No Result
View All Result
Deeksha Brahmavara | A Divine Synergy of Artistic Excellence and Intellectual Brilliance
English Articles

Deeksha Brahmavara | A Divine Synergy of Artistic Excellence and Intellectual Brilliance

by ಕಲ್ಪ ನ್ಯೂಸ್
February 10, 2026
0

Kalpa Media House  |  Special Article: Satish Shetty Cherkadi Doddamane  | The coastal soil of Karnataka is fertile with art, but...

Read moreDetails
ಬೇಸಿಗೆಯಲ್ಲಿ ಗಂಟಲು ಒಣಗುತ್ತಿದೆಯೇ? ಧ್ವನಿ ಗರಗರಿಸುತ್ತಿದೆಯೇ? ಹಾಗಾದರೆ ಹೀಗೆ ಮಾಡಿ | ತಜ್ಞರ ಸಲಹೆ

Stay Hydrated to Protect Your Voice This Summer: ENT Expert Advice

February 10, 2026
Mysore – Shivamogga Express Big Update on this Date | Must Read

Mysore – Shivamogga Express Big Update on this Date | Must Read

February 9, 2026
Union Minister V. Somanna Flagged Off New Demu Train Services Between Dandeli – Alnavar

Union Minister V. Somanna Flagged Off New Demu Train Services Between Dandeli – Alnavar

February 9, 2026
ಡಯಾಲಿಸಿಸ್ ಅಂತಿಮವಲ್ಲ | ಮೃತ ದಾನಿದಾರ ಕಿಡ್ನಿಯಿಂದ ರೋಗಿಗೆ ಹೊಸ ಬದುಕು

A Second Chance at Life Through Deceased Organ Donation

February 3, 2026
  • Advertise With Us
  • Grievances
  • About Us
  • Contact Us
Thursday, February 12, 2026
Follow Us
kalpa.news
">
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ಕರ್ನಾಟಕ ಪೊಲೀಸ್ ಇಲಾಖೆ ದೇಶದಲ್ಲೇ ನಂಬರ್ 1: ಸಚಿವ ಎಸ್.ಟಿ.ಸೋಮಶೇಖರ್ ಶ್ಲಾಘನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 24, 2021
in ಮೈಸೂರು
0
ಕರ್ನಾಟಕ ಪೊಲೀಸ್ ಇಲಾಖೆ ದೇಶದಲ್ಲೇ ನಂಬರ್ 1: ಸಚಿವ ಎಸ್.ಟಿ.ಸೋಮಶೇಖರ್ ಶ್ಲಾಘನೆ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಮೈಸೂರು: ಬೇರೆ ರಾಜ್ಯಕ್ಕೆ ಹೋಲಿಸಿದರೆ ಕರ್ನಾಟಕದ ಪೊಲೀಸರು ನಂಬರ್ 1 ಆಗಿದ್ದಾರೆ. ಮಾಜಿ ಪ್ರಧಾನಿ ರಾಜೀವ್ ಗಾಂಧಿ ಕೊಲೆ ಆರೋಪಿಗಳನ್ನು ಬಂಧಿಸಿದ್ದೇ ಕರ್ನಾಟಕ ಪೊಲೀಸರು. ನಮ್ಮ ಪೊಲೀಸ್ ಇಲಾಖೆ ದೇಶದಲ್ಲಿಯೇ ಮಾದರಿ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.

ಇಲ್ಲಿನ ಪೋಲಿಸ್ ಅಕಾಡೆಮಿಯಲ್ಲಿ ಡಿವೈಎಸ್ಪಿ ಹಾಗೂ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಬ್ಯಾಚ್‌ನ ಪ್ರಶಿಕ್ಷಣಾರ್ಥಿಗಳ ಜೊತೆಗಿನ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಾವುದೇ ರಾಜ್ಯಕ್ಕೆ ಭೇಟಿ ನೀಡಿದರೂ ಕರ್ನಾಟಕ ಪೊಲೀಸ್ ಬಗ್ಗೆ ಅಭಿಮಾನ ಹಾಗೂ ಮಾದರಿಯಾಗಿ ಹೇಳಲಾಗುತ್ತದೆ ಎಂದು ಅಭಿಮಾನವನ್ನು ವ್ಯಕ್ತಪಡಿಸಿದರು.


ಕರ್ನಾಟಕ ಪೊಲೀಸ್ ಅಕಾಡೆಮಿ ನಿರ್ದೇಶಕ ವಿಪುಲ್ ಕುಮಾರ್ ಅವರು ಸಮರ್ಥ ಹಾಗೂ ದಕ್ಷ ಪೊಲೀಸ್ ಅಧಿಕಾರಿಯಾಗಿದ್ದಾರೆ. ಅವರ ನೇತೃತ್ವದಲ್ಲಿ ಅಕಾಡೆಮಿಯನ್ನು ವ್ಯವಸ್ಥಿತವಾಗಿ ನೋಡಿಕೊಳ್ಳಲಾಗುತ್ತಿದೆ. ಸ್ವಚ್ಛತೆಯನ್ನು ಕಾಯ್ದುಕೊಳ್ಳಲಾಗಿದೆ. ಆಸ್ಪತ್ರೆ, ಜಿಮ್, ಮೈದಾನ ಸೇರಿದಂತೆ ಇನ್ನಿತರ ವಿಭಾಗಗಳನ್ನು ಗಮನಿಸಿದ್ದು, ಉತ್ತಮವಾಗಿ ನಿರ್ವಹಣೆ ಮಾಡಲಾಗುತ್ತಿದೆ ಎಂದು ಸಚಿವರು ಶ್ಲಾಘನೆ ವ್ಯಕ್ತಪಡಿಸಿದರು.

ಮೈಸೂರಿನಲ್ಲಿ ನಾನು ಕಳೆದ ಒಂದು ವರ್ಷದಿಂದ ಸಂಚರಿಸುತ್ತಿದ್ದೇನೆ. ಇದುವರೆಗೆ ಒಂದು ಸಣ್ಣ ಗಲಾಟೆ ಸಹ ಆಗಿಲ್ಲ. ಕೋವಿಡ್ ಸಂದರ್ಭದಲ್ಲಿಯೂ ಸಹ ಉತ್ತಮವಾಗಿ ಪೋಲಿಸರು ಕಾರ್ಯನಿರ್ವಹಣೆ ಮಾಡಿದ್ದಾರೆ. ಇಂದು ರಾಜ್ಯದ ಜನ ರಾತ್ರಿ ನೆಮ್ಮದಿಯಾಗಿ ನಿದ್ರಿಸುತ್ತಿದ್ದಾರೆ ಎಂದರೆ, ಪೊಲೀಸರ ಪಾತ್ರ ಮಹತ್ವದ್ದಾಗಿದೆ. ಇದರಲ್ಲಿ ನೂತನ ಪೊಲೀಸರ ಜವಾಬ್ದಾರಿ ಹೆಚ್ಚಿದೆ ಎಂದು ಕೇಂದ್ರ ಸಚಿವ ಸೋಮಶೇಖರ್ ಕಿವಿಮಾತು ಹೇಳಿದರು.


ದಕ್ಷ ಪ್ರಾಮಾಣಿಕ ಅಧಿಕಾರಿಗಳಾಗಿ
ಪೊಲೀಸರು ಉತ್ತಮ ತರಬೇತಿ ಪಡೆಯಬೇಕು. ಜೊತೆಗೆ ಮೈಸೂರಿನಲ್ಲಿ ಸುಸಜ್ಜಿತ ಗ್ರಂಥಾಲಯವಿದೆ. ಕೆಲವೊಂದು ಮಹತ್ವದ ತೀರ್ಪುಗಳ ಪ್ರತಿಗಳು ಸಿಗಲಿವೆ. ಇಂಥವುಗಳನ್ನು ಅಭ್ಯಾಸ ಮಾಡಬೇಕು. ಯಾವುದೇ ಒಂದು ಪ್ರಕರಣ ಇರಲಿ, ಅದರ ಸಂಪೂರ್ಣ ಆಯಾಮದಲ್ಲಿ ತನಿಖೆ ನಡೆಸಬೇಕಿದೆ. ನೀವು ದಕ್ಷ, ಪ್ರಾಮಾಣಿಕ ಅಧಿಕಾರಿಯಾದರೆ ಜನರು ಅಭಿಮಾನಿಸುವುದರ ಜೊತೆಗೆ ಕ್ರಿಮಿನಲ್‌ಗಳು ಹೆದರುತ್ತಾರೆ ಎಂದು ಸಚಿವರು ಸಲಹೆ ನೀಡಿದರು.

ನೂತನ ಪೊಲೀಸ್ ಅಧಿಕಾರಿಗಳು ಉತ್ಸುಕತೆಯಿಂದ ಕೆಲಸ ಮಾಡಬೇಕು. ತಮ್ಮ ಸೇವೆ ನಮ್ಮ ಕರ್ನಾಟಕದ ಜನತೆಗೆ ಉತ್ತಮ ರೀತಿಯಲ್ಲಿ ಸಿಗಲಿ ಎಂದು ಸಚಿವ ಸೋಮಶೇಖರ್ ಹಾರೈಸಿದರು.

ನೂತನ ಪ್ರಶಿಕ್ಷಣಾರ್ಥಿಗಳ ಜತೆ ಸಚಿವರ ಸಂವಾದ
ಜನಪ್ರತಿನಿಧಿಗಳು ಹಾಗೂ ಪೊಲೀಸ್ ಇಲಾಖೆ ನಡುವೆ ಯಾವ ರೀತಿ ಸಮನ್ವಯತೆ ಇರುತ್ತದೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು, ಜನಪ್ರತಿನಿಧಿಗಳು ಸಾಮಾನ್ಯವಾಗಿ ಅಕ್ರಮಗಳಿಗೆ ಅವಕಾಶ ಕೊಡುವುದಿಲ್ಲ. ಜೊತೆಗೆ ಹಸ್ತಕ್ಷೇಪ ಮಾಡುವುದಿಲ್ಲ. ನೀವು ನಿಮ್ಮ ವ್ಯಾಪ್ತಿಯಲ್ಲಿ ದಕ್ಷತೆಯಿಂದ ಪ್ರಾಮಾಣಿಕತೆಯಿಂದಿದ್ದರೆ ಜನಪ್ರತಿನಿಧಿಗಳೂ ಸಹ ಗೌರವವನ್ನು ಕೊಡುತ್ತಾರೆ ಎಂದು ತಿಳಿಸಿದರು.

ಕಾನೂನು ರೀತಿ ಪೊಲೀಸ್ ಅಧಿಕಾರಿ ನಡೆದರೆ ಯಾರೂ ಹಸ್ತಕ್ಷೇಪ ಮಾಡಲ್ಲ:
ನೀವು ಮೊದಲು ನಿಮ್ಮ ಠಾಣಾ ವ್ಯಾಪ್ತಿಯ ಆಳ-ಅಗಲ ತಿಳಿದುಕೊಂಡು ದಕ್ಷತೆಯಿಂದ ಕಾರ್ಯನಿರ್ವಹಿಸಿ, ನೀವು ಕಾನೂನು ರೀತಿಯಲ್ಲಿ ನಡೆದುಕೊಂಡರೆ ಯಾರೊಬ್ಬರೂ ಹಸ್ತಕ್ಷೇಪ ಮಾಡಲು ಇಷ್ಟಪಡುವುದಿಲ್ಲ ಎಂದು ಕಿವಿಮಾತು ಹೇಳಿದರು.

ಸಹಕಾರ ಸಂಸ್ಥೆಗಳಲ್ಲಿ ಕೋಟ್ಯಂತರ ರೂಪಾಯಿ ಹಣ ಅವ್ಯವಹಾರ ಆಗುತ್ತಿರುವ ಬಗ್ಗೆ ಪ್ರಶಿಕ್ಷಣಾರ್ಥಿಯೊಬ್ಬರ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯದಲ್ಲಿ ಸುಮಾರು ೨೮೦ ಕೋ ಆಪರೇಟಿವ್ ಬ್ಯಾಂಕ್‌ಗಳಿವೆ. ಇದರಲ್ಲಿ ಸುಮಾರು 3-4 ಬ್ಯಾಂಕ್‌ಗಳಿಂದ ಅವ್ಯವಹಾರಗಳಾಗಿವೆ. ಇದಕ್ಕಾಗಿ ಕಠಿಣ ಕಾನೂನುಗಳನ್ನು ರೂಪಿಸುತ್ತಿದ್ದು ಅಂತಹ ಸಂಸ್ಥೆಗಳ ಆಸ್ತಿಗಳನ್ನು ಜಪ್ತಿ ಮಾಡಲಾಗುವುದು ಸೇರಿದಂತೆ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು.

ಇದಲ್ಲದೆ ಅವ್ಯವಹಾರ ಮಾಡಿದವರು ನ್ಯಾಯಾಲಯಕ್ಕೆ ಹೋಗಿ ತಡೆಯಾಜ್ಞೆ ತರದಂತೆ ಕಾನೂನನ್ನು ರೂಪಿಸುವ ಬಗ್ಗೆ ಚಿಂತನೆ ನಡೆಸುತ್ತಿದ್ದು ಈ ಬಗ್ಗೆ ಶೀಘ್ರದಲ್ಲೇ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

ಹೀಗಾಗಿ ಸಹಕಾರಿ ಬ್ಯಾಂಕಲ್ಲಿ ಯಾರು ಅವ್ಯವಹಾರ ನಡೆಸುತ್ತಾರೆ. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ೨೯ಸಿ ಅಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು. ಅದಕ್ಕಿಂತ ಮುಂಚಿತವಾಗಿ ನಮ್ಮ ಇಲಾಖೆ ವತಿಯಿಂದ ಒಂದು ತನಿಖೆ ನಡೆಸಿ ಯಾರು ತಪ್ಪಿತಸ್ಥರು ಎಂಬುದನ್ನು ತೀರ್ಮಾನಿಸಲಾಗುವುದು. ಒಂದು ವೇಳೆ ತಪ್ಪಿತಸ್ಥರೆಂದು ಕಂಡುಬಂದಲ್ಲಿ ಅಧ್ಯಕ್ಷರನ್ನು ವಜಾ ಮಾಡುವ ನಿರ್ಧಾರವನ್ನೂ ನಾವು ತೆಗೆದುಕೊಂಡಿದ್ದೇವೆ. ಎಲ್ಲ ಪ್ರಕ್ರಿಯೆಗಳ ಬಳಿಕ ಎಫ್‌ಐಆರ್ ಗೆ ಅವಕಾಶ ಮಾಡಿಕೊಡಲಾಗುವುದು ಎಂದು ಸಚಿವರು ತಿಳಿಸಿದರು.

ಅಲ್ಲದೆ ಈಗಿರುವ ನ್ಯೂನತೆಯುಳ್ಳ ಕಾನೂನುಗಳನ್ನು ಸರಿಪಡಿಸಿ ಬಿಗಿ ಮಾಡಲು ಕಠಿಣ ಕಾಯ್ದೆಗಳನ್ನು ರೂಪಿಸಲು ಮುಂದಾಗಿದ್ದು, ಬರುವ ಅಧಿವೇಶನದಲ್ಲಿ ಪ್ರಸ್ತಾಪಿಸಿ ತಿದ್ದುಪಡಿ ತರುವ ನಿಟ್ಟಿನಲ್ಲಿ ನಮ್ಮ ಪ್ರಯತ್ನವಾಗಿದೆ ಎಂದು ಸಚಿವ ಸೋಮಶೇಖರ್ ತಿಳಿಸಿದರು.

ಸಹಕಾರ ಸಂಘಗಳ ಆಡಿಟ್ ಸಂಬಂಧಪಟ್ಟಂತೆ ಕೇಂದ್ರ ಸರ್ಕಾರ ಮಧ್ಯಪ್ರವೇಶ ಮಾಡಿ ಆರ್‌ಬಿಐ ನಿಯಂತ್ರಣಕ್ಕೊಳಪಡಿಸುತ್ತಿರುವುದಕ್ಕೆ ರಾಜ್ಯ ಸರ್ಕಾರ ಸಂಪೂರ್ಣ ಸಹಕಾರ ನೀಡುತ್ತಿದೆ. ಇದರಿಂದ ಜನರಿಗೂ ತಮ್ಮ ಹೂಡಿಕೆ ಹಣಕ್ಕೆ ಭದ್ರತೆ ಸಿಕ್ಕಂತಾಗುತ್ತದೆ. ಜನರಿಗೆ ಸಹಕಾರ ಸಂಸ್ಥೆಗಳ ಮೇಲೆ ನಂಬಿಕೆ ಹೋಗಬಾರದು ಈ ನಿಟ್ಟಿನಲ್ಲಿ ಇಂತಹ ಕ್ರಮಗಳು ಆರೋಗ್ಯದಾಯಕ ಬೆಳವಣಿಗೆ ಎಂದು ಸಚಿವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಡಿಸಿಸಿ ಬ್ಯಾಂಕ್‌ನಲ್ಲಿ ಪೊಲೀಸರಿಗೂ ಸಾಲ
ನಿಮ್ಮ ಜಿಲ್ಲೆಯಲ್ಲಿ ಯಾವ ಡಿಸಿಸಿ ಬ್ಯಾಂಕ್ ಹಾಗೂ ಅರ್ಬನ್ ಕೋ ಆಪರೇಟಿವ್ ಬ್ಯಾಂಕ್‌ನಲ್ಲಿ ಪೊಲೀಸರಿಗೂ ಸಾಲ ಸಿಗುತ್ತಿದ್ದು, ಶಿಕ್ಷಣ ಸೇರಿದಂತೆ ಇನ್ನಿತರ ಅವಕಾಶಗಳ ಮೂಲಕ ಸಾಲ ಸೌಲಭ್ಯ ನೀಡಲಾಗುವುದು ಎಂದು ಸಚಿವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ದಕ್ಷವಾಗಿ ಕಾರ್ಯ ನಿರ್ವಹಿಸಿ, ಯಾರೂ ಹಸ್ತಕ್ಷೇಪ ಮಾಡಲ್ಲ
ಆ ಜನಪ್ರತಿನಿಧಿ ಯಾರು? ಏನು? ಅವರ ಕಾರ್ಯವೈಖರಿ ಏನು? ಎಂಬಿತ್ಯಾದಿಗಳನ್ನು ನೀವು ನಿಯೋಜನೆಗೊಳಗಾದ ತಕ್ಷಣ ಮಾಹಿತಿ ಇಟ್ಟುಕೊಂಡು ಅದರಂತೆ ದಕ್ಷವಾಗಿ ಕಾರ್ಯನಿರ್ವಹಣೆ ಮಾಡಿದರೆ ಯಾವುದೇ ಜನಪ್ರತಿನಿಧಿಗಳು ನಿಮ್ಮ ಸೇವೆಯಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಸಚಿವರು ಉತ್ತರಿಸಿದರು.

ಸ್ತ್ರೀಶಕ್ತಿ ಸಂಘಗಳಿಗೆ ಸಾಲ ಸಿಗುತ್ತಿದೆ
ಸಹಕಾರ ಇಲಾಖೆ ಮೂಲಕ 2020-21ನೇ ಸಾಲಿನಲ್ಲಿ ಅಲ್ಲಾವಧಿ, ಮಧ್ಯಮಾವಧಿ ಸೇರಿದಂತೆ ಇನ್ನಿತರ ಯೋಜನೆಯಡಿ 15300 ಕೋಟಿ ರೂಪಾಯಿ ಸಾಲ ನೀಡುವ ಗುರಿಯನ್ನು ಹಾಕಿಕೊಳ್ಳಲಾಗಿತ್ತು. ಡಿಸಿಸಿ ಬ್ಯಾಂಕ್‌ಗಳ ಮೂಲಕ ಸ್ತ್ರೀಶಕ್ತಿ, ಸ್ವಸಹಾಯ ಗುಂಪುಗಳಿಗೆ ನೂರಕ್ಕೆ ನೂರು ಸಾಲ ಸೌಲಭ್ಯಗಳು ಸಿಗುತ್ತಿವೆ ಎಂದು ಪ್ರಶ್ನೆಯೊಂದಕ್ಕೆ ಸಚಿವರು ಮಾಹಿತಿ ನೀಡಿದರು.

ಸಚಿವ ಸೋಮಶೇಖರ್ ರೋಲ್ ಮಾಡೆಲ್: ವಿಪುಲ್ ಕುಮಾರ್
ಕರ್ನಾಟಕ ಪೊಲೀಸ್ ಅಕಾಡೆಮಿ ನಿರ್ದೇಶಕ ವಿಪುಲ್ ಕುಮಾರ್ ಮಾತನಾಡಿ, ಪೊಲೀಸರ ಬಗ್ಗೆ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರಿಗೆ ಅರಿವಿದೆ. ಅವರು ನಮ್ಮ ಇಲಾಖೆ ಬಗ್ಗೆ ಮುತುವರ್ಜಿ, ಕಾಳಜಿ ವಹಿಸುವಂತಹ ಉತ್ತಮ ರಾಜಕಾರಣಿಗಳಾಗಿದ್ದಾರೆ. ಅವರು ಒಬ್ಬ ರೋಲ್ ಮಾಡಲ್ ಆಗಿದ್ದಾರೆ ಎಂದು ಹೇಳಿದರು.

ಅವರು ಉಸ್ತುವಾರಿ ಸಚಿವರಾಗಿ ಮೈಸೂರಿಗೆ ಆಗಮಿಸಿದಾಗ ನಾನು ಹೋಗಿ ನಮಗೆ ನಿಮ್ಮಿಂದ ಸಲಹೆಗಳಿದ್ದರೆ ಯಾವುದೇ ಸಮಯದಲ್ಲಿ ಕೊಡಬಹುದು ಎಂದು ಹೇಳಿದೆ. ಅದಕ್ಕವರು ತಾವು ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಹೇಳಿದರು. ಅದರಂತೆ ಇಲ್ಲಿಯವರೆಗೂ ಯಾವುದೇ ಒಂದು ವರ್ಗಾವಣೆ ಸಂಬಂಧ ಸಹ ಸಚಿವ ಸೋಮಶೇಖರ್ ಹಸ್ತಕ್ಷೇಪ ಮಾಡಿಲ್ಲ ಎಂದು ತಿಳಿಸಿದರು.

ಸಚಿವ ಸೋಮಶೇಖರ್ ಅವರ ಬಗ್ಗೆ ಮೈಸೂರಿನಲ್ಲಿ ಮಾತ್ರವಲ್ಲದೆ ಪಕ್ಕದ ಜಿಲ್ಲೆಗಳಲ್ಲಿಯೂ ಇವರೇ ಉಸ್ತುವಾರಿ ಸಚಿವರಾಗಬೇಕು ಎಂಬ ಕೂಗು ಕೇಳಿಬರುತ್ತದೆ ಎಂಬುದಿದ್ದರೆ ಅದು ಅವರ ಸಹಾಯ ಮನೋಭಾವಕ್ಕೆ ಹಿಡಿದ ಕೈಗನ್ನಡಿ. ಅವರ ಸಮಾಜಪರ ಕಾಳಜಿ ಎಲ್ಲರಿಗೂ ಇಷ್ಟವಾಗುತ್ತದೆ ಎಂದು ವಿಪುಲ್ ಕುಮಾರ್ ತಿಳಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Kannada News WebsiteKarnatka PoliceLatest News KannadamysoreS.T. SomashekState NewsVipul Kumarಮೈಸೂರು
Share197Tweet123Send
Previous Post

ಪೊಗರು ಚಿತ್ರತಂಡ ಹಾಗೂ ಸಿದ್ದರಾಮಯ್ಯ ಅವರುಗಳು ವಿಪ್ರ ಸಮುದಾಯದ ಕ್ಷಮೆ ಯಾಚಿಸಬೇಕು

Next Post

ಕಾರ್ಮಿಕರ ಬಲಿ ಪಡೆದ ಘಟನೆಗೆ ಸರಕಾರವೇ ಹೊಣೆ: ವೆಲ್ಫೇರ್ ಪಾರ್ಟಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕಾರ್ಮಿಕರ ಬಲಿ ಪಡೆದ ಘಟನೆಗೆ ಸರಕಾರವೇ ಹೊಣೆ: ವೆಲ್ಫೇರ್ ಪಾರ್ಟಿ

ಕಾರ್ಮಿಕರ ಬಲಿ ಪಡೆದ ಘಟನೆಗೆ ಸರಕಾರವೇ ಹೊಣೆ: ವೆಲ್ಫೇರ್ ಪಾರ್ಟಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

ಶಿವಮೊಗ್ಗ | ಮೈಮೇಲೆ ಹರಿದ ಲಾರಿ | ಯುವಕ ಸ್ಥಳದಲ್ಲೇ ಸಾವು

January 12, 2026
ನಮ್ಮೂರ ಬಳಗ ರಾಷ್ಟ್ರಮಟ್ಟದ ಟಗರು ಕಾಳಗ ಅಂಕಣ ಪೂಜೆ | ಪ್ರಚಾರ ವಾಹನಕ್ಕೆ ಚಾಲನೆ

ನಮ್ಮೂರ ಬಳಗ ರಾಷ್ಟ್ರಮಟ್ಟದ ಟಗರು ಕಾಳಗ ಅಂಕಣ ಪೂಜೆ | ಪ್ರಚಾರ ವಾಹನಕ್ಕೆ ಚಾಲನೆ

February 11, 2026
ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಭ್ರಷ್ಟಾಚಾರ ಆರೋಪ | ನಿಷ್ಪಕ್ಷಪಾತ ತನಿಖೆಗೆ ಜೆಡಿಎಸ್ ಆಗ್ರಹ

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಭ್ರಷ್ಟಾಚಾರ ಆರೋಪ | ನಿಷ್ಪಕ್ಷಪಾತ ತನಿಖೆಗೆ ಜೆಡಿಎಸ್ ಆಗ್ರಹ

February 11, 2026
ಮಕ್ಕಳ ಅನೈತಿಕ ಸಾಗಾಣಿಕೆ ಅತ್ಯಂತ ನೋವಿನ ಸಂಗತಿ: ನ್ಯಾ. ಸಂತೋಷ್

ಮಕ್ಕಳ ಅನೈತಿಕ ಸಾಗಾಣಿಕೆ ಅತ್ಯಂತ ನೋವಿನ ಸಂಗತಿ: ನ್ಯಾ. ಸಂತೋಷ್

February 11, 2026
ಸರಿಗಮಪ ಲಿಟ್ಲ್ ಚಾಂಪ್ಸ್ | ಕರ್ನಾಟಕದ 31 ಜಿಲ್ಲೆಗಳಲ್ಲಿ ಆಡಿಷನ್ | ಎಲ್ಲಿ? ಯಾವಾಗ?

ಸರಿಗಮಪ ಲಿಟ್ಲ್ ಚಾಂಪ್ಸ್ | ಕರ್ನಾಟಕದ 31 ಜಿಲ್ಲೆಗಳಲ್ಲಿ ಆಡಿಷನ್ | ಎಲ್ಲಿ? ಯಾವಾಗ?

February 11, 2026
ಪಿ-ಕ್ಯಾಪ್ ಪೊಲೀಸರಲ್ಲಿ ಆತ್ಮವಿಶ್ವಾಸ ಹೆಚ್ಚಿಸಿದೆ: ಜಿಲ್ಲಾರಕ್ಷಣಾಧಿಕಾರಿ ನಿಖಿಲ್

ಪಿ-ಕ್ಯಾಪ್ ಪೊಲೀಸರಲ್ಲಿ ಆತ್ಮವಿಶ್ವಾಸ ಹೆಚ್ಚಿಸಿದೆ: ಜಿಲ್ಲಾರಕ್ಷಣಾಧಿಕಾರಿ ನಿಖಿಲ್

February 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL