No Result
View All Result
Blood Donation Camp Successfully Organised at Mysuru Division
English Articles

Blood Donation Camp Successfully Organised at Mysuru Division

by ಕಲ್ಪ ನ್ಯೂಸ್
June 16, 2026
0

Kalpa Media House  | Mysuru | South Western Railway, Mysuru Division, organised a Blood Donation Camp in collaboration with Railway...

Read moreDetails
yoga | Participate online

India Launches Worldwide Campaign for International Day of Yoga 2026

June 13, 2026
Elderly Woman Found Dead

Elderly Woman Found Dead in Decomposed State in Shivamogga

June 13, 2026
AN-32 of IAF has met with an accident in Assam

IAF Aircraft Crashes During Landing at Jorhat Airbase in Assam

June 13, 2026
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ

Ramachandrapura Seer Hails PM Narendra Modi’s Leadership

June 10, 2026
  • Advertise With Us
  • Grievances
  • About Us
  • Contact Us
Thursday, June 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಚುನಾವಣಾ ವ್ಯವಸ್ಥೆ ಬದಲಾಗದೆ ಸಂವಿಧಾನದ ಮೌಲ್ಯಗಳ ಕುಸಿತ ತಪ್ಪಿಸಲಾಗದು: ಸಿದ್ದರಾಮಯ್ಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 25, 2021
in ಬೆಂಗಳೂರು ನಗರ
0
ಬಿಜೆಪಿಯವರು ಸ್ವಾತಂತ್ರ ಹೋರಾಟದಲ್ಲಿ ಪಾಲ್ಗೊಂಡಿಲ್ಲ, ಕಾಂಗ್ರೆಸ್ ಮಾತ್ರ ತ್ಯಾಗ ಬಲಿದಾನ ಮಾಡಿದೆ: ಸಿದ್ದರಾಮಯ್ಯ

Internet Photo

Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಚುನಾವಣಾ ವ್ಯವಸ್ಥೆ ಬದಲಾಗದ ಹೊರತು ಸಂವಿಧಾನದ ಮೌಲ್ಯಗಳ ಕುಸಿತ ತಪ್ಪಿಸಲು ಸಾಧ್ಯವಿಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಕಾಮನ್‌ವೆಲ್ತ್ ಸಂಸದೀಯ ಸಂಘದ ಕರ್ನಾಟಕ ಶಾಖೆ ಆಯೋಜಿಸಿದ್ದ ಸಂಸದೀಯ ಮೌಲ್ಯಗಳ ಕುಸಿತವನ್ನು ತಡೆಯುವ ನಿಟ್ಟಿನಲ್ಲಿ ಒಂದು ಆತ್ಮಾವಲೋಕನ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ಸಿದ್ದರಾಮಯ್ಯ ಮಾತನಾಡಿ, ಮಾತೃ ಹೃದಯದವರು ಮಾತ್ರ ಸಂವಿಧಾನವನ್ನು ಅರ್ಥ ಮಾಡಿಕೊಳ್ಳಬಲ್ಲರು. ಕಲಾಪ ಎಷ್ಟು ದಿನ ನಡೆಸಬೇಕು ಎಂಬ ಸ್ವಾತಂತ್ಯ ವಿಧಾನಸಭೆಯ ಅಧ್ಯಕ್ಷರು ಮತ್ತು ವಿಧಾನ ಪರಿಷತ್ತಿನ ಸಭಾಪತಿಗಳಿಗೆ ಇರಬೇಕು ಎಂದು ಹೇಳಿದರು.


ಕಲಾಪದ ಅವಧಿಯನ್ನು ಸರ್ಕಾರ ನಿರ್ಧಾರ ಮಾಡುವುದು ಸರಿಯಲ್ಲ. ವರ್ಷದಲ್ಲಿ 60 ದಿನಗಳ ಕಾಲ ಕಲಾಪ ನಡೆಯಬೇಕು ಎಂಬ ನಿಯಮವಿದೆ. ಆ ನಿಯಮಕ್ಕೆ ಬದ್ಧವಾಗಿ ಎಲ್ಲರೂ ನಡೆದುಕೊಳ್ಳಬೇಕು ಎಂದರು.

ದೇವರಾಜ ಅರಸು ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ 1973ರಲ್ಲಿ ಕರ್ನಾಟಕ ಭೂ ಸುಧಾರಣಾ ಕಾಯಿದೆಗೆ ತಿದ್ದುಪಡಿ ತರಲಾಯಿತು. ಇದಕ್ಕೆ ಪೂರ್ವಭಾವಿಯಾಗಿ ವಿಧಾನ ಮಂಡಲದ ಉಭಯ ಸದನಗಳಲ್ಲಿ ಭಾರಿ ಚರ್ಚೆ ನಡೆದಿತ್ತು. ಆದರೆ ಈಗ ತರಾತುರಿಯಲ್ಲಿ ಕಾನೂನುಗಳನ್ನು ರೂಪಿಸಿ ಜಾರಿಗೆ ತರಲಾಗುತ್ತಿದೆ. ಒಂದೇ ದಿನದಲ್ಲಿ ಸುಗ್ರೀವಾಜ್ಞೆ ಹೊರಡಿಸಲಾಗುತ್ತಿದೆ. ಯಾವುದೇ ಕಾನೂನು ಜಾರಿಗೆ ತರುವ ಮುನ್ನ ಚರ್ಚೆಗೆ ಅವಕಾಶ ಸಿಗಲೇಬೇಕು. ಅವಸರ ಮಾಡಬಾರದು. ವಿಧೇಯಕ ಮಂಡಿಸಿ ಒಂದೇ ದಿನದಲ್ಲಿ ಅಂಗೀಕಾರ ಮಾಡಿ, ಸುಗ್ರೀವಾಜ್ಞೆ ಜಾರಿಗೆ ತರುವ ಅಭ್ಯಾಸ ಒಳ್ಳೆಯದಲ್ಲ ಎಂದು ಅಭಿಪ್ರಾಯಪಟ್ಟರು.


ಶಾಸಕರು ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಜಿಗಿಯುವುದನ್ನು ತಪ್ಪಿಸಲು ಕಾನೂನು (ಹತ್ತನೇ ಷೆಡ್ಯೂಲ್) ಜಾರಿಗೆ ತರಲಾಯಿತು. ಆದರೂ ಶಾಸಕರು ರಂಗೋಲಿ ಕೆಳಗೆ ನುಸುಳುತ್ತಾರೆ. ಚುನಾವಣಾ ವ್ಯವಸ್ಥೆಯಲ್ಲಿ ಬದಲಾವಣೆ ತರದಿದ್ದರೆ ಸಂವಿಧಾನದ ಮೌಲ್ಯಗಳು ಕುಸಿಯುವುದನ್ನು ತಪ್ಪಿಸಲು ಸಾಧ್ಯವಿಲ್ಲ. ಚುನಾವಣೆಯಲ್ಲಿ ಕಣಕ್ಕಿಳಿಯುವ ಅಭ್ಯರ್ಥಿಗಳಿಗೆ ಮೊದಲು ಮತದಾರರೇ ಹಣ ಕೊಟ್ಟು ಆಶೀರ್ವಾದ ಮಾಡುತ್ತಿದ್ದರು. ಆದರೆ ಪರಿಸ್ಥಿತಿ ಈಗ ಬದಲಾಗಿದೆ. ಮತ ಕೇಳಬೇಕಾದರೆ ಹಣ ಕೊಡಲೇಬೇಕು. ಕ್ರಿಮಿನಲ್‌ಗಳು, ಶ್ರೀಮಂತರು, ಹೊಡಿ-ಬಡಿ ಸಂಸ್ಕೃತಿಯವರು ಚುನಾವಣಾ ಕಣಕ್ಕೆ ಇಳಿಯುತ್ತಿದ್ದಾರೆ. ಚುನಾವಣೆ ಎಂದರೆ ವ್ಯಾಪಾರ, ಹರಾಜು ಎನ್ನುವಂತಾಗಿದೆ. ಹೀಗಾಗಿ ಚುನಾವಣಾ ವ್ಯವಸ್ಥೆ ದಿಕ್ಕಾಪಾಲಾಗಿದೆ. ಮಾಧ್ಯಮದವರಂತೂ ಉದ್ಯಮಿ, ಪತ್ರಕರ್ತ, ರಾಜಕಾರಣಿ ಹೀಗೆ ಎಲ್ಲ ಪಾತ್ರ ನಿಭಾಯಿಸುವುದರಿಂದ ನಾಲ್ಕನೇ ಆಧಾರ ಸ್ಥಂಭ ಗಟ್ಟಿಯಾಗಿ ನಿಲ್ಲುವುದಾದರೂ ಹೇಗೆ ಎಂದರು.

ಚುನಾವಣೆಯನ್ನು ಸರ್ಕಾರವೇ ನಡೆಸುವ ವ್ಯವಸ್ಥೆ ಜಾರಿಗೆ ತರಬೇಕು. ನಾಮಪತ್ರ ಸಲ್ಲಿಸಿದ ಬಳಿಕ ಅಭ್ಯರ್ಥಿಗಳು ಪ್ರಚಾರಕ್ಕೆ ಹೋಗುವಂತಿರಬಾರದು. ಅಧಿಕಾರಕ್ಕಾಗಿ ನಾವೇ ಮೌಲ್ಯಗಳನ್ನು ನಾಶ ಮಾಡುತ್ತಿದ್ದೇವೆ. ಸುಧಾರಣೆ ತರಬೇಕಾದರೆ ರಾಜಕೀಯ ಪಕ್ಷಗಳಲ್ಲಿಯೂ ಬದಲಾವಣೆ ಅನಿವಾರ್ಯ. ಷೆಡ್ಯೂಲ್ 10 ಇನ್ನಷ್ಟು ಬಲಗೊಳ್ಳಬೇಕು. ಪಕ್ಷಾಂತರದ ಪಿಡುಗನ್ನು ಕಡ್ಡಾಯವಾಗಿ ತಪ್ಪಿಸಬೇಕು. ಈ ಯಾವುದೂ ಆಗದೆ ಸಂವಿಧಾನದ ಮೌಲ್ಯಗಳನ್ನು ರಕ್ಷಿಸುವುದು ಹೇಗೆ ಎಂದು ಪ್ರಶ್ನಿಸಿದರು.

ಮೂರು ಹೆತ್ತವಳು ಆರು ಹೆತ್ತವಳಿಗೆ ಬುದ್ಧಿ ಹೇಳಿದಳು ಎಂಬ ಗಾದೆ ಮಾತಿದೆ. ಶಾಸಕರೇ ವಿಧಾನಸಭೆ, ವಿಧಾನ ಪರಿಷತ್ತಿನಲ್ಲಿ ಕೂರುವುದಿಲ್ಲ. ವಾಟಾಳ್ ನಾಗರಾಜ್ ಅವರು ಶಾಸಕರಾಗಿದ್ದಾಗ ಬೆಳಗ್ಗೆ ಬಂದರೆ ಕಲಾಪ ಮುಗಿಯುವವರೆಗೆ ಹೋಗುತ್ತಿರಲಿಲ್ಲ. ಸಚಿವರೇ ಈಗ ಕಲಾಪದಲ್ಲಿ ಭಾಗವಹಿಸುವುದಿಲ್ಲ. ಇನ್ನು ಶಾಸಕರಿಗೆ ಬುದ್ಧಿ ಹೇಳುವುದಾದರೂ ಹೇಗೆ? ಸಂಸದೀಯ ವ್ಯವಸ್ಥೆ ನಮ್ಮ ದೇಶದಕ್ಕೆ ಹೊಸದೇನೂ ಅಲ್ಲ. ಬುದ್ಧ ಮತ್ತು ಬಸವಣ್ಣನವರ ಕಾಲದಲ್ಲಿಯೇ ಸಂಸದೀಯ ವ್ಯವಸ್ಥೆ ಇತ್ತು. ಈ ಕಾರಣಕ್ಕಾಗಿಯೇ ಬಸವಣ್ಣನವರು ಅನುಭವ ಮಂಟಪ ಸ್ಥಾಪನೆ ಮಾಡಿದರು. ಮೌಲ್ಯಗಳ ರಕ್ಷಣೆ ಮತ್ತು ಪ್ರಜಾಪ್ರಭುತ್ವದ ಉಳಿವಿನ ಬಗ್ಗೆ ಗಂಭೀರವಾದ ಚಿಂತನೆ ನಡೆಯಬೇಕು. ಸರ್ವಾಧಿಕಾರಿ ಮನಸ್ಥಿತಿ ನಮ್ಮಿಂದ ದೂರ ಆಗಬೇಕು. ನಾನೂ ಸೇರಿದಂತೆ ಇದು ಎಲ್ಲರ ಜವಾಬ್ದಾರಿ ಎಂದು ತಿಳಿಸಿದರು.

ಮೌಲ್ಯಗಳು ಕುಸಿಯುತ್ತಿರುವುದಂತೂ ನಿಜ. ಅದನ್ನು ತಡೆಯಲೇಬೇಕು. ಕೇವಲ ರಾಜಕೀಯವಾಗಿ ಮಾತ್ರವಲ್ಲ, ಸಾಮಾಜಿಕವಾಗಿಯೂ ಪ್ರಜಾಪ್ರಭುತ್ವ ಇರಬೇಕು. ಸ್ವಾತಂತ್ರ್ಯ, ಸಮಾನತೆ ಹಾಗೂ ಭಾತೃತ್ವವನ್ನು ಪ್ರಜಾಪ್ರಭುತ್ವ ಒಳಗೊಂಡಿರಬೇಕು. ಈ ಯಾವುದೂ ಇಲ್ಲದಿದ್ದರೆ ದೇಶ ಉಳಿಯುವುದು ಕಷ್ಟ. ಯಾವುದೇ ಬದಲಾವಣೆಗೆ ನಮ್ಮ ಸಂಪೂರ್ಣ ಸಹಮತ ಇದೆ. ಓದಿಕೊಂಡವರು ಹೆಚ್ಚಿನ ಸಂಖ್ಯೆಯಲ್ಲಿ ವಿಧಾನಸಭೆ, ವಿಧಾನ ಪರಿಷತ್ತು ಮತ್ತು ಸಂಸತ್ತಿಗೆ ಆಯ್ಕೆಯಾಗಿ ಬರಬೇಕು ಎಂಬುದೇನೋ ಸರಿ. ಆದರೆ ಜಾತಿ ಭಾವನೆ ವಿದ್ಯಾವಂತರಲ್ಲಿಯೇ ಹೆಚ್ಚು. ಇದು ಅತ್ಯಂತ ಅಪಾಯಕಾರಿ ಎಂದು ಆತಂಕ ವ್ಯಕ್ತಪಡಿಸಿದರು.

ವರದಿ: ಡಿ.ಎಲ್. ಹರೀಶ್, ಬೆಂಗಳೂರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: BangaloreConstitutionElectoral systemKannada News WebsiteLatest News KannadaPolitical NewsState Newsಚುನಾವಣಾ ವ್ಯವಸ್ಥೆಬೆಂಗಳೂರುಸಂವಿಧಾನಸಿದ್ದರಾಮಯ್ಯ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗಮನಿಸಿ! ಆನವಟ್ಟಿಯಲ್ಲಿ ವಾರಸುದಾರರಿಲ್ಲದ ವಾಹನ ಹರಾಜು ಹಾಕಲಾಗುತ್ತಿದೆ: ನೀವೂ ಪಾಲ್ಗೊಳ್ಳಬಹುದು

Next Post

ಸಾಗರ: ಫೆ.27ರಂದು ನೂತನ ಲಾಂಚ್ ಲೋಕಾರ್ಪಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸಾಗರ: ಫೆ.27ರಂದು ನೂತನ ಲಾಂಚ್ ಲೋಕಾರ್ಪಣೆ

ಸಾಗರ: ಫೆ.27ರಂದು ನೂತನ ಲಾಂಚ್ ಲೋಕಾರ್ಪಣೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ರಸ್ತೆ ಬಿಟ್ಟು ಫುಟ್‌ಪಾತ್‌ಗೆ ನುಗ್ಗಿದ ಕಾರು | ಪಾದಚಾರಿ ಮಹಿಳೆಗೆ ಗಂಭೀರ ಗಾಯ

ರಸ್ತೆ ಬಿಟ್ಟು ಫುಟ್‌ಪಾತ್‌ಗೆ ನುಗ್ಗಿದ ಕಾರು | ಪಾದಚಾರಿ ಮಹಿಳೆಗೆ ಗಂಭೀರ ಗಾಯ

June 18, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

June 18, 2026
Rescue of 10 cows being transported illegally in Holehonnur

ಹೊಳೆಹೊನ್ನೂರು | ಅಕ್ರಮವಾಗಿ ಸಾಗಿಸುತ್ತಿದ್ದ 10 ಗೋವುಗಳ ರಕ್ಷಣೆ | ಚಾಲಕ ಮುನೀರ್ ವಶಕ್ಕೆ

June 17, 2026
CMCRI Chitradurga

ಚಿತ್ರದುರ್ಗ | CMCRIನಲ್ಲಿ ತಜ್ಞರ ವಿಶೇಷ ಉಪನ್ಯಾಸ | ವಿದ್ಯಾರ್ಥಿಗಳಿಗೆ ಹೊಸ ದಿಕ್ಕು

June 17, 2026
ಜೆಸಿಐ ಶಿವಮೊಗ್ಗ ರಾಯಲ್ಸ್ ಘಟಕದ ವತಿಯಿಂದ ರಕ್ತದಾನ ಶಿಬಿರ

ಜೆಸಿಐ ಶಿವಮೊಗ್ಗ ರಾಯಲ್ಸ್ ಘಟಕದ ವತಿಯಿಂದ ರಕ್ತದಾನ ಶಿಬಿರ

June 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL