ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಬಹು ನಿರೀಕ್ಷಿತ ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪಮೇಯರ್ ಸ್ಥಾನದ ಮೀಸಲಾತಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿದ್ದು, ಈ ಎರಡೂ ಸ್ಥಾನಗಳಿಗೆ ಪೈಪೋಟಿ ಆರಂಭವಾಗಿದೆ.
ಸದರಿ ಪ್ರಕಟವಾಗಿರುವ ಮೀಸಲಾತಿ ಅನ್ವಯ ಹಾಗೂ ೨೯ನೆಯ ವಾರ್ಡಿನಿಂದ ಸತತ ಮೂರು ಬಾರಿ ಆಯ್ಕೆಯಾಗಿ ಹ್ಯಾಟ್ರಿಕ್ ಗೆಲುವು ಪಡೆದ ಪಾಲಿಕೆ ಸದಸ್ಯೆ ಸುನೀತಾ ಅಣ್ಣಪ್ಪ ಮೇಯರ್ ಆಗಿ ಆಯ್ಕೆಯಾಗುವುದು ಖಚಿತವಾಗಿದೆ ಎಂದು ಹೇಳಲಾಗಿದೆ.
ಇನ್ನು ಉಪಮೇಯರ್ ಸ್ಥಾನಕ್ಕಾಗಿ ಗನ್ನಿ ಶಂಕರ್, ಎಸ್. ಜ್ಞಾನೇಶ್ವರ್ ರೇಸಿನಲ್ಲಿದ್ದು ವರಿಷ್ಠರು ಗನ್ನಿಶಂಕರ್ ಅವರನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಮೇಯರ್ ಸ್ಥಾನಕ್ಕೆ ಬಿಸಿಎಡಬ್ಲ್ಯೂ ಹಾಗೂ ಉಪ ಮೇಯರ್ ಸ್ಥಾನಕ್ಕೆ ಸಾಮಾನ್ಯ ಅಭ್ಯರ್ಥಿಗೆ ಘೋಷಣೆಯಾಗಿದೆ..
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
 
	    	



 Loading ...
 Loading ... 
							



 
                
Discussion about this post