ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಛತ್ರಪತಿ ಶಿವಾಜಿ ಅವರ ಜಯಂತಿಯ ಹಿನ್ನೆಲೆಯಲ್ಲಿ ಅರಳೀಹಳ್ಳಿ ಹಾಗೂ ಸೀತಾರಾಮಪುರದಲ್ಲಿ ವಿಶೇಷ ಕಾರ್ಯಕ್ರಮ ಹಾಗೂ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು.
ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳದ ವತಿಯಿಂದ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ 70 ಯುವಕರು ಸ್ವಯಂಪ್ರೇರಿತರಾಗಿ ರಕ್ತದಾನ ಮಾಡಿ ಮಾದರಿಯಾದರು.
ವಿಶ್ವ ಹಿಂದೂ ಪರಿಷತ್ ಜಿಲ್ಲಾ ಸಹ ಕಾರ್ಯವಾಹ ಮಧುಕರ್ ಶಿವಾಜಿ ಮಹಾರಾಜರ ಕುರಿತು ವಿಶೇಷ ಉಪನ್ಯಾಸ ನಡೆಸಿಕೊಟ್ಟರು.
ಬಜರಂಗದಳ ಜಿಲ್ಲಾ ಸಹ ಸಂಚಾಲಕ ರಾಘವನ್ ವಡಿವೇಲು, ಸುನಿಲ್‌ಕುಮಾರ್, ದೇವರಾಜ್, ಮಲ್ಲಿಕಾ, ಗಣಪತಿ ಭಟ್, ತ್ಯಾಗರಾಜ್, ಜೈಕುಮಾರ್, ಕೃಷ್ಣ, ವಿನೋದ, ಸುಬ್ರಮಣಿ, ಹಾಲೇಶ್, ಸಂತೋಷ್, ರಾಜೇಂದ್ರ, ಶಂಕರ್, ಅಭಿ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news









Discussion about this post