ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗವು ಫೆ.21ರ ನಾಳೆ 2020-21ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕಂದಾಯ ವಸೂಲಾತಿಗಾಗಿ ಗಾಂಧಿನಗರ ಜಿಲ್ಲಾ ಪಂಚಾಯತ್ ಕಚೇರಿ ಹಿಂಭಾಗ (ಎಎನ್‌ಕೆರಸ್ತೆ) ಹತ್ತಿರ, ಗಾಡಿಕೊಪ್ಪ ಸರ್ಕಾರಿ ಶಾಲೆ ಹತ್ತಿರ, ಸ್ವಾಮಿ ವಿವೇಕಾನಂದ ಬಡಾವಣೆ ಗುಡ್‌ಲಕ್ ಸರ್ಕಲ್ ಹತ್ತಿರ ಹಾಗೂ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಹತ್ತಿರ ವಿಶೇಷ ಕಂದಾಯ ವಸೂಲಾತಿ ಕೌಂಟರ್‌ಗಳನ್ನು ತೆರೆಯಲಾಗಿದೆ.

ನೀರಿನ ಖಾತೆದಾರರು ಬಾಕಿ ಉಳಿಸಿಕೊಂಡಿರುವ ನೀರಿನ ಕಂದಾಯವನ್ನು ಪಾವತಿಸದಿದ್ದಲ್ಲಿ ನೀರಿನ ಸಂಪರ್ಕವನ್ನು ಕಡಿತಗೊಳಿಸುವುದು ಅನಿವಾರ್ಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕರ್ನಾಟಕ ನಗರ ನೀರುಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
















