ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಚಿಕ್ಕಬಳ್ಳಾಪುರ: ಜಿಲ್ಲೆ ಗುಡಿಬಂಡೆಯ ಹಿರೆನಾಗವೇಲಿಯ ಕಲ್ಲು ಕ್ವಾರಿಯಲ್ಲಿ ಸಂಭವಿಸಿರುವ ಸ್ಪೋಟ ಪ್ರಕರಣವನ್ನು ಸಿಐಡಿಗೆ ವಹಿಸಲು ತೀರ್ಮಾನಿಸಿರುವುದಾಗಿ ಗೃಹ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವರಾದ ಬಸವರಾಜ ಬೊಮ್ಮಾಯಿ ಹೇಳಿದರು.
ಸ್ಪೋಟ ಸಂಭವಿಸಿದ ಕ್ವಾರಿಗೆ ಭೇಟಿ ನೀಡಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಈ ವಿಷಯ ತಿಳಿಸಿದರು.
ಘಟನೆ ಸಂಭವಿಸುತ್ತಿದ್ದಂತೆಯೇ ಚಿಕ್ಕಬಳ್ಳಾಪುರದ ಹಿರೆನಾಗವೇಲಿ ಕ್ವಾರಿಗೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಯನ್ನು ಸಚಿವರು ಪರಿಶೀಲಿಸಿದರು. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದೇನೆ. ನಿಷ್ಪಕ್ಷಪಾತ ತನಿಖೆಗಾಗಿ ಪ್ರಕರಣವನ್ನು ಸಿಐಡಿಗೆ ವಹಿಸಿಲು ತೀರ್ಮಾನಿಸಿದ್ದೇನೆ ಎಂದು ಬೊಮ್ಮಾಯಿ ಹೇಳಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news








Discussion about this post