ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಬೆಂಗಳೂರು: ಜಾರ್ಖಂಡ್ ಮತ್ತು ಬಿಹಾರ ರಾಜ್ಯಗಳ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದ ಎಂ. ರಾಮಾ ಜೋಯಿಸ್ ಇಂದು ಬೆಳಗ್ಗೆ 7:30ಕ್ಕೆ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗಳಾಗಿ ಕಾರ್ಯನಿರ್ವಹಿಸಿ ನಿವೃತ್ತಿ ಹೊಂದಿದ್ದ ರಾಮಾ ಜೋಯಿಸ್, ಆರ್‌ಎಸ್‌ಎಸ್‌ನ ಹಿರಿಯ ಸ್ವಯಂ ಸೇವಕರಾಗಿರಾಗಿದ್ದರು. ಇವರು ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಹೋರಾಟಗಳಲ್ಲಿ ಭಾಗವಹಿಸಿದ್ದರು.
ಸಂವಿಧಾನ ತಜ್ಞರೂ, ರಾಜ್ಯಸಭಾ ಸದಸ್ಯರಾಗಿದ್ದ ಅವರಿಗೆ 89 ವರ್ಷ ವಯಸ್ಸಾಗಿತ್ತು. 1930ರ ಜುಲೈ 27ರಂದು ಶಿವಮೊಗ್ಗ ಜಿಲ್ಲೆಯಲ್ಲಿ ಜನಿಸಿ, ಪ್ರಾಥಮಿಕ ಶಿಕ್ಷಣ ಪೂರೈಸಿ ನಂತರ ಬೆಂಗಳೂರಿನಲ್ಲಿ ಕಾನೂನು ಪದವಿ ಪಡೆದು ಸುಪ್ರೀಂ ಕೋರ್ಟ್ ವಕೀಲರಾಗಿಯೂ ಕಾರ್ಯನಿರ್ವಹಿಸಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post