ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ನವದೆಹಲಿ: ದೇಶದಲ್ಲಿ ಎರಡು ದಿನಗಳಿಂದ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆ ಕಂಡಿದ್ದು, ಬೆಂಗಳೂರಿನಲ್ಲೂ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ. 24 ಕ್ಯಾರೆಟ್ 10 ಗ್ರಾಂ ಚಿನ್ನದ ಬೆಲೆ ಇಂದು 47,200 ರೂ. ಆಗಿದೆ. 22 ಕ್ಯಾರೆಟ್ನ 10 ಗ್ರಾಂ ಚಿನ್ನಕ್ಕೆ ಬೆಂಗಳೂರಿನಲ್ಲಿ ಇಂದು 43,270 ರೂ. ಆಗಿದೆ. ಬೆಳ್ಳಿ ಬೆಲೆಯಲ್ಲಿ ಏರಿಕೆಯಾಗಿದ್ದು, ನಿನ್ನೆ 67 ಸಾವಿರವಿದ್ದ ಬೆಳ್ಳಿ ಬೆಲೆ ಇಂದು 69 ಸಾವಿರಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ೨ ದಿನಗಳ ಹಿಂದೆ 46,400 ರೂ. ಇದ್ದ 10 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ಇಂದು 45,130 ರೂ.ಗೆ ಇಳಿಕೆಯಾಗಿದೆ. 10 ಗ್ರಾಂ 24 ಕ್ಯಾರೆಟ್ ಚಿನ್ನದ ಬೆಲೆ 48,020 ರೂ. ಇದ್ದುದು ಇಂದು 46,130 ರೂ. ಆಗಿದೆ.
ಬೆಂಗಳೂರಿನಲ್ಲಿ 24 ಕ್ಯಾರೆಟ್ ಚಿನ್ನದ ಬೆಲೆ 47,200 ರೂ. ಆಗಿದೆ. ಹಾಗೆಯೇ 22 ಕ್ಯಾರೆಟ್ನ 10 ಗ್ರಾಂ ಚಿನ್ನಕ್ಕೆ ಇಂದು 43,270 ರೂ. ಆಗಿದೆ. ಮೈಸೂರು, ವಿಶಾಖಪಟ್ಟಣಂ, ಮಂಗಳೂರು, ವಿಜಯವಾಡ, ಮುಂಬೈ, ಹೈದರಾಬಾದ್, ಭುವನೇಶ್ವರ, ಅಹಮದಾಬಾದ್, ಕೇರಳ, ಪುಣೆಯಲ್ಲಿ ಕೂಡ ಹೆಚ್ಚೂ ಕಡಿಮೆ ಇದೇ ಬೆಲೆ ಚಾಲ್ತಿಯಲ್ಲಿದೆ.
ಬೇರೆ ನಗರಗಳಿಗೆ ಹೋಲಿಸಿದರೆ ಚೆನ್ನೈ, ದೆಹಲಿ, ಕೊಲ್ಕತ್ತಾ, ಲಕ್ನೋ, ಕೊಯಮತ್ತೂರು, ಮಧುರೈ, ಜೈಪುರ, ಅಹಮದಾಬಾದ್, ಚಂಡೀಗಢದಲ್ಲಿ ಚಿನ್ನದ ಬೆಲೆ ಭಾರೀ ಏರಿಕೆಯಾಗಿದೆ. ಈ ನಗರಗಳಲ್ಲಿ ಚಿನ್ನದ ಬೆಲೆ 49,000 ರೂ. ದಾಟಿದೆ.
ದೇಶದಲ್ಲಿ ಬೆಳ್ಳಿ ಬೆಲೆ ಮತ್ತೆ ಏರಿಕೆಯಾಗಿದ್ದು, 2 ದಿನಗಳ ಹಿಂದೆ 67 ಸಾವಿರವಿದ್ದ ಬೆಳ್ಳಿ ಬೆಲೆ ಇಂದು 1 ಕೆಜಿಗೆ 69,000 ರೂ. ಆಗಿದೆ. ಬೆಂಗಳೂರು, ಮೈಸೂರು, ಮಂಗಳೂರಿನಲ್ಲಿ 1 ಕೆಜಿ ಬೆಳ್ಳಿಯ ಬೆಲೆಯಲ್ಲಿ ಏರಿಕೆಯಾಗಿದ್ದು, ಇಂದು 68,700 ರೂ. ಆಗಿದೆ. ಚೆನ್ನೈ, ಹೈದರಾಬಾದ್, ಕೊಯಮತ್ತೂರು, ಭುವನೇಶ್ವರ, ಮಧುರೈ, ವಿಜಯವಾಡ, ವಿಶಾಖಪಟ್ಟಣಂನಲ್ಲಿ ಬೆಳ್ಳಿಯ ಬೆಲೆ 73,500 ರೂ. ದಾಟಿದೆ ಎನ್ನಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news
Discussion about this post