ಹೆಸರಿನ ಗುರುಕುಲ ಆರಂಭಿಸಲಾಗುತ್ತಿದೆ.

ಈ ಭಾಗದ ಎರಡು ಹಿಂದುಳಿದ ಸಮಾಜಗಳಾದ ಹಾಲಕ್ಕಿ ಮತ್ತು ಮುಕ್ರಿ ಸಮಾಜಗಳು ಶ್ರೀಮಠದ ಪಾರಂಪರಿಕ ಶಿಷ್ಯವರ್ಗದಲ್ಲಿ ಸೇರಿದ್ದು, ಇವರಅಭಿವೃದ್ಧಿಯನ್ನು ಶ್ರೀಮಠ ಆದ್ಯತೆಯಾಗಿ ಪರಿಗಣಿಸಿದೆ. ಈ ಜನಾಂಗಗಳು ತಮ್ಮ ವೈಶಿಷ್ಟ್ಯ ಮತ್ತು ಸ್ವಂತಿಕೆಯನ್ನು ಉಳಿಸಿಕೊಂಡೇ, ಸಮಾಜದ ಮುಖ್ಯವಾಹಿನಿ ಸೇರುವಂತಾಗಬೇಕು ಎಂಬ ಉದ್ದೇಶದಿಂದ ಎನ್‌ಐಓಎಸ್ ಪಠ್ಯಕ್ರಮದಂತೆ ಸಮಕಾಲೀನ ಶಿಕ್ಷಣ ನೀಡುವ ಜತೆಗೆ, ಭಾರತೀಯ ಕಲೆ- ಸಂಸ್ಕೃತಿಯ ಸಮಗ್ರ ಪರಿಚಯ, ಪಾರಂಪರಿಕ ಶಿಕ್ಷಣ, ವಿಶೇಷ ಕೌಶಲ, ಸಮಗ್ರ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಜೀವನ ಶಿಕ್ಷಣ ಬೋಧಿಸಲಾಗುತ್ತದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: GokarnaIndian CultureMukri CommunitySri Ramachandrapur MathUttara Kannadavishnugupta universityಉತ್ತರ ಕನ್ನಡಗೋಕರ್ಣಭಾರತೀಯ ಸಂಸ್ಕೃತಿಮುಕ್ರಿ ಸಮಾಜವಿಷ್ಣುಗುಪ್ತ ವಿಶ್ವ ವಿದ್ಯಾಪೀಠಶ್ರೀರಾಮಚಂದ್ರಾಪುರ ಮಠಹಾಲಕ್ಕಿ ಗುರುಕುಲ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಿಎಂ ಪರಿಹಾರ ನಿಧಿಗೆ ಎಂಎಸ್‌‘ಐಎಲ್ ವತಿಯಿಂದ 1 ಕೋಟಿ ರೂ. ದೇಣಿಗೆ ನೀಡಿದ ಅಧ್ಯಕ್ಷ ಹಾಲಪ್ಪ

Next Post

ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯ ತಲುಪಿಸುವುದು ನಮ್ಮ ಗುರಿ: ಡಿಸಿ ಶಿವಕುಮಾರ್ ಅಭಿಮತ

kalpa News

kalpa News

Next Post
ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯ ತಲುಪಿಸುವುದು ನಮ್ಮ ಗುರಿ: ಡಿಸಿ ಶಿವಕುಮಾರ್ ಅಭಿಮತ

ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯ ತಲುಪಿಸುವುದು ನಮ್ಮ ಗುರಿ: ಡಿಸಿ ಶಿವಕುಮಾರ್ ಅಭಿಮತ

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL