ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಗೌರಿಬಿದನೂರು: ತಾಲೂಕಿನ ತಿಪ್ಪಗಾನಹಳ್ಳಿಯಲ್ಲಿ ಶಾಸಕ ಎನ್.ಎಚ್. ಶಿವಶಂಕರರೆಡ್ಡಿ ಹಾಗೂ ಸ್ಥಳೀಯ ಮುಖಂಡರು ಸಿಮೆಂಟ್ ರಸ್ತೆ ಕಾಮಗಾರಿಗಳಿಗೆ ಇಂದು ಚಾಲನೆ ನೀಡಿದರು.
ಶಾಸಕ ಎನ್.ಎಚ್. ಶಿವಶಂಕರರೆಡ್ಡಿ ಮಾತನಾಡಿ, ಗ್ರಾಮಗಳ ಸರ್ವಾಂಗೀಣ ಅಭಿವೃದ್ಧಿಗಾಗಿ ಪ್ರತೀ ಹಳ್ಳಿಯಲ್ಲಿ ಕುಡಿಯುವ ನೀರು, ರಸ್ತೆ, ಚರಂಡಿ ಸೇರಿದಂತೆ ಇನ್ನಿತರ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಬದ್ಧವಾಗಿದ್ದೇವೆ. ಜನರಿಗೆ ನೀಡಿದ ಭರವಸೆಯ ಮೇರೆಗೆ ಹಂತಹಂತವಾಗಿ ಅಭಿವೃದ್ಧಿ ಕಾರ್ಯಗಳನ್ನು ಮಾಡುತ್ತಾ ಭವಿಷ್ಯದಲ್ಲಿ ತಾಲೂಕನ್ನು ಇಡೀ ರಾಜ್ಯದಲ್ಲೆ ಮಾದರಿಯನ್ನಾಗಿ ಮಾಡಲು ಪಣ ತೊಟ್ಟಿದ್ದೇವೆ. ಜನರ ಆಶೀರ್ವಾದ ಮತ್ತು ಸಹಕಾರ ಇದ್ದರೆ ನಮ್ಮೆಲ್ಲರ ಕನಸು ನನಸಾಗುತ್ತದೆ ಎಂದು ಹೇಳಿದರು.
ಮುಖಂಡರಾದ ಬಿ.ಪಿ.ಅಶ್ವತ್ಥನಾರಾಯಣಗೌಡ ಮಾತನಾಡಿ, ಜನತೆ ಸಾಕಷ್ಟು ಅಭಿವೃದ್ಧಿಗಳನ್ನು ನಿರೀಕ್ಷೆಯಲ್ಲಿಟ್ಟುಕೊಂಡು ಜನಪ್ರತಿನಿಧಿಗಳನ್ನು ಆಯ್ಕೆ ಮಾಡುತ್ತಾರೆ, ಅವರ ಭರವಸೆಗಳನ್ನು ಈಡೇರಿಸುವ ಮೂಲಕ ನಾವುಗಳು ಅವರ ನಿಜವಾದ ಋಣವನ್ನು ತೀರಿಸಬೇಕಾಗಿದೆ. ಈ ನಿಟ್ಟಿನಲ್ಲಿ ಶಾಸಕರು ಪ್ರಾಮಾಣಿಕ ಪ್ರಯತ್ನ ಮಾಡುತ್ತಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಆರ್. ಲೋಕೇಶ್, ಗ್ರಾಮ ಪಂಚಾಯಿತಿ ಸದಸ್ಯರಾದ ಚೈತ್ರ ನವೀನ್ ಕುಮಾರ್, ಲಾವಣ್ಯ ರಮೇಶ್, ಚಿನ್ನಪ್ಪಯ್ಯ, ಖಾಝಿಮ್, ರಘು, ಚೇತನ್, ಮಹೇಶ್, ದಾಳಪ್ಪ, ಆನಂದ್, ಸುಧಾಕರ್ ಇತರರು ಇದ್ದರು.
ವರದಿ: ಬಿ.ಎಂ. ಅಜಯ್, ಗೌರಿಬಿದನೂರು
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post