ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಭದ್ರಾವತಿ: ಹಳೇನಗರದ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯದಲ್ಲಿ ರಥಸಪ್ತಮಿ ಪ್ರಯುಕ್ತ ವಿಶೇಷ ಪೂಜೆ ಹಾಗೂ ಉತ್ಸವಾದಿಗಳು ನಡೆದವು.
ಇಂದು ಮುಂಜಾನೆಯಿಂದಲೇ ಮೂಲ ದೇವರಿಗೆ ವಿಶೇಷ ಅಭಿಷೇಕ, ಪೂಜೆ ನಡೆಸಲಾಯಿತು.
ಉತ್ಸವ ಮೂರ್ತಿಯನ್ನು ಗರುಡ ಪಲ್ಲಕ್ಕಿ ಉತ್ಸವವನ್ನು ದೇವಾಲಯದ ಪ್ರಾಂಗಣದಲ್ಲಿ ಸರಳವಾಗಿ ನಡೆಸಲಾಯಿತು. ಕೊರೋನಾ ಮಾರ್ಗಸೂಚಿ ಹಿನ್ನೆಲೆಯಲ್ಲಿ ಎಲ್ಲ ಆಚರಣೆಗಳನ್ನು ಸರಳವಾಗಿ ನಡೆಸಲಾಯಿತು.
ಸಹಾಯಕ ಅರ್ಚಕ ಶ್ರೀನಿವಾಸ್ ಅವರ ನೇತೃತ್ವದಲ್ಲಿ ಎಲ್ಲ ಧಾರ್ಮಿಕ ವಿಧಿವಿಧಾನಗಳು ನಡೆದವು.
ಪ್ರಮುಖರಾದ ರಮಾಕಾಂತ್, ನಾರಾಯಣಾಚಾರ್, ಅಭಿರಾಂ, ಶ್ರೀಕಾಂತ್, ಕೃಷ್ಣಪ್ಫ , ರವಿ ಮಾಸ್ತರು, ಪ್ರದೀಪ್, ಶರತ್, ಶೇಖರಪ್ಪ, ರವಿ, ಶ್ರೀನಿಧಿ ಸೇರಿದಂತೆ ಹಲವರು ಇದ್ದರು.
ಇನ್ನು, ಹೊಸ ಸೇತುವೆ ರಸ್ತೆಯಲ್ಲಿರುವ ಶ್ರೀ ಬನಶಂಕರಿ ದೇವಸ್ಥಾನದಲ್ಲಿ ರಥ ಸಪ್ತಮಿ ಅಂಗವಾಗಿ ವಿವಿಧ ಧಾರ್ಮಿಕ ಆಚರಣೆಗಳು ಜರುಗಿದವು.
ಅಮ್ಮನವರಿಗೆ ವಿಶೇಷ ಪೂಜೆ, ಅಲಂಕಾರ, ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಹಾಗೂ ಅನ್ನ ಪ್ರಸಾದ ವಿತರಣೆ ಸೇರಿದಂತೆ ಇನ್ನಿತರರ ಕಾರ್ಯಕ್ರಮಗಳು ಜರುಗಿದವು. ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷರು, ಪದಾಧಿಕಾರಿ ಸೇರಿದಂತೆ ನೂರಾರು ಭಕ್ತಾದಿಗಳು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post