ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ನಗರದ ಮಲ್ನಾಡ್ ಸೋಷಿಯಲ್ ಸರ್ವಿಸ್ ಸೊಸೈಟಿ, ಅನುಗ್ರಹ ಎಸ್‌ಡಬ್ಲ್ಯೂಎಸ್ ಮತ್ತು ಮಕ್ಕಳ ಸಹಾಯವಾಣಿ 1098 ಇವರ ಸಹಯೋಗದಲ್ಲಿ ತೆರೆದ ಮನೆ ಹಾಗೂ ಬಡಜನರಿಗೆ ಕಿಟ್ ವಿತರಣಾ ಕಾರ್ಯಕ್ರಮ ನಡೆಯಿತು.

ಅಂಬೇಡ್ಕರ್ ನಗರದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ನೆರೆದಿದ್ದ ಗ್ರಾಮಸ್ಥರಿಗೆ ಸ್ಪರ್ಶ ಅಭಿಯಾನ ಅಂಗವಾಗಿ ಕ್ಯಾನ್ಸರ್ ರೋಗ ಮತ್ತು ತೆರೆದಮನೆ ಕಾರ್ಯಕ್ರಮದ ಬಗ್ಗೆ ಜಾಗೃತಿ ಮೂಡಿಸಲಾಯಿತು.

ಎಂಎಸ್‌ಎಸ್‌ಎಸ್ ಮತ್ತು ಮಕ್ಕಳ ಸಹಾಯವಾಣಿ ನಿರ್ದೇಶಕ ಫಾ. ಅಬ್ರಾಹಂ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿ ಫಾಸ್ಟರ್ ರೊಬನ್, ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಹಾಲೇಶಪ್ಪ, ಅಂಗನವಾಡಿ ಮೇಲ್ವಿಚಾರಕಿ ಹಾಗೂ ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

















